Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Tim Southee: ವಿದಾಯ ಟೆಸ್ಟ್ ಪಂದ್ಯದಲ್ಲಿ ಟಿಮ್ ಸೌಥಿ ವಿಶೇಷ ದಾಖಲೆ

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಟೆಸ್ಟ್ ಸರಣಿಯ ಮೂರನೇ ಪಂದ್ಯ ಸೆಡನ್ ಪಾರ್ಕ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತ ನ್ಯೂಜಿಲೆಂಡ್ ತಂಡ ಮೊದಲ ದಿನದಾಟಕ್ಕೆ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿದೆ. ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ನ್ಯೂಜಿಲೆಂಡ್ ವೇಗದ ಬೌಲರ್ ಟಿಮ್ ಸೌಥಿ ಈ ಪಂದ್ಯ ವಿಶೇಷ ದಾಖಲೆ ಸೃಷ್ಟಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು ಇಂಡೀಸ್‌ನ ಮಾಜಿ ಬ್ಯಾಟರ್ ಕ್ರಿಸ್ ಗೇಲ್ ಬಾರಿಸಿದ ಸಿಕ್ಸರ್‌ಗಳ ಸಂಖ್ಯೆಯನ್ನು ಸಮಗೊಳಿಸಿದ್ದಾರೆ. ಸೌಥಿ ಮೂರು ಸಿಕ್ಸರ್ ಬಾರಿಸುವ ಮೂಲಕ ಗೇಲ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಗೇಲ್ ದಾಖಲೆ ಮಾತ್ರವಲ್ಲದೆ, ಆಸ್ಟ್ರೇಲಿಯಾದ ದಿಗ್ಗಜ ವಿಕೆಟ್‌ಕೀಪರ್-ಬ್ಯಾಟರ್ ಆಡಮ್ ಗಿಲ್‌ಕ್ರಿಸ್ಟ್ ಅವರನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದ್ದಾರೆ.

Tim Southee creates special record in retirement Test match against England

ಟಿಮ್ ಸೌಥಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಲ್ಲಿ ಇದುವರೆಗೆ ಒಟ್ಟು 774 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ನ್ಯೂಜಿಲೆಂಡ್‌ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಇದೀಗ ಇಂಗ್ಲೆಂಡ್ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಸೌದಿ 10 ಎಸೆತಗಳನ್ನು ಎದುರಿಸಿ ಮೂರು ಸಿಕ್ಸರ್‌ಗಳ ನೆರವಿನಿಂದ 23 ರನ್ ಗಳಿಸಿ ಔಟಾದರು. ಈ ವೇಳೆ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ಕ್ರಿಸ್ ಗೇಲ್ ಬಾರಿಸಿದ 98 ಸಿಕ್ಸರ್‌ಗಳ ದಾಖಲೆಯನ್ನು ಸರಿಗಟ್ಟಿದರು.

ಅಪಾಯದಲ್ಲಿ ಗಿಲ್‌ಕ್ರಿಸ್ಟ್‌ ದಾಖಲೆ

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುವ ಮೊದಲು ಸೌಥಿ ಅವರು ಆಡಮ್ ಗಿಲ್‌ಕ್ರಿಸ್ಟ್ ದಾಖಲೆಯನ್ನು ಮುರಿಯಬಹುದು. ಪ್ರಸ್ತುತ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಸೌದಿ ಬ್ಯಾಟಿಂಗ್‌ಗೆ ಬಂದು ಮೂರು ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾದರೆ, ಅವರು ಟೆಸ್ಟ್‌ನಲ್ಲಿ ಸಿಕ್ಸರ್ ಬಾರಿಸಿದ ಆಡಮ್ ಗಿಲ್‌ಕ್ರಿಸ್ಟ್ ಅವರ ದಾಖಲೆಯನ್ನು ಮುರಿಯಲಿದ್ದಾರೆ. ಇದಲ್ಲದೆ, ಸೌದಿ ಟೆಸ್ಟ್‌ನಲ್ಲಿ ಸಿಕ್ಸರ್‌ಗಳ ಶತಕ ಸಿಡಿಸಿದ ವಿಶ್ವದ ನಾಲ್ಕನೇ ಕ್ರಿಕೆಟಿಗನಾಗಲಿದ್ದಾರೆ. ಗಿಲ್‌ಕ್ರಿಸ್ಟ್ 100 ಸಿಕ್ಸರ್‌ಗಳೊಂದಿಗೆ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Story first published: Saturday, December 14, 2024, 21:51 [IST]
Other articles published on Dec 14, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+