Asia Cup T20 Final: ಭಾರತಕ್ಕೆ ಏಷ್ಯಾ ಕಪ್ "ತಿಲಕ"- ಸೂರ್ಯ ಪಡೆ ಚಾಂಪಿಯನ್
ಭರವಸೆಯ ಬ್ಯಾಟರ್ ತಿಲಕ್ ವರ್ಮಾ ಬಾರಿಸಿದ ಅರ್ಧಶತಕ ಹಾಗೂ ಕುಲ್ ದೀಪ್ ಯಾದವ್ ( 4ವಿಕೆಟ್) ಇವರ ಭರ್ಜರಿ ಆಟದ ನೆರವಿನಿಂದ ಟೀಮ್ ಇಂಡಿಯಾ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳಿಂದ ಪಾಕಿಸ್ತಾನ ತಂಡವನ್ನು ಮಣಿಸಿ, ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಗುರಿಯನ್ನು ಹಿಂಬಾಲಿಸಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (5), ಇವರು ಫಹೀಮ್ ಅಶ್ರಫ್ ತೋಡಿದ ಖೆಡ್ಡಾಗೆ ಬಲಿಯಾದರು. ಭಾರತ 7 ರನ್ ಆಗುವಷ್ಟರಲ್ಲಿ ಒಂದು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ಇವರು 1 ರನ್ ಬಾರಿಸಿದ್ದಾಗ ಇಲ್ಲದ ರನ್ ಹೊಡೆತಕ್ಕೆ ಮುಂದಾಗಿ ಔಟ್ ಆದರು.

ಆರಂಭಿಕ ಆಟಗಾರ ಶುಭಮನ್ ಗಿಲ್ 12 ರನ್ ಬಾರಿಸಿ ಔಟ್ ಅದರು. ಟೀಮ್ ಇಂಡಿಯಾ ಪವರ್ ಪ್ಲೇನಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಭಾರತ 20 ರನ್ ಸೇರಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತು. ಈ ವೇಳೆ ಭರವಸೆಯ ಬ್ಯಾಟರ್ ತಿಲಕ್ ವರ್ಮಾ ಹಾಗೂ ಸಂಜು ಸ್ಯಾಮ್ಸನ್ ಉತ್ತಮ ಆಟವನ್ನು ಪ್ರದರ್ಶಿಸಿದರು. ಈ ಜೋಡಿ ವಿಕೆಟ್ ಬೀಳದಂತೆ ಆಟವಾಡುವಲ್ಲಿ ಸಫಲವಾಯಿತು. ಈ ವೇಳೆ ನಾಲ್ಕನೇ ವಿಕೆಟ್‌ಗೆ ಈ ಜೋಡಿ 57 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಸಂಜು ಸ್ಯಾಮ್ಸನ್ 24 ರನ್ ಬಾರಿಸಿದ್ದಾಗ ಇಲ್ಲದ ಶಾಟ್ ಬಾರಿಸಲು ಹೋಗಿ ಔಟ್ ಅದರು.
ತಿಲಕ್ ವರ್ಮಾ ಅಬ್ಬರ
ಐದನೇ ವಿಕೆಟ್‌ಗೆ ತಿಲಕ್ ವರ್ಮಾ ಹಾಗೂ ಶಿವಂ ದುಬೆ ಜೋಡಿ ಜವಾಬ್ದಾರಿ ಅರಿತು ಬ್ಯಾಟ್ ಮಾಡಿತು. ಆರಂಭದಲ್ಲಿ ಸ್ಟ್ರೈಕ್ ರೋಟೆಷನ್‌ಗೆ ಒತ್ತು ನೀಡಿದ ಜೋಡಿ, ಬಳಿಕ ಕೆಟ್ಟು ಎಸೆತಗಳಲ್ಲಿ ಬಿಗ್ ಹಿಟ್ ಬಾರಿಸಿ ಅಬ್ಬರಿಸಿತು. ಈ ಜೋಡಿ ಸಹ ತಂಡಕ್ಕೆ ಅರ್ಧಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾಯಿತು. ಈ ಜೋಡಿ 40 ಎಸೆತಗಳಲ್ಲಿ 60 ರನ್ ಗಳ ಜೊತೆಯಾಟವನ್ನು ನೀಡಿತು. ಶಿವಂ ದುಬೆ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದರು. ಇವರು 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 33 ರನ್ ಬಾರಿಸಿ ಔಟ್ ಆದರು.
ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 53 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಾಯದಿಂದ 69 ರನ್ ಬಾರಿಸಿ ತಂಡದ ಗೆಲುವಿನ ಮಿಂಚಿದರು. ರಿಂಕು ಸಿಂಗ್ 4 ರನ್ ಬಾರಿಸಿ ಮಿಂಚಿದರು.
ಫರ್ಹಾನ್ ಅರ್ಧಶತಕ
ಟಾಸ್ ಸೊತರೂ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡದ ಆರಂಭಿಕರು ತಂಡಕ್ಕೆ ಭರ್ಜರಿ ಆರಂಭವನ್ನು ನೀಡಿದರು. ಫಖರ್ ಜಮಾನ್ ಹಾಗೂ ಸಾಹಿಬ್‌ಜಾದಾ ಫರ್ಹಾನ್ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಪಾಕ್ ತಂಡ ಬೃಹತ್ ಮೊತ್ತ ಕಲೆ ಹಾಕುವತ್ತ ಚಿತ್ತ ನೆಟ್ಟಿತ್ತು. ಆದರೆ ಇವರ ಆಸೆಗೆ ಭಾರತೀಯ ಬೌಲರ್‌ಗಳು ಬ್ರೇಕ್ ಹಾಕಿದರು. 10ನೇ ಓವರ್ ವರೆಗೂ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದ ಪಾಕ್, ಕೊನೆಯಲ್ಲಿ ಎಡವಿತು.

ಮೊದಲ 10 ಓವರ್‌ಗಳಲ್ಲಿ 87 ರನ್ ಗಳಿಸಿದ್ದ ಪಾಕ್ ನಂತರ ಕೇವಲ 59 ರನ್ ಸಿಡಿಸುವಷ್ಟರಲ್ಲಿ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಪಾಕ್ ತಂಡದ ಪರ ಸಾಹಿಬ್‌ಜಾದಾ ಫರ್ಹಾನ್ (57) ಅರ್ಧಶತಕ ಬಾರಿಸಿ ಮಿಂಚಿದರು. ಆರಂಭಿಕ ಫಖರ್ ಜಮನ್ (46) ರನ್ ಹಿಗ್ಗಿಸುವಲ್ಲಿ ಸಫಲರಾದರು. ಉಳಿದ ಬ್ಯಾಟರ್‌ಗಳು ರನ್ ಬರ ಅನುಭಬಿಸಿದರು. ಅಂತಿಮವಾಗಿ ಪಾಕ್ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಸರ್ವಪತನ ಹೊಂದಿತು.
ಟೀಮ್ ಇಂಡಿಯಾದ ಸ್ಪಿನ್ ಬೌಲರ್ ಕುಲ್‌ದೀಪ್ ಯಾದವ್ 4, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications