Tim David: ಆಸ್ಟ್ರೇಲಿಯಾದಲ್ಲಿ ಟಿಮ್ ತಂದ ಖುಷಿ; ಆರ್‌ಸಿಬಿ ಫ್ಯಾನ್ಸ್ ಖುಷ್
ಬಿಗ್ ಬ್ಯಾಶ್ ಲೀಗ್ ಟಿ20 ಟೂರ್ನಿಯಲ್ಲಿ ಟಿಮ್ ಡೇವಿಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಭಿಮಾನಿಗಳ ಸಂತೋಷಕ್ಕೆ ಟಿಮ್ ಡೇವಿಡ್ ಕಾರಣವಾಗಿದ್ದಾರೆ. ಹೊಬಾರ್ಟ್‌ನಲ್ಲಿ ನಡೆದ ಬಿಗ್ ಬ್ಯಾಶ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ ಟಿಮ್ ಡೇವಿಡ್ ಬಿರುಸಿನ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಟಿಮ್ ಡೇವಿಡ್ ಅಬ್ಬರದ ಬ್ಯಾಟಿಂಗ್ ನೋಡಿದ ಆರ್‌ಸಿಬಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ಟಿಮ್ ಡೇವಿಡ್ ಅರ್ಧಶತಕ ಬಲದಿಂದ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ ಹೊಬಾರ್ಟ್ ಹರಿಕೇನ್ಸ್ ಐದು ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಹೊಬಾರ್ಟ್ ಹರಿಕೇನ್ಸ್ ಐದು ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಬೀಗಿದೆ. ಅಡಿಲೇಡ್ ಸ್ಟ್ರೈಕರ್ಸ್ ನೀಡಿದ 187 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಹರಿಕೇನ್ಸ್ ಉತ್ತಮ ಆರಂಭ ಪಡೆದರೂ, ಗೆಲುವಿಗಾಗಿ ಪರದಾಟ ನಡೆಸಿತು. ಈ ಸಂದರ್ಭದಲ್ಲಿ ಉಗ್ರ ರೂಪ ತೋರಿದ ಟಿಮ್ ಡೇವಿಡ್ ಅಡಿಲೇಡ್ ಸ್ಟ್ರೈಕರ್ಸ್ ಬೌಲರ್‌ಗಳ ಬೆವರಿಳಿಸಿದರು.

ಮಧ್ಯಮ ಓವರ್‌ಗಳಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿದ ಟಿಮ್ ಡೇವಿಡ್ 28 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 3 ಬೌಂಡರಿಗಳನ್ನು ಒಳಗೊಂಡಂತೆ 62* ರನ್ ಗಳಿಸಿದರು. ಈ ಮೂಲಕ ಹರಿಕೇನ್ಸ್ ಇನ್ನೂ 8 ಎಸೆತಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದಿತು. ಇದಕ್ಕೂ ಮೊದಲು ಮಿಚೆಲ್ ಓವನ್ ಮತ್ತು ಮ್ಯಾಥ್ಯೂ ವೇಡ್ ಕೇವಲ 28 ಎಸೆತಗಳಲ್ಲಿ 61 ರನ್‌ಗಳ ಆರಂಭಿಕ ಜೊತೆಯಾಟವನ್ನು ಸೇರಿಸುವ ಮೂಲಕ ಹೊಬಾರ್ಟ್ ಹರಿಕೇನ್ಸ್ ಪರ ಉತ್ತಮ ಆರಂಭ ನೀಡಿದರು.
ಆರ್‌ಸಿಬಿ ಫ್ಯಾನ್ಸ್ ಖುಷ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಈ ಬಾರಿ ಟಿಮ್ ಡೇವಿಡ್ ಅವರನ್ನು ಆರ್‌ಸಿಬಿ ಫ್ರಾಂಚೈಸಿ 3 ಕೋಟಿ ರೂ.ಗೆ ಖರೀದಿ ಮಾಡಿದೆ. ಡೇವಿಡ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಮೆಗಾ ಹರಾಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಕಳೆದ ಮೂರು ಆವೃತ್ತಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದರು. ಆದರೆ ಈ ಬಾರಿ ಮುಂಬೈ ಟಿಮ್ ಡೇವಿಡ್ ಅವರನ್ನು ಉಳಿಸಿಕೊಂಡಿರಲಿಲ್ಲ. ಮುಂಬೈ ಇಂಡಿಯನ್ಸ್‌ಗೆ ಸೇರುವ ಮೊದಲು 2021ರಲ್ಲಿ ಡೇವಿಡ್
ಆರ್‌ಸಿಬಿ ತಂಡವನ್ನು ಸೇರಿಕೊಳ್ಳುವ ಮೂಲಕ ತಮ್ಮ ಐಪಿಎಲ್ ವೃತ್ತಿಜೀವನವನ್ನು ಆರಂಭಿಸಿದ್ದರು.
ಇದೀಗ ಆರ್‌ಸಿಬಿ ತಂಡಕ್ಕೆ ಮರಳಿ ಬಂದಿರುವ ಟಿಮ್ ಡೇವಿಡ್ ಅವರಿಂದ ಬೆಟ್ಟದಷ್ಟು ನಿರೀಕ್ಷೆಗಳನ್ನು ಅಭಿಮಾನಿಗಳು ಇಟ್ಟುಕೊಂಡಿದ್ದಾರೆ. ದಿನೇಶ್ ಕಾರ್ತಿಕ್ ನಿವೃತ್ತಿ ನಂತರ ಆರ್‌ಸಿಬಿ ಕೆಳ ಕ್ರಮಾಂಕದಲ್ಲಿ ಫಿನಿಶರ್ ಪಾತ್ರಕ್ಕೆ ಪ್ರಬಲ ಆಟಗಾರನ ಹುಡುಕಾಟದಲ್ಲಿತ್ತು. ಈ ಜಾಗಕ್ಕೆ ಇದೀಗ ಟಿಮ್ ಡೇವಿಡ್ ಫಿಟ್ ಆಗಿದ್ದು, ಆರ್‌ಸಿಬಿ ಅಭಿಮಾನಿಗಳು ಆಸ್ಟ್ರೇಲಯಾ ಸ್ಟಾರ್ ಆಲ್‌ರೌಂಡರ್ ಬ್ಯಾಟಿಂಗ್ ನೋಡಿ ಕಣ್ತುಂಬಿಕೊಳ್ಳಲು ಸಜ್ಜಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications