For Quick Alerts
ALLOW NOTIFICATIONS  
For Daily Alerts
 

ಹಾರ್ದಿಕ್ ಪಾಂಡ್ಯ ಟೆಸ್ಟ್ ತಂಡದಲ್ಲೂ ಅವಕಾಶ ಪಡೆಯಲಿ: ಮೊಹಮ್ಮದ್ ಕೈಫ್

Time to add Hardik Pandya into Test squad against Australia: Mohammad Kaif

ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಪಾಂಡ್ಯ ಈ ಫಾರ್ಮ್ ಟೀಮ್ ಇಂಡಿಯಾದ ಸರಣಿ ಗೆಲುವಿಗೂ ಕಾರಣವಾಗಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಟೆಸ್ಟ್ ತಂಡಕ್ಕೂ ಸೇರಿಕೊಳ್ಳಲು ಇದು ಉತ್ತಮ ಸಂದರ್ಭ ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ.

ಆಸ್ಟ್ರೆಲಿಯಾ ವಿರುದ್ಧ ಈಗಾಲೇ ನಡೆದ ಮೂರು ಏಕದಿನ ಹಾಗೂ ಎರಡು ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 268 ರನ್ ಸಿಡಿಸಿ ಮಿಂಚುಹರಿಸಿದ್ದಾರೆ. ಹೀಗಾಗಿ ಟೆಸ್ಟ್ ತಂಡದಲ್ಲಿ ಅವಕಾಶವನ್ನು ಪಡೆಯದ ಹಾರ್ದಿಕ್ ಪಾಂಡ್ಯ ಅವರನ್ನು ತಂಡದೊಳಗೆ ಸೇರಿಸಿಕೊಳ್ಳಬೇಕೆಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.

ಟೀಮ್ ಇಂಡಿಯಾದಲ್ಲಿ ಗಾಯಗೊಂಡಿರುವ ಆಟಗಾರರ ಸಂಖ್ಯೆ ಹೆಚ್ಚಿದೆ. ರೋಹಿತ್ ಶರ್ಮಾ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಅಲಭ್ಯವಾರುವುದು ಖಚಿತವಾಗಿದೆ. ಇಶಾಂತ್ ಶರ್ಮಾ ಗಾಯಗೊಂಡಿರುವ ಕಾರಣ ಅಲಭ್ಯರಾಗುತ್ತಿದ್ದಾರೆ. ರವೀಂದ್ರ ಜಡೇಜಾ ಕೂಡ ಗಾಯಗೊಂಡಿದ್ದು ಅವರು ಕೂಡ ಚೇತರಿಕೆಯ ಹಾದಿಯಲ್ಲಿದ್ದಾರೆ. ಆದರೆ ಆರಂಭಿಕ ಟೆಸ್ಟ್ ಪಂದ್ಯಗಳಿಗೆ ಲಬ್ಯರಾಗುವ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಟೆಸ್ಟ್ ಬಳಗದಲ್ಲಿ ಸೇರಿಸಿಕೊಳ್ಳಲು ಒತ್ತಾಯ ಕೇಳಿ ಬರುತ್ತಿದೆ.

"90ಸರಾಸರಿಯ ಸನಿಹದಲ್ಲಿ ಬ್ಯಾಟ್ ಬೀಸಿರುವ ಹಾರ್ದಿಕ್ ಪಾಂಡ್ಯ ಅದ್ಭುತ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿಗೆ ಬೆಂಬಲವಾಗಿ ನಿಂತಿದ್ದಾರೆ. ಹೀಗಾಗಿ ಟೆಸ್ಟ್ ಕ್ರಿಕಟ್ ತಂಡಕ್ಕೂ ಆತನನ್ನು ಸೇರಿಸಿಕೊಳ್ಳುವ ಸಂದರ್ಭ ಇದಾಗಿದೆ" ಎಂದು ಮೊಹಮ್ಮದ್ ಕೈಫ್ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಆಗಿ ಸಾಮಾನ್ಯವಾಗಿ ಕಣಕ್ಕಿಳಿಯುತ್ತಿದ್ದರು. ಆದರೆ ಗಾಯಗೊಂಡು ಚಿಕಿತ್ಸೆ ಪಡೆದುಕೊಂಡ ಬಳಿಕ ಬೌಲಿಂಗ್ ಮಾಡಲು ಸಂಪೂರ್ಣವಾಗಿ ಶಕ್ತರಲ್ಲದ ಕಾರಣ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪೂರ್ಣ ಪ್ರಮಾಣದ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿದಿದ್ದರು.

Story first published: Monday, December 7, 2020, 20:59 [IST]
Other articles published on Dec 7, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+