ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸಿಕ್ಸರ್‌ಗಳಲ್ಲಿ ಸಚಿನ್‌ ದಾಖಲೆ ಸರಿಗಟ್ಟಿದ ನ್ಯೂಜಿಲೆಂಡ್‌ನ ಬೌಲರ್‌!

Tim Southee Equals Sachin Tendulkar

ಗಾಲೆ, ಆಗಸ್ಟ್‌ 16: ನ್ಯೂಜಿಲೆಂಡ್‌ ತಂಡದ ವೇಗದ ಬೌಲರ್‌ ಟಿಮ್‌ ಸೌಥೀ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಿಕ್ಸರ್‌ಗಳ ಗಳಿಕೆಯಲ್ಲಿ ಭಾರತ ತಂಡದ ಬ್ಯಾಟಿಂಗ್‌ ದಂತಕತೆ ಹಾಗೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ವಿಶ್ವ ದಾಖಲೆ ಹೊಂದಿರುವ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಗಾಲೆಯಲ್ಲಿ ನಡೆಯುತ್ತಿರುವ ಆತಿಥೇಯ ಶ್ರೀಲಂಕಾ ವಿರುದ್ಧದ ಪ್ರಥಮ ಟೆಸ್ಟ್‌ ಪಂದ್ಯದ ಮೊದಲ ದಿನದಂದು ನ್ಯೂಜಿಲೆಂಡ್‌ನ ಮೊದಲ ಇನಿಂಗ್ಸ್‌ನಲ್ಲಿ 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಸೌಥೀ, ಆಫ್‌ ಸ್ಪಿನ್ನರ್‌ ಧನಂಜಯ ಡಿ'ಸಿಲ್ವಾ ಅವರ ಬೌಲಿಂಗ್‌ನಲ್ಲಿ ಸಿಕ್ಸರ್‌ ಬಾರಿಸುವ ಮೂಲಕ ಈ ದಾಖಲೆ ಬರೆದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಯೂನಿವರ್ಸ್‌ ಬಾಸ್‌!ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಯೂನಿವರ್ಸ್‌ ಬಾಸ್‌!

ತೆಂಡೂಲ್ಕರ್‌ ಮತ್ತು ಸೌಥೀ ಇಬ್ಬರೂ ಕೂಡ ಇದೀಗ ಟೆಸ್ಟ್‌ ಕ್ರಿಕೆಟ್‌ನಲ್ಲಿ ಒಟ್ಟು 69 ಸಿಕ್ಸರ್‌ಗಳನ್ನು ಹೊಂದಿದ್ದಾರೆ. ಅಂದಹಾಗೆ 69 ಸಿಕ್ಸರ್‌ಗಳನ್ನು ಸಿಡಿಸಲು ತೆಂಡೂಲ್ಕರ್‌ 329 ಇನಿಂಗ್ಸ್‌ ಆಡಿದರೆ, ಸೌಥೀ ಕೇವಲ 89 ಇನಿಂಗ್ಸ್‌ಗಳಲ್ಲಿ ಸಚಿನ್‌ಗೆ ಸಮರಾಗಿ ಗುರುತಿಸಿಕೊಂಡಿದ್ದಾರೆ.

ಇನ್ನು ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿರುವ ವಿಶ್ವ ದಾಖಲೆ ನ್ಯೂಜಿಲೆಂಡ್‌ ತಂಡದ ಮಾಜಿ ನಾಯಕ ಬ್ರೆಂಡನ್‌ ಮೆಕಲಮ್‌ ಅವರ ಹೆಸರಲ್ಲಿದೆ. ಮೆಕಲಮ್‌ 176 ಇನಿಂಗ್ಸ್‌ಗಳಲ್ಲಿ 107 ಸಿಕ್ಸರ್‌ ಚೆಚ್ಚಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾಜಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಆಡಮ್‌ ಗಿಲ್‌ಕ್ರಿಸ್ಟ್‌ (100), ವೆಸ್ಟ್‌ ಇಂಡೀಸ್‌ನ ಕ್ರಿಸ್‌ ಗೇಲ್‌ (98), ದಕ್ಷಿಣ ಆಫ್ರಿಕಾದ ಜಾಕ್‌ ಕಾಲಿಸ್‌ ಹಾಗೂ ಭಾರತದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಇದ್ದಾರೆ.

ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 75ರಿಂದ 80 ಶತಕ ದಾಖಲಿಸಲಿದ್ದಾರಂತೆ!ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 75ರಿಂದ 80 ಶತಕ ದಾಖಲಿಸಲಿದ್ದಾರಂತೆ!

ಇದೇ ವೇಳೆ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಭಾಗವಾಗಿ ನಡೆಯುತ್ತಿರುವ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ ತೆಗೆದುಕೊಂಡ ನ್ಯೂಜಿಲೆಂಡ್‌ ತಂಡದ ಮೊದಲ ಇನಿಂಗ್ಸ್‌ನಲ್ಲಿ 249 ರನ್‌ಗಳಿಗೆ ಆಲ್‌ಔಟ್‌ ಆಯಿತು. ಬಳಿಕ ಪ್ರಥಮ ಇನಿಂಗ್ಸ್‌ ಆರಂಭಿಸಿದ ಆತಿಥೇಯ ಶ್ರೀಲಂಕಾ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 267 ರನ್‌ಗಳನ್ನು ಗಳಿಸುವ ಮೂಲಕ 16 ರನ್‌ಗಳ ಅಲ್ಪ ಮುನ್ನಡೆ ಸಾಧಿಸಿತು.

1
46274

ಭಾರತ ವಿರುದ್ಧದ ಟೆಸ್ಟ್‌ ಸರಣಿಗೆ ಗೇಲ್‌ ಬದಲು ದೈತ್ಯನನ್ನು ಕರೆತಂದ ವಿಂಡೀಸ್‌!ಭಾರತ ವಿರುದ್ಧದ ಟೆಸ್ಟ್‌ ಸರಣಿಗೆ ಗೇಲ್‌ ಬದಲು ದೈತ್ಯನನ್ನು ಕರೆತಂದ ವಿಂಡೀಸ್‌!

ನಂತರ ನ್ಯೂಜಿಲೆಂಡ್‌ ತನ್ನ ಎರಡನೇ ಇನಿಂಗ್ಸ್‌ ಆರಂಭಿಸಿ ಪಂದ್ಯದ ಮೂರನೇ ದಿನವಾದ ಶುಕ್ರವಾರ 6 ವಿಕೆಟ್‌ ನಷ್ಟದಲ್ಲಿ 155 ರನ್‌ಗಳನ್ನು ಗಳಿಸಿ 138 ರನ್‌ಗಳ ಮುನ್ನಡೆಯಲ್ಲಿತ್ತು. ಪಂದ್ಯದಲ್ಲಿ ಫಲಿತಾಂಶ ಹೊರಬೀಳುವುದು ಬಹುತೇಕ ಖಾತ್ರಿಯಾಗಿದೆ. ಮಳೆ ಕೂಡ ಪಂದ್ಯದ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಧ್ಯತೆಯೂ ಇದೆ.

Story first published: Friday, August 16, 2019, 16:13 [IST]
Other articles published on Aug 16, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X