ಟಾಪ್ 5 ಟೆಸ್ಟ್ ಬ್ಯಾಟ್ಸ್ ಮನ್: ಕೊಹ್ಲಿಯನ್ನು ಹಿಂದಿಕ್ಕಿದ ಪೂಜಾರ
ಬೆಂಗಳೂರು, ಮಾರ್ಚ್. 21 : ರಾಂಚಿ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ದ್ವಿಶತಕ ಸಿಡಿಸಿದ ಭಾರತದ ಚೇತೇಶ್ವರ್ ಪೂಜಾರ ಅಂತಾರಾಷ್ಟ್ರೀಯ ಟೆಸ್ಟ್ ಬ್ಯಾಟ್ಸ್ ಮನ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.
ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಪ್ರಕಟಸಿದ ಅಂತಾರಾಷ್ಟ್ರೀಯ ಟೆಸ್ಟ್ ಬ್ಯಾಟ್ಸ್ ಮನ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಿಡಲ್ ಆರ್ಡರ್ ಬ್ಯಾಟ್ಸ್ ಮನ್ ಚೇತೇಶ್ವರ್ ಪೂಜಾರ 861 ಅಂಕಗಳೊಂದಿಗೆ 6ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.[ಮ್ಯಾರಥಾನ್ ಇನ್ನಿಂಗ್ಸ್ : ದ್ರಾವಿಡ್ ದಾಖಲೆ ಮುರಿದ ಪೂಜಾರ]
ಈ ಮೊದಲು 2ನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ತಂಡದ ಕ್ಯಾಪ್ಟನ್ ಕೇನ್ ವಿಲಿಯಮ್ಸನ್ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಸೀಸ್ ವಿರುದ್ಧದ ಬಾರ್ಡರ್ ಗಾವಾಸ್ಕರ್ 3ನೇ ಟೆಸ್ಟ್ ಪಂದ್ಯದಲ್ಲಿ ಅಬ್ಬರದ ದ್ವಿಶತಕ ಬಾರಿಸಿದ್ದರಿಂದ ಪೂಜಾರ, ಶ್ರೇಯಾಂಕ ಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ.
ಇನ್ನು ಪ್ರಸ್ತುತ ಸರಣಿಯಲ್ಲಿ ನೀರಸ ಪ್ರದರ್ಶನ ತೋರುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.
ಟಾಪ್ 5 ಐಸಿಸಿ ಟೆಸ್ಟ್ ಬ್ಯಾಟ್ಸ್ ಮನ್ ಗಳು

#1 ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್
ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಅವರು ಭಾರತದ ವಿರುದ್ಧ ಬಾರ್ಡರ್ ಗಾವಾಸ್ಕರ್ ಸರಣಿಯಲ್ಲಿ 178 ರನ್ ಬಾರಿಸಿ ಉತ್ತಮ ಪ್ರದರ್ಶ ನೀಡಿದ್ದರಿಂದ 941 ಅಂಕಗಳೊಂದಿಗೆ ಟೆಸ್ಟ್ ಬ್ಯಾಟ್ಸ್ ಮನ್ ಗಳ ಶ್ರೇಯಾಂಕ ಪಟ್ಟಿ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.

#2 ಭಾರತದ ಚೇತೇಶ್ವರ್ ಪೂಜಾರ
ಭಾರತದ ಚೇತೇಶ್ವರ ಪೂಜಾರ ಅವರು ಆಸೀಸ್ ವಿರುದ್ಧದ 3ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದರಿಂದ 861 ಅಂಕದೊಂದಿಗೆ ಶ್ರೇಯಾಂಕ ಪಟ್ಟಿಯಲ್ಲಿ 6 ರಿಂದ 2ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

#3 ಇಂಗ್ಲೆಂಡ್ ನ ಜೋ ರೂಟ್
ಈ ಮೊದಲು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ನ ಜೋ ರೂಟ್ ಅವರು ಒಂದು ಸ್ಥಾನ ಕುಸಿತ ಕಂಡಿದ್ದಾರೆ. 848 ಅಂಕಗಳೊಂದಿಗೆ 3ನೇ ಸ್ಥಾನಕ್ಕೆ ಇಳಿದಿದ್ದಾರೆ.

#4 ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗಾವಾಸ್ಕರ್ ಸರಣಿಯಲ್ಲಿ ನೀರಸ ಪ್ರದರ್ಶನ ತೋರುತ್ತಿರುವುದರಿಂದ 826 ಪಾಯಿಂಟ್ಸ್ ಗಳೊಂದಿಗೆ 4ನೇ ಸ್ಥಾನಕ್ಕೆ ಕುಸಿದಿದ್ದಾರೆ.

#5 ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್
ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಈ ಮೊದಲು 2ನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರ ಸ್ಥಾನಕ್ಕೆ ಭಾರತದ ಪೂಜಾರ ಲಗ್ಗಯಿಟ್ಟಿದ್ದಾರೆ. ಇದರಿಂದ ವಿಲಿಯಮ್ಸನ್ 823 ಅಂಕದೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications