ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 ಫೈನಲ್: ಸಿಎಸ್‌ಕೆ vs ಕೆಕೆಆರ್, ಪ್ರಿವ್ಯೂ, ಹವಾಮಾನ ವರದಿ, ಸಂಭಾವ್ಯ ತಂಡ

Title: IPL 2021 Final, CSK vs KKR Preview, Playing 11, Dubai Cricket Stadium Pitch Report, Average Score, Weather Report

ಐಪಿಎಲ್ 14ನೇ ಆವೃತ್ತಿಯ ಫೈನಲ್ ಪಂದ್ಯ ಶುಕ್ರವಾರ ನಡೆಯಲಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಪಂದ್ಯದಲ್ಲಿ ಪ್ರಶಸ್ತಿಗಾಗಿ ಸೆಣೆಸಾಟವನ್ನು ನಡೆಸಲಿದೆ. ಎಂಎಸ್ ಧೋನಿ ನೇತೃತ್ವದ ಸಿಎಸ್‌ಕೆ ತಂಡ ಐಪಿಎಲ್‌ನಲ್ಲಿ ನಾಲ್ಕನೇ ಬಾರಿಗೆ ಚಾಂಪಿಯನ್ ಎನಿಸಿಕೊಳ್ಳಲು ಸಜ್ಜಾಗಿದ್ದರೆ ಮತ್ತೊಂದೆಡೆ ಇಯಾನ್ ಮಾರ್ಗನ್ ನೇತೃತ್ವದ ಕೆಕೆಆರ್ ಮೂರನೇ ಟ್ರೋಫಿಯ ಮೇಲೆ ಕಣ್ಣಿಟ್ಟಿದೆ.

ಐಪಿಎಲ್ 2021ರ ಆವೃತ್ತಿಯ ಪ್ಲೇಆಪ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು. ಬುಧವಾರ ರಾತ್ರಿ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಐಪಿಎಲ್‌ 2021: ಕೆಟ್ಟ ದಾಖಲೆ ನಿರ್ಮಿಸಿದ ಡೆಲ್ಲಿ ಕ್ಯಾಪಿಟಲ್ಸ್ಐಪಿಎಲ್‌ 2021: ಕೆಟ್ಟ ದಾಖಲೆ ನಿರ್ಮಿಸಿದ ಡೆಲ್ಲಿ ಕ್ಯಾಪಿಟಲ್ಸ್

ಶುಕ್ರವಾರ ರಾತ್ರಿ ನಡೆಯಲಿರುವ ಫೈನಲ್ ಪಂದ್ಯದ ಕೆಲ ಪ್ರಮುಖ ಮಾಹಿತಿಗಳು ಇಲ್ಲಿದೆ.

ಪಂದ್ಯದ ಸ್ಥಳ, ಸಮಯ ಹಾಗೂ ನೇರ ಪ್ರಸಾರದ ಮಾಹಿತಿ

ಪಂದ್ಯದ ಸ್ಥಳ, ಸಮಯ ಹಾಗೂ ನೇರ ಪ್ರಸಾರದ ಮಾಹಿತಿ

ಐಪಿಎಲ್‌ನ ಫೈನಲ್ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರಪ್ರಸಾರ: ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ. ಅಲ್ಲದೆ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿಯೂ ಲೈವ್‌ಸ್ಟ್ರೀಮಿಂಗ್ ಚಂದಾದಾರರಿಗೆ ಲಭ್ಯವಾಗಲಿದೆ.

ಪಿಚ್ ರಿಪೋರ್ಟ್, ಸರಾಸರಿ ಸ್ಕೋರ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್, ಸರಾಸರಿ ಸ್ಕೋರ್ ಹಾಗೂ ಹವಾಮಾನ ವರದಿ

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಬ್ಯಾಟ್ಸ್‌ಮನ್‌ಗಳಿಗೆ ಹಾಗೂ ಬೌಲರ್‌ಗಳು ಎರಡು ವಿಭಾಗಕ್ಕೂ ಉತ್ತಮ ನೆರವನ್ನು ನೀಡಲಿದೆ. ಈ ಮೈದಾನದಲ್ಲಿ ಈ ಹಿಂದಿನ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಿಡಿಸಿದ 219/2 ಹೈಯೆಸ್ಟ್ ಸ್ಕೋರ್ ಎನಿಸಿದೆ. ಈ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 155 ರನ್. ಮೊದಲಿಗೆ ಬ್ಯಾಟಿಂಗ್ ಮಾಡಿದ ತಂಡ 170 ರನ್‌ಗಳನ್ನು ಗಳಿಸಿದರೆ ರಕ್ಷಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಈ ಮೈದಾನದಲ್ಲಿ ಈವರೆಗೆ ಆಡಿದ ಪಂದ್ಯಗಳ ಪೈಕಿ 62 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಗೆಲುವು ಸಾಧಿಸಿದರೆ 41 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಗೆದ್ದಿದೆ.
ಹವಾಮಾನ ವರದಿ: ದುಬೈನಲ್ಲಿ ಸಾಮಾನ್ಯವಾಗಿರುವಂತಾ ಉಷ್ಣ ವಾತಾವರಣವಿರಲಿದೆ. 30 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ಉಷ್ಣಾಂಶವಿರಲಿದೆ. ಮಳೆಯಾಗುವ ಸಾಧ್ಯತೆ ತುಂಬಾ ಕಡಿಮೆಯಿದೆ. ಅಲ್ಲದೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಬ್ಬನಿ ಪರಿಣಾಮ ಬೀರುವ ಸಾಧ್ಯತೆಯಿಲ್ಲ.

ಸಂಭಾವ್ಯ ತಂಡಗಳು

ಸಂಭಾವ್ಯ ತಂಡಗಳು

ಸಂಭಾವ್ಯ ಆಡುವ ಬಳಗ ಕೆಕೆಆರ್
ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯೋನ್ ಮಾರ್ಗನ್ (ನಾಯಕ), ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುನೀಲ್ ನರೈನ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ ಮತ್ತು ಶಿವಂ ಮಾವಿ

ಸಂಭಾವ್ಯ ಆಡುವ ಬಳಗ ಸಿಎಸ್‌ಕೆ
ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್ ಮತ್ತು ಜೋಶ್ ಹೇಜಲ್‌ವುಡ್

Story first published: Thursday, October 14, 2021, 20:32 [IST]
Other articles published on Oct 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X