ವಿಂಡೀಸ್ ವಿರುದ್ಧ RCB ಬ್ಯಾಟರ್ ಸ್ಫೋಟಕ ಶತಕ: 6 ಬೌಂಡರಿ, 11 ಸಿಕ್ಸರ್
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಭರ್ಜರಿ ಪ್ರವಾಸದಲ್ಲಿದೆ. ಮೊದಲು ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಸಾಧಿಸಿರುವ ಆಸೀಸ್, ಈಗ ಟಿ20 ಸರಣಿಯಲ್ಲೂ ತನ್ನ ಆರ್ಭಟವನ್ನು ಮುಂದುವರೆಸಿದೆ. ಶುಕ್ರವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ವಿಂಡೀಸ್ ತಂಡವನ್ನು ಮಣಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡದ ಸ್ಟಾರ್ ಆಲ್‌ರೌಂಡರ್ ಟೀಮ್ ಡೇವಿಡ್ ಅಬ್ಬರದ ಪ್ರದರ್ಶನ ನೀಡಿ ಗೆಲುವಿನಲ್ಲಿ ಮಿಂಚಿದ್ದಾರೆ.
ಮೊದಲು ಬ್ಯಾಟ್ ಮಾಡಿದ ವಿಂಡೀಸ್ ನಾಯಕ ಶಾಯ್ ಹೋಪ್ 57 ಎಸೆತಗಳಲ್ಲಿ 8 ಬೌಂಡರಿ, 6 ಸಿಕ್ಸರ್ ಸಹಾಯದಿಂದ ಅಜೇಯ 102 ರನ್ ಬಾರಿಸಿದರು. ಇನ್ನು ಆರಂಭಿಕ ಆಟಗಾರ ಬ್ರಾಡನ್ ಕಿಂಗ್ 3 ಬೌಂಡರಿ, 6 ಸಿಕ್ಸರ್ ಸಹಾಯದಿಂದ 62 ರನ್ ಸಿಡಿಸಿದರು. ಇವರಿಬ್ಬರ ಭರ್ಜರಿ ಆಟದ ನೆರವಿನಿಂದ ವಿಂಡೀಸ ಮೊದಲ ವಿಕೆಟ್‌ಗೆ 125 ರನ್ ಸೇರಿಸಿತು. ಅಂತಿಮವಾಗಿ ವಿಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 214 ರನ್ ಸಿಡಿಸಿತು.

ಸವಾಲಿನ ಗುರಿಯನ್ನು ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡದ ಆರಂಭ ಸಾಧಾರಣವಾಗಿತ್ತು. ನಾಯಕ ಮಿಚೆಲ್ ಮಾರ್ಷ (22) ಹಾಗೂ ಗ್ಲೇನ್ ಮ್ಯಾಕ್ಸ್‌ವೆಲ್ (20) ಜೋಡಿ 30 ರನ್‌ಗಳ ಜೊತೆಯಾಟವನ್ನು ನೀಡಿತು. ಜೋಶ್ ಇಂಗ್ಲೀಷ್ (15), ಕ್ಯಾಮರೂನ್ ಗ್ರೀನ್ (11) ತಂಡದ ಪರ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಐದನೇ ವಿಕೆಟ್‌ಗೆ ಟೀಮ್ ಡೇವಿಡ್ ಹಾಗೂ ಮಿಚೆಲ್ ಓವನ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿ ತಂಡಕ್ಕೆ ಆಸರೆಯಾಯಿತು.
ವೇಗದ ಶತಕ
ಈ ಪಂದ್ಯದಲ್ಲಿ ಆಸೀಸ್ ಬ್ಯಾಟರ್ ಟೀಮ್ ಡೇವಿಡ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಇವರು ಈ ಪಂದ್ಯಲ್ಲಿ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ ಶತಕ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕಗೆ ತಮ್ಮದಾಗಿಸಿಕೊಂಡಿದ್ದಾರೆ. ಈ ಅರ್ಧಶತಕದ ಬಳಿಕ ಟೀಮ್ ಡೇವಿಡ್ ತಮ್ಮ ಸ್ಫೋಟಕ ಬ್ಯಾಟರ್ ಅಬ್ಬರಿಸಿದರು. ಇವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೊದಲ ಶತಕ ಬಾರಿಸಿದರು.
ಟೀಮ್ ಡೇವಿಡ್ 37 ಎಸೆತಗಳಲ್ಲಿ 6 ಬೌಂಡರಿ, 11 ಸಿಕ್ಸರ್ ಸಹಾಯದಿಂದ ಅಜೇಯ 102 ರನ್ ಬಾರಿಸಿದರು. ಈ ಮೂಲಕ ಆಸ್ಟ್ರೇಲಿಯಾ ಪರ ಟಿ20 ಶತಕ ಬಾರಿಸಿದ ವೇಗದ ಬ್ಯಾಟರ್ ಎಂಬ ಬ್ಯಾಟರ್ ಎಂಬ ಖ್ಯಾತಿ ತಮ್ಮದಾಗಿಸಿಕೊಂಡರು. ಇವರು ಭಾರತದ ಅಭಿಷೇಕ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದರು. ಆಸ್ಟ್ರೇಲಿಯಾ ಈ ಪಂದ್ಯವನ್ನು 16. 1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಮುಟ್ಟಿತು. ಈ ಮೂಲಕ ಆಸೀಸ್ ಸರಣಿಯಲ್ಲಿ ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತಮ್ಮ ವಶಕ್ಕೆ ಪಡೆದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications