ಟೀಮ್ ಇಂಡಿಯಾ ಆಲ್‌ರೌಂಡರ್‌ಗೆ ಗಾಯ ತಂಡದಿಂದ ಔಟ್: ಮುಂಬೈ ಇಂಡಿಯನ್ಸ್ ಪ್ಲೇಯರ್‌ಗೆ ಅವಕಾಶ
ಭಾನುವಾರ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಒಬ್ಬ ಗಾಯಕ್ಕೆ ತುತ್ತಾಗಿದ್ದು, ತಂಡದಿಂದ ಹೊರ ನಡೆದಿದ್ದಾರೆ. ಇವರ ಸ್ಥಾನವನ್ನು ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ತುಂಬಲಿದ್ದಾರೆ. ಹಾಗಿದ್ದಾರೆ ಗಾಯಕ್ಕೆ ತುತ್ತಾದವರು ಯಾರು? ತಂಡದಲ್ಲಿ ಆಲ್‌ರೌಂಡರ್ ಸ್ಥಾನವನ್ನು ತುಂಬಿದ ಆಟಗಾರ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಈ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಇತ್ತೀಚಿಗೆ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಆಲ್‌ರೌಂಡರ್. ಕಳೆದ ಕೆಲವು ತಿಂಗಳುಗಳಿಂದ ಆಲ್‌ರೌಂಡರ್ ಶಿವಂ ದುಬೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದ ಆಟಗಾರ. ಟೀಮ್ ಇಂಡಿಯಾದ ಆಲ್‌ರೌಂಡರ್ ಬಾಂಗ್ಲಾದೇಶದ ವಿರುದ್ಧದ ಪಂದ್ಯಕ್ಕೂ ಮುನ್ನ ಶಿವಂ ದುಬೇ ಅಭ್ಯಾಸದ ವೇಳೆ ಗಾಯಕ್ಕೆ ತುತ್ತಾಗಿದ್ದಾರೆ. ಇವರ ಗಾಯದಿಂದ ಟೀಮ್ ಇಂಡಿಯಾ ಬೌಲಿಂಗ್ ವಿಭಾಗಕ್ಕೆ ಕೊಂಚ ಪೆಟ್ಟು ಬಿದ್ದಂತೆ ಆಗಿದೆ.

ದುಬೆ ಬದಲಿಗೆ ಯಾರಿಗೆ ಅವಕಾಶ
ಟೀಮ್ ಇಂಡಿಯಾದ ಭರವಸೆಯ ಆಟಗಾರ ಶಿವಂ ದುಬೆ ಅವರ ಅನುಪಸ್ಥಿತಿಯಲ್ಲಿ ಇಬ್ಬರು ಆಲ್‌ರೌಂಡರ್ ಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಹಾರ್ದಿಕ್ ಪಾಂಡ್ಯ ಮತ್ತು ನಿತೀಶ್ ಕುಮಾರ್ ರೆಡ್ಡಿ ಆಲ್‌ರೌಂಡರ್ ರೂಪದಲ್ಲಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಿವಂ ದುವೆ ಅವರ ಬದಲಿಗೆ ಮುಂಬೈ ಇಂಡಿಯನ್ಸ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ತಿಲಕ್ ವರ್ಮಾ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
ತಿಲಕ್ ವರ್ಮಾ ಐಪಿಎಲ್ 2024 ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಕಳೆದ ಆವೃತ್ತಿಯಲ್ಲಿ ಇವರು ಒಟ್ಟು 416 ರನ್ ಗಳಿಸಿದ್ದಾರೆ. ಉಳಿದಂತೆ ದೇಶೀಯ ಟೂರ್ನಿಯಲ್ಲಿ ತಿಲಕ್ ವರ್ಮಾ ಧಮಾಕೆದಾರ್ ಪ್ರದರ್ಶನ ನೀಡಿದ್ದಾರೆ. ತಿಲಕ್ ವರ್ಮಾ ಭಾನುವಾರ ಬೆಳಗ್ಗೆ ಗ್ವಾಲಿಯರ್‌ನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ತಿಲಕ್ ವರ್ಮಾ ಭಾರತ ಪರ ಇದುವರೆಗೆ 16 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 336 ರನ್ ಗಳಿಸಿದ್ದು, ಇದರಲ್ಲಿ 2 ಅರ್ಧಶತಕಗಳು ಸೇರಿವೆ.

ಈ ಆಲ್‌ರೌಂಡರ್‌ಗೆ ಅವಕಾಶ ಸಾಧ್ಯತೆ
ಶಿವಂ ದುಬೆ ಅವರ ಗಾಯಕ್ಕೆ ತುತ್ತಾಗಿದ್ದರಿಂದ ಇಬ್ಬರು ಆಲ್‌ರೌಂಡರ್‌ಗಳು ಇದ್ದು, ಇಬ್ಬರು ಕಣಕ್ಕೆ ಇಳಿಯುವುದು ಖಚಿತ ಎಂದು ಹೇಳಲಾಗುತ್ತಿದೆ. ಐಪಿಎಲ್‌ನಲ್ಲಿ ಅಬ್ಬರದ ಪ್ರದರ್ಶನ ನೀಡಿರುವ ನಿತೀಶ್ ಕುಮಾರ್ ರೆಡ್ಡಿ ಪದಾರ್ಪಣೆ ಅವಕಾಶವನ್ನು ಪಡೆಯಬಹುದು. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಬ್ಬರಿಸುವ ಕ್ಷಮತೆಯನ್ನು ಹೊಂದಿರುವ ಆಟಗಾರ.
ಬದಲಾದ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications