ತಿಲಕ್ ವರ್ಮಾಗೆ ಗಾಯ: ಶ್ರೇಯಸ್ ಅಯ್ಯರ್‌ಗೆ ಅವಕಾಶ ಸಾಧ್ಯತೆ
ಟೀಮ್ ಇಂಡಿಯಾ ಇನ್ನೇನು ಕೆಲವೇ ದಿನಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಸೀಮಿತ ಓವರ್‌ಗಳ ಸರಣಿಯನ್ನು ಆಡಲಿದೆ. ಈ ಸರಣಿ ಆರಂಭದಲ್ಲಿ ಏಕದಿನ ಹಾಗೂ ನಂತರದಲ್ಲಿ ಟಿ20 ಪಂದ್ಯಗಳು ನಡೆಯಲಿವೆ. ಎರಡೂ ಸರಣಿಗೂ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಈ ತಂಡದಲ್ಲಿ ಸ್ಥಾನ ಪಡೆದಿದ್ದ ಸದಸ್ಯರೊಬ್ಬರು ಗಾಯಕ್ಕೆ ತುತ್ತಾಗಿರುವುದು ತಂಡಕ್ಕೆ ದೊಡ್ಡ ತಲೆ ನೋವಾಗಿದೆ.
ಟೀಮ್ ಇಂಡಿಯಾದ ಟಿ20 ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಅಭಿಷೇಕ್ ಶರ್ಮಾ ಮುಂಚೂಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರ ನಂತರದ ಸ್ಥಾನದಲ್ಲಿ ತಿಲಕ್ ವರ್ಮಾ ಸ್ಥಾನ ಪಡೆಯುತ್ತಾರೆ. ಇವರು ಇತ್ತೀಚಿನ ದಿನಗಳಲ್ಲಿ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಿರುವ ಆಟಗಾರ. ಇವರು ಮಧ್ಯಮ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದಾರೆ. ಇವರಿಗೆ ಟಿ20 ವಿಶ್ವಕಪ್ ತಂಡದಲ್ಲೂ ಸ್ಥಾನ ನೀಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ತಿಲಕ್ ವರ್ಮಾ ತಂಡದಲ್ಲಿ ಆಯ್ಕೆ ಆಗಿದ್ದಾರೆ. ಆದರೆ ಇವರು ವಿಜಯ್ ಹಜಾರೆ ಟ್ರೋಫಿಯ ವೇಳೆ ಗಾಯಕ್ಕೆ ತುತ್ತಾಗಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ.

ತಿಲಕ್ ವರ್ಮಾ ಗಾಯದ ಸಮಸ್ಯೆಗೆ ಶಸ್ತ್ರ ಚಿಕಿತ್ಸೆ ಅನಿವಾರ್ಯವಾಗಿದೆ ಎಂದು ಬಿಸಿಸಿಐ ವೈದ್ಯರು ತಿಳಿಸಿದ್ದಾರೆ. ಹೊಟ್ಟೆಗೆ ಗಾಯವಾಗಿದ್ದು, ಇವರು ಈ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳಲು 3 ರಿಂದ 4 ವಾರಗಳ ಕಾಲ ಅವಕಾಶ ಬೇಕಾಗುತ್ತದೆ. ಹೀಗಾಗಿ ಇವರು ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಅಲ್ಲದೆ ಇವರು ಟಿ20 ವಿಶ್ವಕಪ್ ವೇಳೆಗೆ ಫಿಟ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ತಿಲಕ್ ವರ್ಮಾ ಅವರು ಗಾಯದಿಂದ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರ ನಡೆದರೆ ಇವರ ಸ್ಥಾನವನ್ನು ತುಂಬುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಕಳೆದ ಕೆಲವು ವರ್ಷಗಳಿಂದ ಟಿ20 ತಂಡದಿಂದ ದೂರ ಉಳಿದಿರುವ ಶ್ರೇಯಸ್ ಅಯ್ಯರ್ ಅವರು ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಶ್ರೇಯಸ್ ಅಯ್ಯರ್ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್, ಈಗ ಚೇತರಿಸಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಅವರು ಚೇತರಿಸಿಕೊಂಡ ಬಳಿಕ ದೇಶೀಯ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ತಂಡದ ಪರ ಆಡಿ ಸೈ ಎನಿಸಿಕೊಂಡಿದ್ದಾರೆ.

ಶ್ರೇಯಸ್ ಅಯ್ಯರ್‌ಗೆ ಅವಕಾಶ
ಶ್ರೇಯಸ್ ಅಯ್ಯರ್ ಅವರು ಟಿ20 ಫಾರ್ಮೆಟ್‌ನಲ್ಲಿ ಮೂರನೇ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಆಡುವ ಕ್ಷಮತೆ ಹೊಂದಿದ್ದಾರೆ. ಇವರು ಸ್ಪಿನ್ ಬೌಲಿಂಗ್ ಸಹ ಚೆನ್ನಾಗಿ ಆಡಲಿದ್ದು, ಮಿಡ್ಲ್ ಓವರ್‌ಗಳಲ್ಲಿ ತಂಡಕ್ಕೆ ನೆರವಾಗಬಲ್ಲರು. ಇವರು ತಂಡಕ್ಕೆ ಸೇರಿದ್ದೇ ಆದಲ್ಲಿ ಟೀಮ್ ಇಂಡಿಯಾದ ಟಾಪ್ ಆರ್ಡರ್‌ಗೆ ಬಲ ಬಂದಂತೆ ಆಗುತ್ತದೆ. ಶ್ರೇಯಸ್ ಅಯ್ಯರ್ ಅವರು ಆಸ್ಟ್ರೇಲಿಯಾ ವಿರುದ್ಧ ಡಿಸೆಂಬರ್ 3, 2023ರಲ್ಲಿ ತಮ್ಮ ಕೊನೆಯ ಟಿ20 ಪಂದ್ಯವನ್ನು ಆಡಿದ್ದರು. ಅಲ್ಲಿಂದ ಇವರು ಚುಟುಕು ಫಾರ್ಮೆಟ್‌ನಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಈಗ ಇವರು ತಂಡ ಸೇರುವ ಕನಸು ಕಾಣುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications