ಭಾರತ ವಿರುದ್ಧದ ಟಿ20ಐ ಸರಣಿಯಿಂದ ಹೊರಬಿದ್ದ ಟಾಮ್ ಲ್ಯಾಥಮ್

ಆಕ್ಲೆಂಡ್, ಜನವರಿ 8: ಭಾರತ ವಿರುದ್ಧದ ಸರಣಿಗೂ ಮುನ್ನ ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಜನವರಿ 24ರಿಂದ ಆಕ್ಲೆಂಡ್‌ನಲ್ಲಿ ಆರಂಭಗೊಳ್ಳಲಿರುವ ಟೀಮ್ ಇಂಡಿಯಾ ವಿರುದ್ಧದ ಟಿ20ಐ ಸರಣಿಯಿಂದ ಕಿವೀಸ್ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಟಾಮ್ ಲ್ಯಾಥಮ್ ಹೊರ ಬಿದ್ದಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಟಾಮ್ ಲ್ಯಾಥಮ್ ಕಿರು ಬೆರಳಿಗೆ ಗಾಯವಾಗಿತ್ತು. ಆ ಗಾಯವಿನ್ನೂ ಗುಣವಾಗಿಲ್ಲ. ಲ್ಯಾಥಮ್ ಬೆರಳಿಗಾಗಿರುವ ಗಾಯ ಸಂಪೂರ್ಣ ಗುಣವಾಗಲು ಕನಿಷ್ಠ 4 ವಾರಗಳು ಬೇಕಿವೆ. ಹೀಗಾಗಿ 5 ಪಂದ್ಯಗಳ ಟಿ20 ಸರಣಿಯಲ್ಲಿ ಟಾಮ್ ಆಡುತ್ತಿಲ್ಲ.
ಸಿಡ್ನಿಯಲ್ಲಿ ನಡೆದಿದ್ದ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮೂರನೇ ಮತ್ತು ಕೊನೆಯ ಟೆಸ್ಟ್‌ನ ನಾಲ್ಕನೇ ದಿನದಾಟದ ವೇಳೆ ಆಸೀಸ್ ಬ್ಯಾಟ್ಸ್‌ಮನ್ ಮಾರ್ನಸ್ ಲ್ಯಾಬುಸ್ಚಾಗ್ನೆ ಅವರ ಕ್ಯಾಚ್ ಪಡೆಯುತ್ತಿದ್ದಾಗ ಲ್ಯಾಥಮ್ ಕೈ ಬೆರಳಿಗೆ ಗಾಯವಾಗಿತ್ತು. ಆ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ದಾಖಲಿಸಿತ್ತು.
ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ಕೂಡ ಆಸೀಸ್ ವಿರುದ್ಧದ ಟೆಸ್ಟ್ ವೇಳೆ ಕೈಗೆ ಗಾಯ ಮಾಡಿಕೊಂಡಿದ್ದರು. ಅವರೂ ಭಾರತ ವಿರುದ್ಧದ ಟಿ20ಐ ಸರಣಿಯಲ್ಲಿ ಪಾಲ್ಗೊಳ್ಳುವುದು ಅನುಮಾನ. ನ್ಯೂಜಿಲೆಂಡ್‌ಗೆ ಪ್ರವಾಸ ಕೈಗೊಳ್ಳುವ ವಿರಾಟ್ ಕೊಹ್ಲಿ ಪಡೆ ಅಲ್ಲಿ 5 ಟಿ20ಐ, 3 ಏಕದಿನ, 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications