For Quick Alerts
ALLOW NOTIFICATIONS  
For Daily Alerts
 

DC vs SRH: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

Title: IPL 2021, Match 33, DC vs SRH Preview, Pitch Report, Playing XIs, Live streaming

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ನಾಲ್ಕನೇ ಪಂದ್ಯ ಸೆಪ್ಟೆಂಬರ್ 22ರ ಬುಧವಾರದಂದು ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಇದು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 33ನೇ ಪಂದ್ಯವಾಗಿದೆ.

ಪ್ರಸ್ತುತ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟೂರ್ನಿಯಲ್ಲಿ ಸಾಲು ಸಾಲು ಸೋಲುಗಳನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಕುಸಿದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಸೆಣಸಾಡಲಿದೆ.

ಪಂದ್ಯದ ವಿವರ:

ಪಂದ್ಯದ ವಿವರ:

ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಯುಎಇಯಲ್ಲಿ ಆರಂಭವಾಗಿದ್ದು ಸೆಪ್ಟೆಂಬರ್ 22ರ ಬುಧವಾರದಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟ ನಡೆಸಲಿವೆ. ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯ ಆರಂಭವಾಗಲಿದ್ದು, ಇದು ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 33ನೇ ಪಂದ್ಯವಾಗಿದೆ.

Array

Array

ಪಿಚ್ ವರದಿ:

ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದೆ. ಎರಡೂ ಇನ್ನಿಂಗ್ಸ್‌‌ನ ಬ್ಯಾಟಿಂಗ್‌ಗೂ ಈ ಪಿಚ್ ಸಹಕಾರಿಯಾಗಲಿದ್ದು ವೇಗಿಗಳಿಗೆ ಹೆಚ್ಚು ವಿಕೆಟ್ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹಾಗೂ ಈ ಪಿಚ್‌ನಲ್ಲಿ ಸ್ಪಿನ್ ಬೌಲರ್‌ಗಳ ಆಟ ಹೆಚ್ಚೇನೂ ನಡೆಯುವುದಿಲ್ಲ ಎಂಬ ವರದಿಯಿದ್ದು ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಹೆಚ್ಚಿನ ಶ್ರಮ ವಹಿಸಬೇಕಿದೆ.


ನೇರಪ್ರಸಾರದ ಮಾಹಿತಿ:

ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:

ಸಂಭಾವ್ಯ ತಂಡಗಳು:

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ( ನಾಯಕ ಮತ್ತು ವಿಕೆಟ್ ಕೀಪರ್‌), ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೀರ್ / ಸ್ಟೀವ್ ಸ್ಮಿತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡ, ಅನ್ರಿಚ್ ನೋರ್ಕಿಯಾ ಮತ್ತು ಅವೇಶ್ ಖಾನ್

ಹೈದರಾಬಾದ್ ಸಂಭಾವ್ಯ ತಂಡ: ಡೇವಿಡ್ ವಾರ್ನರ್ / ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ವಿಜಯ್ ಶಂಕರ್, ಶೆರ್ಫೇನ್ ರುದರ್‌ಫೋರ್ಡ್ / ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಟಿ. ನಟರಾಜನ್, ಖಲೀಲ್ ಅಹಮದ್ / ಸಂದೀಪ್ ಶರ್ಮಾ

Story first published: Wednesday, September 22, 2021, 15:31 [IST]
Other articles published on Sep 22, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+