ಭಾರತ ತಂಡದಲ್ಲಿ ಈಗ ಹೊಸ ಶಕೆ ಆರಂಭವಾಗಿದೆ. ಅನುಭವಿ ಆಟಗಾರರು ಟಿ20 ಕ್ರಿಕೆಟ್‌ನಿಂದ ದೂರ ಸರಿದ ಬಳಿಕ, ಯುವ ಆಟಗಾರರು ಅವರ ಸ್ಥಾನ ತುಂಬಲು ಸಿದ್ಧರಾಗಿದ್ದಾರೆ. ಈಗೇನಿದ್ದರೂ ಟೀಮ್ ಇಂಡಿಯಾದಲ್ಲಿ ಯುವಕರದ್ದೇ ಹವಾ. ಸದ್ಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿ ಯುವಕರು ತಮ್ಮ ಧಮಾಕೆದಾರ್ ಪ್ರದರ್ಶನದಿಂದ ತಂಡಕ್ಕೆ ನೆರವಾಗಿದ್ದಾರೆ.
ಕೋಲ್ಕತ್ತಾದಲ್ಲಿ ನಡೆದಿದ್ದ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಮನಮೋಹಕ ಬ್ಯಾಟಿಂಗ್ ನಡೆಸಿ ತಂಡದ ಜಯದಲ್ಲಿ ಮಿಂಚಿದ್ದರು. ಚೆನ್ನೈನಲ್ಲಿ ತಿಲಕ್ ವರ್ಮಾ ಆರ್ಭಟಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಯಾವುದೇ ಒಬ್ಬ ಪ್ಲೇಯರ್ ಮೇಲೆ ಅವಲಂಬಿತವಾಗಿಲ್ಲ ಎಂಬುದನ್ನು ಸಾರಿ ಹೇಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ತಿಲಕ್ ವರ್ಮಾ ಚೆನ್ನೈನಲ್ಲಿ ಆಡಿದ ಧಾಟಿ ಕಂಡು ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

ಟಿ20 ವಿಶ್ವಕಪ್‌ಗೆ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ನಿರತವಾಗಿರುವ ಟೀಮ್ ಇಂಡಿಯಾಕ್ಕೆ ಈಗ ಒಂದೊಂದೆ ಸ್ಲಾಟ್‌ಗಳು ಫಿಲ್ ಆಗುವ ರೀತಿ ಕಾಣುತ್ತಿವೆ. ಆರಂಭದಲ್ಲಿ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಈ ಸ್ಥಾನಕ್ಕೆ ನ್ಯಾಯ ತುಂಬಲಿದ್ದೇವೆ ಎಂದು ಸಾರಿದ್ದರು. ಮೂರನೇ ಸ್ಥಾನದಲ್ಲಿ ಆಡುವುದು ಯಾರು ಎಂಬ ಚಿಂತೆ ಬಹುವಾಗಿ ಅಭಿಮಾನಿಗಳಲ್ಲಿ ಕಾಡಿತ್ತು. ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ನಡುವೆ ಈ ಸ್ಲಾಟ್‌ಗಾಗಿ ಪೈಪೋಟಿ ನಡೆದಿದೆ. ಆದರೆ ಈ ರೇಸ್‌ನಲ್ಲಿ ತಿಲಕ್ ವರ್ಮಾ ಮುಂಚೂಣಿಯಲ್ಲಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಟಿ20 ಸರಣಿಯ ವೇಳೆ ತಮಗೆ ಮೂರನೇ ಕ್ರಮಾಂಕದಲ್ಲಿ ಆಡುವ ಅವಕಾಶವನ್ನು ನೀಡುವಂತೆ ತಿಲಕ್ ವರ್ಮಾ, ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಕೇಳಿಜಹಹಬದ್ರು. ಇವರ ಮನವಿಗೆ ಸಮ್ಮತಿ ಸೂಚಿಸಿದ್ದ ಸೂರ್ಯ ಇವರಿಗೆ ಮೂರನೇ ಕ್ರಮಾಂಕದಲ್ಲಿ ಆಡಲು ಅವಕಾಶ ನೀಡಿದರು. ಇವರು ಈ ಸ್ಥಾನಕ್ಕೆ ನ್ಯಾಯ ಒದಗಿಸುವ ಕಾರ್ಯವನ್ನು ಸಮರ್ಥವಾಗಿ ಮಾಡಿದರು. ದಕ್ಷಿಣ ಆಫ್ರಿಕಾದಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚೂರಿ ಬಾರಿಸಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು.
ಇನ್ನು ಈ ವೇಳೆ ಟೀಮ್ ಇಂಡಿಯಾದಲ್ಲಿ ಸರಣಿಗಳು ನಡೆದಾಗ ಭಾರತದ ಪರ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಮಾಡಿದ್ದರು. ಆದರೆ ಆ ವೇಳೆ ಸೂರ್ಯ ತಮ್ಮ ಘನತೆಗೆ ತಕ್ಕ ಆಟವನ್ನು ಆಡಲಿಲ್ಲ. ಆದರೆ ಚೆನ್ನೈನಲ್ಲಿ ಮತ್ತೆ ತಿಲಕ್‌ಗೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಅವಕಾಶವನ್ನು ನೀಡಲಾಯಿತು. ಈ ವೇಳೆ ಮತ್ತೆ ತಿಲಕ್ ಆಂಕರ್ ರೋಲ್ ಪ್ಲೇ ಮಾಡಿ ತಂಡಕ್ಕೆ ಆಧಾರವಾಗಿದ್ದಾರೆ. ಅಲ್ಲದೆ ತಂಡದ ಜಯದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ತಮಗೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಅವಕಾಶ ನೀಡಿ ತಿಲಕ್ ಸೂಚಿಸುತ್ತಿದ್ದಾರೆ. ಈಗಾಗಲೇ ತಿಲಕ್ 22 ಟಿ20 ಪಂದ್ಯಗಳನ್ನು ಆಡಿದ್ದು ಇದರಲ್ಲಿ 11 ಬಾರಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ, 419 ರನ್ ಸಿಡಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಏಳನೇ ಕ್ರಮಾಂಕದಲ್ಲಿ 238 ರನ್ ಸಿಡಿಸಿದ್ದರು. ಈ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾರೆ.