ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿಹೆಚ್ಚು ಬೌಂಡರಿ ಹೊಡೆದ ಬ್ಯಾಟರ್‌ಗಳ ಮಾಹಿತಿ!
ಮೇ 28 ಮಂಗಳವಾರ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯೂ ಜೂನ್ 2 ರಿಂದ ಆರಂಭವಾಗಲಿದೆ. ಅಮೆರಿಕ ಮತ್ತು ವೆಸ್ಟ್ ಇಂಡೀಸ್ ದೇಶಗಳು ಈ ಮೆಗಾ ಟೂರ್ನಿಗೆ ಆತಿಥ್ಯ ವಹಿಸಿವೆ.
ಭಾರತ ಜೂನ್ 5 ರಂದು ಐರ್ಲೆಂಡ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡಲಿದೆ. ಇದಕ್ಕೂ ಮೊದಲು ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿಗಳನ್ನು ಬಾರಿಸಿದ ಬ್ಯಾಟರ್‌ಗಳ ಬಗ್ಗೆ ತಿಳಿಯೋಣ.
ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದವರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಬ್ಯಾಟರ್‌ಗಳ ಹೆಸರಿದೆ. 'ರನ್ ಮಷಿನ್' ಖ್ಯಾತಿಯ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಅತಿಹೆಚ್ಚು ಬೌಂಡರಿ ಗಳಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಅತಿಹೆಚ್ಚು ಬೌಂಡರಿ ಹೊಡೆದ ಬ್ಯಾಟರ್‌ಗಳು

1) ಮಹೇಲ ಜಯವರ್ಧನೆ : ಶ್ರೀಲಂಕಾ ಕ್ರಿಕೆಟ್ ಕಂಡ ಅಪರೂಪದ ಬ್ಯಾಟರ್ ಆಗಿರುವ ಮಹೇಲಾ ಜಯವರ್ಧನೆ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ. ಒಟ್ಟು 31 ಟಿ20 ವಿಶ್ವಕಪ್ ಪಂದ್ಯಗಳಲ್ಲಿ 111 ಬೌಂಡರಿಗಳನ್ನು ಬಾರಿಸಿದ್ದಾರೆ.

2) ವಿರಾಟ್ ಕೊಹ್ಲಿ : ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಆಗಿರುವ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದವರ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 25 ಪಂದ್ಯಗಳಿಂದ 103 ಬೌಂಡರಿಗಳನ್ನು ಬಾರಿಸಿದ್ದಾರೆ. ಇದೀಗ 2024ರ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆಯಲು ವಿರಾಟ್ ಕೊಹ್ಲಿ ಅವರಿಗೆ ಅವಕಾಶವಿದೆ.

3) ತಿಲಕರತ್ನೆ ದಿಲ್ಶನ್ : ಅತಿಹೆಚ್ಚು ಬೌಂಡರಿ ಹೊಡೆದರ ಮೂರನೇ ಸ್ಥಾನದಲ್ಲಿ ಮತ್ತೊರ್ವ ಶ್ರೀಲಂಕಾದ ಮಾಜಿ ಆರಂಭಿಕ ಬ್ಯಾಟರ್ ತಿಲಕರತ್ನೆ ದಿಲ್ಶಾನ್ ಇದ್ದಾರೆ. 34 ಪಂದ್ಯಗಳಲ್ಲಿ 101 ಬೌಂಡರಿಗಳನ್ನು ಗಳಿಸಿದ್ದಾರೆ.

4) ರೋಹಿತ್ ಶರ್ಮಾ : ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹಿಟ್‌ಮ್ಯಾನ್ ಇದುವರೆಗೆ 36 ಪಂದ್ಯಗಳಲ್ಲಿ 91 ಬೌಂಡರಿಗಳನ್ನು ಬಾರಿಸಿದ್ದಾರೆ. ಇದೀಗ ರೋಹಿತ್ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಬೌಂಡರಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಸಜ್ಜಾಗಿದ್ದಾರೆ.

5) ಡೇವಿಡ್ ವಾರ್ನರ್ : ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಬ್ಯಾಟರ್‌ಗಳ ಪೈಕಿ ಆಸ್ಟ್ರೇಲಿಯಾದ ಆರಂಭಿಕ ಎಡಗೈ ದಾಂಡಿಗ ಡೇವಿಡ್ ವಾರ್ನರ್ ಐದನೇ ಸ್ಥಾನದಲ್ಲಿದ್ದಾರೆ. 34 ಪಂದ್ಯಗಳಲ್ಲಿ 86 ಬೌಂಡರಿಗಳನ್ನು ಬಾರಿಸಿದ್ದಾರೆ.
ವಾರ್ನರ್ ಸದ್ಯ ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್‌ನಲ್ಲಿ ಪ್ರಮುಖ ಭಾಗವಾಗಿರುವುದರಿಂದ ಈ ಟೂರ್ನಿಯಲ್ಲಿ ಬೌಂಡರಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಅವಕಾಶ ಅವರಿಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications