ಭಾರತದ ಪರ ಟಿ20ಯಲ್ಲಿ ಅತ್ಯಧಿಕ ರನ್ ಬಾರಿಸಿರುವ ಆಟಗಾರರ ಟಾಪ್ 10 ಪಟ್ಟಿ; 5 ಸ್ಥಾನ ಈ ಒಬ್ಬನ ಪಾಲು!

ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿ ನಿರತವಾಗಿರುವ ಟೀಮ್ ಇಂಡಿಯಾ ಆತಿಥೇಯ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 2-1 ಅಂತರದ ಜಯ ಸಾಧಿಸುವುದರ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಹೌದು, ಜುಲೈ 7ರ ಗುರುವಾರದಂದು ಸೌತಂಪ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ಟೀಮ್ ಇಂಡಿಯಾ 50 ರನ್‌ಗಳ ಬೃಹತ್ ಗೆಲುವನ್ನು ದಾಖಲಿಸಿತು ಹಾಗೂ ಜುಲೈ 9ರಂದು ಎಡ್ಜ್ ಬ್ಯಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಕೂಡಾ ಟೀಮ್ ಇಂಡಿಯಾ 49 ರನ್‌ಗಳ ಅಂತರದಲ್ಲಿ ಜಯ ಸಾಧಿಸಿತು ಹಾಗೂ ಸರಣಿಯನ್ನು ವಶಪಡಿಸಿಕೊಂಡಿತು. ನಂತರ ಜುಲೈ 10ರ ಭಾನುವಾರದಂದು ನಾಟಿಂಗ್ ಹ್ಯಾಮ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಇಂಗ್ಲೆಂಡ್ 17 ರನ್‌ಗಳ ಜಯ ಸಾಧಿಸುವುದರ ಮೂಲಕ ವೈಟ್ ವಾಷ್ ಮುಖಭಂಗದಿಂದ ಪಾರಾಗಿದೆ.
ಇತ್ತಂಡಗಳ ನಡುವಿನ ತೃತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಅಬ್ಬರಿಸಿದ ಸೂರ್ಯಕುಮಾರ್ ಯಾದವ್ 55 ಎಸೆತಗಳಲ್ಲಿ 117 ರನ್ ಬಾರಿಸಿ ಅಬ್ಬರಿಸಿದರು. ಈ ಮೂಲಕ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ರನ್ ಬಾರಿಸಿದ ಟಾಪ್ 10 ಭಾರತೀಯ ಕ್ರಿಕೆಟಿಗರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಒಟ್ಟಾರೆ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಭಾರತೀಯ ಆಟಗಾರರ ಟಾಪ್ 10 ಪಟ್ಟಿ ಹೇಗಿದೆ ಎಂಬುದರ ಕುರಿತಾದ ಮಾಹಿತಿ ಕೆಳಕಂಡಂತಿದೆ.

ಅತ್ಯಧಿಕ ರನ್ ಗಳಿಸಿದ ಆಟಗಾರರ ಟಾಪ್ 10 ಪಟ್ಟಿ
1. ರೋಹಿತ್ ಶರ್ಮಾ vs ಶ್ರೀಲಂಕಾ - 118 (43)
2. ಸೂರ್ಯಕುಮಾರ್ ಯಾದವ್ vs ಇಂಗ್ಲೆಂಡ್ - 117 (55)
3. ರೋಹಿತ್ ಶರ್ಮಾ vs ವೆಸ್ಟ್ ಇಂಡೀಸ್ - 111*(61)
4. ಕೆಎಲ್ ರಾಹುಲ್ vs ವೆಸ್ಟ್ ಇಂಡೀಸ್ - 110*(51)
5. ರೋಹಿತ್ ಶರ್ಮಾ vs ದಕ್ಷಿಣ ಆಫ್ರಿಕಾ - 106 (66)
6. ದೀಪಕ್ ಹೂಡಾ vs ಐರ್ಲೆಂಡ್ - 104 (57)
7. ಕೆಎಲ್ ರಾಹುಲ್ vs ಇಂಗ್ಲೆಂಡ್ - 101* (54)
8. ಸುರೇಶ್ ರೈನಾ vs ದಕ್ಷಿಣ ಆಫ್ರಿಕಾ - 101 (60)
9. ರೋಹಿತ್ ಶರ್ಮಾ vs ಇಂಗ್ಲೆಂಡ್ - 100* (56)
10. ರೋಹಿತ್ ಶರ್ಮಾ vs ಐರ್ಲೆಂಡ್ - 97 (61)

5 ಸ್ಥಾನ ರೋಹಿತ್ ಶರ್ಮಾ ಪಾಲು
ಟೀಮ್ ಇಂಡಿಯಾ ಪರ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತ್ಯಧಿಕ ರನ್ ಗಳಿಸಿರುವ ಆಟಗಾರರ ಟಾಪ್ 10 ಪಟ್ಟಿಯಲ್ಲಿ 5 ಸ್ಥಾನಗಳನ್ನು ರೋಹಿತ್ ಶರ್ಮಾ ಅಲಂಕರಿಸಿದ್ದಾರೆ. ಈ ಪೈಕಿ ರೋಹಿತ್ ಶರ್ಮಾ 4 ಶತಕಗಳನ್ನು ಬಾರಿಸಿದ್ದರೆ, ಒಮ್ಮೆ 97 ರನ್ ಬಾರಿಸಿದ್ದರು.

ಅತಿಹೆಚ್ಚು ರನ್ ಬಾರಿಸಿದ ಆಟಗಾರ ಕೂಡ ರೋಹಿತ್
ಇನ್ನು ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯರ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. 128 ಟಿ ಟ್ವೆಂಟಿ ಪಂದ್ಯಗಳಲ್ಲಿ 120 ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ 3379 ರನ್ ಬಾರಿಸಿದ್ದಾರೆ ಹಾಗೂ 4 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಹಾಗೂ ಅತಿ ಹೆಚ್ಚು ಶತಕ ಬಾರಿಸಿದ ಭಾರತೀಯ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications