For Quick Alerts
ALLOW NOTIFICATIONS  
For Daily Alerts
 

ಚೆನ್ನೈ vs ಮುಂಬೈ: ಪಂದ್ಯದ ಮಾಹಿತಿ, ಪಿಚ್ ವರದಿ, ಸಂಭಾವ್ಯ ತಂಡಗಳು ಹಾಗೂ ನೇರಪ್ರಸಾರದ ಮಾಹಿತಿ

Title: IPL 2021, Match 30, CSK vs MI Preview, Pitch Report, Playing XIs, Live streaming

ಇದೇ ವರ್ಷದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ 29 ಪಂದ್ಯಗಳು ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿದ್ದವು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಕೂಡಲೇ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತೀರ್ಮಾನವನ್ನು ಕೈಗೊಂಡಿತ್ತು.

ಹೀಗೆ ಭಾರತದಲ್ಲಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಇದೇ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಮುಂದುವರೆಸಲಾಗುತ್ತಿದ್ದು ಮೊದಲನೇ ಪಂದ್ಯದಲ್ಲಿಯೇ ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಸೆಣಸಾಟ ನಡೆಸಲಿವೆ. ಹೌದು, ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲನೇ ಭಾಗದಲ್ಲಿ ಕೇವಲ 29 ಪಂದ್ಯಗಳು ಮಾತ್ರ ನಡೆದಿದ್ದು ಇದೀಗ ಭಾನುವಾರದಿಂದ ಆರಂಭವಾಗುತ್ತಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ 31 ಪಂದ್ಯಗಳು ನಡೆಯಲಿವೆ.

ಹೀಗೆ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದ ಮೊದಲನೇ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯದ ಕುರಿತ ಮಾಹಿತಿ ಮುಂದೆ ಇದೆ ಓದಿ..

ಪಂದ್ಯದ ವಿವರ

ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಟೂರ್ನಿಯ 30ನೇ ಪಂದ್ಯವಾಗಿರಲಿದ್ದು ದುಬೈ ನಗರದಲ್ಲಿರುವ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆಆರಂಭವಾಗಲಿದೆ.

ಪಿಚ್ ವರದಿ

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದ್ದು ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ತುಸು ಹೆಚ್ಚಿನ ಶ್ರಮಪಡಬೇಕಾಗುತ್ತದೆ.

ಸಂಭಾವ್ಯ ತಂಡಗಳು:

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ಫಾಫ್ ಡು ಪ್ಲೆಸಿಸ್ / ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಸುರೇಶ್ ರೈನಾ, ಮೊಯೀನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್‌), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಜೋಶ್ ಹೇಜಲ್‌ವುಡ್ / ಇಮ್ರಾನ್ ತಾಹಿರ್

ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಜಸ್ಪ್ರಿತ್ ಬುಮ್ರಾ, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ಮಾರ್ಕೊ ಜಾನ್ಸನ್/ಜಯಂತ್ ಯಾದವ್

ನೇರಪ್ರಸಾರದ ಮಾಹಿತಿ:

ದೂರದರ್ಶನ ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್

ಲೈವ್ ಸ್ಟ್ರೀಮಿಂಗ್: ಡಿಸ್ನೆ + ಹಾಟ್‌ಸ್ಟಾರ್

ಮುಂಬೈ ತಂಡ ಸೇರಿಕೊಂಡ ರೋಹಿತ್ ಶರ್ಮಾ:

ಕ್ವಾರಂಟೈನ್ ನಿಯಮಕ್ಕೆ ಒಳಗಾಗಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಇಂದು ( ಸೆಪ್ಟೆಂಬರ್ 18 ) ಕ್ವಾರಂಟೈನ್ ನಿಯಮವನ್ನು ಯಶಸ್ವಿಯಾಗಿ ಮುಗಿಸಿದ್ದು ಮುಂಬೈ ಇಂಡಿಯನ್ಸ್ ತಂಡದ ಆಟಗಾರರನ್ನು ಸೇರಿಕೊಂಡಿದ್ದಾರೆ. ಹೀಗೆ ಕ್ವಾರಂಟೈನ್ ಮುಗಿಸಿ ತಂಡಕ್ಕೆ ಪ್ರವೇಶವನ್ನು ಮಾಡಿದ ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ನಗುಮುಖದೊಂದಿಗೆ ಪರಸ್ಪರ ಅಪ್ಪುಗೆಯನ್ನು ನೀಡುತ್ತಾ ಸ್ವಾಗತವನ್ನು ಕೋರಿದರು.

Story first published: Saturday, September 18, 2021, 21:47 [IST]
Other articles published on Sep 18, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+