For Quick Alerts
ALLOW NOTIFICATIONS  
For Daily Alerts
 

ಈತನ ಆಟ ನೋಡಿ ವಿವಿಯನ್ ರಿಚರ್ಡ್ಸ್ ಬ್ಯಾಟಿಂಗ್ ನೆನಪಾಯ್ತು ಎಂದ ಟಾಮ್ ಮೂಡಿ

Tom Moody praises Suryakumar Yadav said he reminds me of Viv Richards

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಟಾಮ್ ಮೂಡಿ ಟೀಮ್ ಇಂಡಿಯಾದ ಬ್ಯಾಟರ್ ಟಿ20 ಕ್ರಿಕೆಟ್‌ನ ನಂಬರ್ 1 ಆಟಗಾರ ಸೂರ್ಯಕುಮಾರ್ ಯಾದವ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸೂರ್ಯಕುಮಾರ್ ಅವರ ಅಬ್ಬರದ ಬ್ಯಾಟಿಂಗ್ ಪ್ರದರ್ಶನವನ್ನು ವೆಸ್ಟ್ ಇಂಡೀಸ್‌ನ ದಿಗ್ಗಜ ಆಟಗಾರ ವಿವಿಯನ್ ರಿಚರ್ಡ್ಸ್ ಜೊತೆಗೆ ಹೋಲಿಕೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಟಾಮ್ ಮೂಡಿ.

2021ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಯಾದವ್ ಅದಾದ ಬಳಿಕ ಅಮೋಘ ಪ್ರದರ್ಶ ನೀಡುತ್ತಲೇ ಬಂದಿದ್ದಾರೆ. ಸದ್ಯ ಟೀಮ್ ಇಂಡಿಯಾ ವೈಟ್‌ಬಾಲ್ ತಂಡದ ಪ್ರಮುಖ ಆಟಗಾರನಾಗಿರುವ ಸೂರ್ಯ ಚುಟುಕು ಮಾದರಿಯಲ್ಲಿ ವಿಶ್ವದ ಅಗ್ರಕ್ರಮಾಂಕದ ಆಟಗಾರ ಎನಿಸಿಕೊಂಡಿದ್ದಾರೆ. ಮೈದಾನದ ಎಲ್ಲಾ ಮೂಲೆಗೂ ಚೆಂಡನ್ನು ಅಟ್ಟುವ ವಿಶೇಷ ಸಾಮರ್ಥ್ಯವಿರುವ ಸೂರ್ಯ ಟಿ20 ಮಾದರಿಗೆ ಹೇಳಿ ಮಾಡಿಸಿದ ಆಟಗಾರನಾಗಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಟಿ20 ಸರಣಿಗೆ ಹಾಗೂ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ಉಪನಾಯಕನಾಗಿಯೂ ಜವಾಬ್ಧಾರಿ ವಹಿಸಿಕೊಂಡಿದ್ದಾರೆ.

ಸ್ಪೋರ್ಟ್ಸ್ ತಕ್‌ಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ಟಾಮ್ ಮೂಡಿ ಸೂರ್ಯಕುಮಾರ್ ಬಗ್ಗೆ ವಿಶೇಷ ಮಾತುಗಳನ್ನಾಡಿದ್ದಾರೆ. "ಸೂರ್ಯಕುಮಾರ್ ಯಾದವ್. ಆತ ಆಡುವ ರೀತಿ ನಿಜವಾಗಿಯೂ ಅದ್ಭುತ. ಆತನ ಆಟ ನನಗೆ ನಾನು ಯುವಕನಾಗಿದ್ದಾಗ ವಿವಿಯನ್ ರಿಚರ್ಡ್ಸ್ ಆಡುತ್ತಿದ್ದ ರೀತಿ ನೆನಪಾಗುತ್ತದೆ. ಇಂಥಾ ಆಟಗಾರರು ಪಂದ್ಯವನ್ನು ಏಕಾಂಕಿಯಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಸಾಮರ್ಥ್ಯಹೊಂದಿರುತ್ತಾರೆ" ಎಂದಿದ್ದಾರೆ ಟಾಮ್ ಮೂಡಿ.

2022ರಲ್ಲಿ ಟಿ20 ಮಾದರಿಯಲ್ಲಿ ಸೂರ್ಯಕುಮಾರ್ ಯಾದವ್ ಅತೀ ಹೆಚ್ಚು ಎನ್‌ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. 31 ಇನ್ನಿಂಗ್ಸ್‌ಗಳಲ್ಲಿ 1164 ರನ್‌ಗಳಿಸಿದ್ದ ಸೂರ್ಯಕುಮಾರ್, ಕಳೆದ ಜುಲೈನಲ್ಲಿ ನಾಟಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಚೊಚ್ಚಲ ಟಿ20I ಶತಕವನ್ನು ಗಳಿಸಿದರು. ನವೆಂಬರ್‌ನಲ್ಲಿ ಭಾರತದ ಸೀಮಿತ ಓವರ್‌ಗಳ ನ್ಯೂಜಿಲೆಂಡ್ ಪ್ರವಾಸದ ಸಂದರ್ಭದಲ್ಲಿ ಸೂರ್ಯಕುಮಾರ್ 51 ಎಸೆತಗಳಲ್ಲಿ ಅಜೇಯ 111 ರನ್ ಗಳಿಸಿದರು ಮತ್ತು ಇತ್ತೀಚೆಗೆ ಶ್ರೀಲಂಕಾ ವಿರುದ್ಧದ ಸ್ವದೇಶಿ ಸರಣಿಯಲ್ಲಿ ತಮ್ಮ ಮೂರನೇ ಟಿ20 ಶತಕವನ್ನು ದಾಖಲಿಸಿದ್ದಾರೆ.

ಅಂತಾರಾಷ್ಟ್ರೀಯ ಟಿ20 ಇತಿಹಾಸದಲ್ಲಿ ಮೂರು ಅಥವಾ ಅದಕ್ಕಿಂತ ಹೆಚ್ಚು ಶತಕಗಳನ್ನು ಸಿಡಿಸಿದ ಐವರು ಬ್ಯಾಟ್ಸ್‌ಮನ್‌ಗಳಲ್ಲಿ ಸೂರ್ಯಕುಮಾರ್ ಒಬ್ಬರೆನಿಸಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನಾಲ್ಕು ಶತಕಗಳೊಂದಿಗೆ ಅತಿ ಹೆಚ್ಚು ಶತಕಗಳನ್ನು ಗಳಿಸಿದ್ದರೆ ನಂತರದ ಸ್ಥಾನದಲ್ಲಿ ಸೂರ್ಯಕುಮಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕಾಲಿನ್ ಮುನ್ರೊ ಮತ್ತು ಸಬಾವೂನ್ ಡೇವಿಜಿ ತಲಾ ಊರು ಶತಕಗಳನ್ನು ಸಿಡಿಸಿ ಈ ಸಾಧನೆ ಮಾಡಿದ್ದಾರೆ.

ಇನ್ನು ಏಕದಿನ ಹಾಗೂ ಟಿ20 ಮಾದರಿಯಲ್ಲಿ ಭಾರತದ ಪ್ರಮುಖ ಆಟಗಾರ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳೀಗೆ ಆಯ್ಕೆಯಾಗುವ ಮೂಲಕ ಟೆಸ್ಟ್‌ನಲ್ಲಿಯೂ ಪದಾರ್ಪಣೆಗೆ ಎದುರು ನೋಡುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಆಡುವುದು ನನ್ನ ಬಹುದೊಡ್ಡ ಕನಸು ಎಂಬುದನ್ನು ಈ ಹಿಂದೆ ಹಲವು ಸಂದರ್ಭಗಳಲ್ಲಿ ಸೂರ್ಯಕುಮಾರ್ ಯಾದವ್ ಹೇಳಿಕೊಂಡಿದ್ದರು.

Story first published: Saturday, January 14, 2023, 12:14 [IST]
Other articles published on Jan 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+