Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನ್ಯೂಜಿಲೆಂಡ್‌ ವಿರುದ್ಧದ ಸರಣಿಗೂ ಮುನ್ನ ಸ್ಟಾರ್‌ ಪ್ಲೇಯರ್‌ಗೆ ಗಾಯ; ಭಾರತಕ್ಕೆ ಹೆಚ್ಚಿದ ಚಿಂತೆ

ನವದೆಹಲಿ: ಇನ್ನೇನು ಕೆಲವೇ ದಿನಗಳಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಣ ಸೀಮಿತ ಓವರ್‌ಗಳ ಪಂದ್ಯ ಆರಂಭವಾಗಲಿದೆ. ಮೂರು ಏಕದಿನ ಪಂದ್ಯಗಳ ಸರಣಿ ಆರಂಭದಲ್ಲಿ ನಡೆದರೆ, ಬಳಿಕ ಟಿ20 ಸರಣಿಗಳು ನಡೆಯಲಿವೆ. ಈ ಸರಣಿ ಟಿ20 ವಿಶ್ವಕಪ್‌ ದೃಷ್ಟಿಯಿಂದ ಮಹತ್ವ ಪಡೆದಿದೆ. ಟಿ20 ವಿಶ್ವಕಪ್‌ಗೂ ಮುನ್ನ ನ್ಯೂಜಿಲೆಂಡ್‌ ಸರಣಿಯಲ್ಲಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್‌ ಇಲೆವೆನ್‌ ಖಚಿತ ಪಡಿಸಿಕೊಳ್ಳಬಹುದಾಗಿದೆ. ಕಿವೀಸ್‌ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾಕ್ಕೆ ಟೆನ್ಷನ್‌ ಆರಂಭವಾಗಿದೆ. ತಂಡದ ಭರವಸೆಯ ಮಿಡ್ಲ್ ಆರ್ಡರ್‌ ಬ್ಯಾಟರ್‌ ಗಾಯಕ್ಕೆ ತುತ್ತಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತನ್ನ ಬ್ಯಾಟಿಂಗ್ ಮೂಲಕ ಅಬ್ಬರಿಸುತ್ತಿರುವ ಆಟಗಾರರ ಪೈಕಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಹಾಗೂ ಮಧ್ಯಮ ಕ್ರಮಾಂಕದ ತಿಲಕ್ ವರ್ಮಾ ಒಬ್ಬರು. ತಿಲಕ್ ವರ್ಮಾ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ತಿಲಕ್ ವರ್ಮಾ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಈಗ ಇವರು ಹೊಟ್ಟೆಯ ಗಾಯದಿಂದ ಬಳಲುತ್ತಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

Tilak Varma to Miss New Zealand Series Due to Injury Shreyas Iyer Declared Fit for Return

ತಿಲಕ್ ವರ್ಮಾ ಅವರ ಗಾಯಕ್ಕೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿದು ಬಂದಿದೆ. ಈ ಗಾಯದಿಂದ ತಿಲಕ್ ವರ್ಮಾ ಚೇತರಿಸಿಕೊಳ್ಳಲು ಮೂರರಿಂದ ನಾಲ್ಕು ವಾರ ತೆಗೆದುಕೊಳ್ಳಬಹುದು. ಇವರು ನ್ಯೂಜಿಲೆಂಡ್‌ ವಿರುದ್ದದ ಸರಣಿಯನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆ ಇದೆ. ಇವರು ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ಸಂಪೂರ್ಣವಾಗಿ ಫಿಟ್ ಆಗುವ ನಿರೀಕ್ಷೆಇದೆ.

ಗಾಯ ಪತ್ತೆ ಆಗಿದ್ದು ಹೇಗೆ?

ತಿಲಕ್ ವರ್ಮಾ ಸದ್ಯ ದೇಶೀಯ ವಿಜಯ್ ಹಜಾರೆ ಟೂರ್ನಿಯಲ್ಲಿ ತಿಲಕ್ ವರ್ಮಾ ಕಣಕ್ಕೆ ಇಳಿದಿದ್ದಾರೆ. ಈ ವೇಳೆ ರಾಜ್‌ಕೋಟ್‌ನಲ್ಲಿ ಪಂದ್ಯವನ್ನು ಆಡುವಾಗ ತಿಲಕ್‌ಗೆ ಗಾಯ ಕಾಣಿಸಿಕೊಂಡಿದೆ. ಬಳಿಕ ಇವರನ್ನು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ವೈದ್ಯರನ್ನು ಸಂಪರ್ಕಿಸಿದರು. ಬಳಿಕ ಇವರು ಸ್ಕ್ಯಾನ್‌ಗೆ ಒಳಪಟ್ಟರು. ಈ ವರದಿಯನ್ನು ಪರಿಶೀಲಿಸಿದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಶಿಫಾರಸು ಮಾಡಿದ್ದಾರೆ. ಈ ಗಾಯ ಮಾಸಲು ಮೂರರಿಂದ ನಾಲ್ಕು ವಾರಗಳ ಅವಶ್ಯಕತೆ ಇದೆ ಎಂದು ತಿಳಿದು ಬಂದಿದೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ತಿಲಕ್ ವರ್ಮಾ ತಂಡದಿಂದ ಹೊರ ನಡೆಯುವ ಸಾಧ್ಯತೆ ದಟ್ಟವಾಗಿದ್ದು, ಇವರಿಗೆ ಬದಲಿ ಆಟಗಾರರನ್ನು ಬಿಸಿಸಿಐ ಘೋಷಿಸಲಿದೆ.

Tilak Varma to Miss New Zealand Series Due to Injury Shreyas Iyer Declared Fit for Return

ಶ್ರೇಯಸ್ ಅಯ್ಯರ್ ಫಿಟ್

ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಮೂರನೇ ಏಕದಿನ ಪಂದ್ಯದ ವೇಳೆ ಕ್ಯಾಚ್‌ ಹಿಡಿಯುವಾಗ ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್‌ ಈಗ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಎಂದು ಬಿಸಿಸಿಐ ವೈದ್ಯಕೀಯ ತಂಡ ಘೋಷಿಸಿದೆ. ಇವರು ಫಿಟ್ ಆಗಿರುವುದು ನಿಜಕ್ಕೂ ಭಾರತ ತಂಡಕ್ಕೆ ಉತ್ತಮ ಸುದ್ದಿಯಾಗಿದೆ. ಇವರು ಮುಂಬೈ ಪರ ವಿಜಯ್ ಹಜಾರೆ ಟ್ರೋಫಿಯ ಲೀಗ್ ಹಂತದ ಕೊನೆಯ ಪಂದ್ಯವನ್ನು ಆಡಲಿದ್ದಾರೆ.

Story first published: Thursday, January 8, 2026, 10:41 [IST]
Other articles published on Jan 8, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+