Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Tim Southee: 16 ವರ್ಷಗಳ ಟಿಮ್ ಸೌಥಿ ಟೆಸ್ಟ್ ಪಯಣ ಅಂತ್ಯ; ಹೇಗಿದೆ ವೃತ್ತಿಜೀವನ?

ನ್ಯೂಜಿಲೆಂಡ್‌ ತಂಡದ ಸ್ಟಾರ್ ವೇಗದ ಬೌಲರ್ ಟಿಮ್ ಸೌಥಿ ಅವರು ತಮ್ಮ 16 ವರ್ಷಗಳ ಟೆಸ್ಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಹ್ಯಾಮಿಲ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಟಿಮ್ ಸೌಥಿ ತಮ್ಮ ವೃತ್ತಿಜೀವನದ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 423 ರನ್‌ಗಳ ದಾಖಲೆಯ ಗೆಲುವನ್ನು ನ್ಯೂಜಿಲೆಂಡ್ ಸಾಧಿಸಿದೆ. ನ್ಯೂಜಿಲೆಂಡ್ ತಂಡದ ಬೌಲಿಂಗ್ ವಿಭಾಗವನ್ನು ಟಿಮ್ ಸೌಥಿ ದೀರ್ಘಕಾಲದವರೆಗೆ ಮುನ್ನಡೆಸಿದರು. ಇದೀಗ ಟಿಮ್ ಸೌಥಿ ಅವರ ಅನುಪಸ್ಥಿಯಲ್ಲಿ ನ್ಯೂಜಿಲೆಂಡ್ ತಂಡ ಮುಂದಿನ ಸವಾಲುಗಳನ್ನು ಎದುರಿಸಲು ಸಜ್ಜಾಗುತ್ತಿದೆ.

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಿತು. ಈ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ಮೊದಲೆರಡು ಪಂದ್ಯಗಳನ್ನು ಗೆದ್ದು 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯವನ್ನು 8 ವಿಕೆಟ್‌ಗಳಿಂದ ಮತ್ತು ಎರಡನೇ ಪಂದ್ಯವನ್ನು 323 ರನ್‌ಗಳಿಂದ ಗೆದ್ದಿತು. ಹೀಗಾಗಿ ನ್ಯೂಜಿಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಾರಿದೆ. ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ ಟಿಮ್ ಸೌಥಿ ವಿಶೇಷ ದಾಖಲೆ ಸೃಷ್ಟಿಸಿದರು.

Tim Southee Announces Retirement from Test Cricket After Record Victory against England

ಟೆಸ್ಟ್ ಕ್ರಿಕೆಟ್‌ನಲ್ಲಿ ಟಿಮ್ ಸೌಥಿ ಅವರು ವೆಸ್ಟ್ ಇಂಡೀಸ್‌ನ ಮಾಜಿ ಸ್ಪೋಟಕ ಬ್ಯಾಟರ್ ಕ್ರಿಸ್ ಗೇಲ್ ದಾಖಲೆಯನ್ನು ಸರಿಗಟ್ಟಿದರು. ಇಂಗ್ಲೆಂಡ್ ವಿರುದ್ಧ ಕೊನೆ ಟೆಸ್ಟ್ ಪಂದ್ಯದಲ್ಲಿ ಸೌಥಿ ಮೂರು ಸಿಕ್ಸರ್ ಬಾರಿಸುವ ಮೂಲಕ ಈ ಸಾಧನೆ ಮಾಡಿದರು. ಟೆಸ್ಟ್‌ ಕ್ರಿಕೆಟ್‌ನಲ್ಲಿ ಕ್ರಿಸ್ ಗೇಲ್ ಬಾರಿಸಿದ 98 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಲ್ ದಾಖಲೆ ಮಾತ್ರವಲ್ಲದೆ, ಆಸ್ಟ್ರೇಲಿಯಾದ ದಿಗ್ಗಜ ವಿಕೆಟ್‌ಕೀಪರ್-ಬ್ಯಾಟರ್ ಆಡಮ್ ಗಿಲ್‌ಕ್ರಿಸ್ಟ್ ದಾಖಲೆಯನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದ್ದರು. ಆದರೆ, ಅವರಿಂದ ಗಿಲ್‌ಕ್ರಿಸ್ಟ್ ದಾಖಲೆ ಬ್ರೇಕ್ ಮಾಡಲು ಸಾಧ್ಯವಾಗಲಿಲ್ಲ.

ಟಿಮ್ ಸೌಥಿ ಟೆಸ್ಟ್ ವೃತ್ತಿಜೀವನ

ಟಿಮ್ ಸೌಥಿ ಅವರು 2008 ರಲ್ಲಿ ಇಂಗ್ಲೆಂಡ್ ವಿರುದ್ಧ ಮೆಕ್ಲೀನ್ ಪಾರ್ಕ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಇದೀಗ ಅದೇ ತಂಡದ ವಿರುದ್ಧ ಕೊನೆಯ ಟೆಸ್ಟ್ ಕೂಡ ಆಡಿದ ದಾಖಲೆ ಮಾಡಿದ್ದಾರೆ. ಕೊನೆಯ ಟೆಸ್ಟ್‌ನಲ್ಲಿ ಟಿಮ್ ಸೌಥಿ ಅವರ ಪ್ರದರ್ಶನದ ಬಗ್ಗೆ ನೋಡುವುದಾದರೆ, ಅವರು ಮೊದಲ ಇನಿಂಗ್ಸ್‌ನಲ್ಲಿ 11 ಓವರ್‌ಗಳಲ್ಲಿ 46 ರನ್‌ಗಳಿಗೆ ಯಾವುದೇ ವಿಕೆಟ್ ಪಡೆಯಲಿಲ್ಲ. ಆದರೆ ಬ್ಯಾಟಿಂಗ್‌ನಲ್ಲಿ ಅವರು ಕೇವಲ 10 ಎಸೆತಗಳಲ್ಲಿ 3 ಸಿಕ್ಸರ್‌ಗಳನ್ನು ಹೊಡೆಯುವ ಮೂಲಕ 23 ರನ್ ಗಳಿಸಿದರು. ಸೌಥಿ ಎರಡನೇ ಇನಿಂಗ್ಸ್‌ನಲ್ಲಿ 8 ಓವರ್‌ಗಳಲ್ಲಿ 34 ರನ್‌ಗಳಿಗೆ 2 ವಿಕೆಟ್ ಪಡೆದರು. ಒಟ್ಟರೆ ಅವರ ಟೆಸ್ಟ್ ವೃತ್ತಿಜೀವನದಲ್ಲಿ 107 ಟೆಸ್ಟ್ ಪಂದ್ಯಗಳಲ್ಲಿ 30.26 ಸರಾಸರಿಯೊಂದಿಗೆ 391 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅಲ್ಲದೆ, 2245 ರನ್‌ಗಳನ್ನು ಕಲೆ ಹಾಕಿರುವ ಅವರು 7 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಟಿಮ್ ಸೌಥಿ 161 ಏಕದಿನ ಪಂದ್ಯಗಳಲ್ಲಿ 221 ವಿಕೆಟ್ ಪಡೆದರೆ, 125 ಟಿ20 ಪಂದ್ಯಗಳಲ್ಲಿ 164 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸೌಥಿ ಕೂಡ 54 ಐಪಿಎಲ್ ಪಂದ್ಯಗಳನ್ನು ಆಡಿದ್ದು, 47 ವಿಕೆಟ್ ಪಡೆದಿದ್ದಾರೆ. ವಿಶೇಷವೆನೆಂದರೆ ಸೌಥಿ ತನ್ನ ವೃತ್ತಿಜೀವನದಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ನ್ಯೂಜಿಲೆಂಡ್‌ ತಂಡದ ನಾಯಕತ್ವವನ್ನು ವಹಿಸಿದ್ದಾರೆ. ಟಿಮ್ ಸೌಥಿ ಇನ್ನೂ ವೈಟ್ ಬಾಲ್ ಮಾದರಿಯಿಂದ ನಿವೃತ್ತಿಯಾಗಲು ನಿರ್ಧರಿಸಿಲ್ಲ.

Story first published: Tuesday, December 17, 2024, 22:16 [IST]
Other articles published on Dec 17, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+