ಮೇ 28 ಮಂಗಳವಾರ, ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ದೇಶಗಳಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಜೂನ್ 2ರಿಂದ 20 ತಂಡಗಳ ಎಲ್ಲಾ ಆಟಗಾರರು ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.
ಈ ಟೂರ್ನಿಯಲ್ಲಿ ಬ್ಯಾಟರ್‌ಗಳ ಹೊರತಾಗಿ ಬೌಲರ್‌ಗಳು ಕೂಡ ಸದ್ದು ಮಾಡಲಿದ್ದಾರೆ. ಬೌಲರ್‌ಗಳು ತಮ್ಮ ಬಿಗಿ ಬೌಲಿಂಗ್‌ಯಿಂದ ಬ್ಯಾಟರ್‌ಗಳು ರನ್‌ಗಳಿಸದಂತೆ ಕಟ್ಟಿ ಹಾಕುವುದನ್ನು ಈ ಬಾರಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಾಣಬಹುದಾಗಿದೆ.
ಆದರೆ ಅದಕ್ಕೂ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್‌ಗಳ ಬಗ್ಗೆ ಹೇಳಲಿದ್ದೇವೆ. ಪಾಕಿಸ್ತಾನದ ಬೌಲರ್‌ಗಳು ಈ ಪಟ್ಟಿಯಲ್ಲಿ ಪ್ರಾಬಲ್ಯ ಮೆರೆದಿದ್ದು, ಟೀಮ್ ಇಂಡಿಯಾ ಆಟಗಾರರು ಯಾರೊಬ್ಬರು ಈ ರೇಸ್‌ನಲ್ಲಿ ಇಲ್ಲದಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.

1) ಶಕೀಬ್ ಅಲ್ ಹಸನ್: ಉದ್ಘಾಟನ ಆವೃತ್ತಿ 2007ರಿಂದ ಆಡುತ್ತಿರುವ ಇಬ್ಬರು ಆಟಗಾರರಲ್ಲಿ ಒಬ್ಬರಾಗಿರುವ
ಬಾಂಗ್ಲಾದೇಶದ ಸ್ಟಾರ್ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಆಗಿದ್ದಾರೆ.
ಶಕೀಬ್ 35 ಪಂದ್ಯಗಳಿಂದ 47 ವಿಕೆಟ್ ಪಡೆದಿದ್ದಾರೆ. 9 ರನ್‌ಗೆ 4 ವಿಕೆಟ್ ಕಬಳಿಸಿರುವುದು ಶಕೀಬ್ ಅತ್ಯುತ್ತಮ ಪ್ರದರ್ಶನವಾಗಿದೆ. ತಮ್ಮ 9ನೇ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಮಾಲ್ ಮಾಡಲು ಸಜ್ಜಾಗಿದ್ದಾರೆ.

2) ಶಾಹಿದ್ ಅಫ್ರಿದಿ: ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಪಾಕಿಸ್ತಾನದ ಮಾಜಿ ನಾಯಕ ಮತ್ತು ಆಲ್ ರೌಂಡರ್ ಶಾಹಿದ್ ಅಫ್ರಿದಿ. 34 ಪಂದ್ಯಗಳಲ್ಲಿ 39 ವಿಕೆಟ್‌ಗಳನ್ನು ಪಡೆದಿದ್ದಾರೆ.
ಈವರೆಗೆ 11 ರನ್ ನೀಡಿ 4 ವಿಕೆಟ್ ಪಡೆದಿರುವುದು ಅಫ್ರಿದಾ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ. ಸದ್ಯ ಕ್ರಿಕೆಟ್ ವೃತ್ತಿಜೀವನಕ್ಕೆ ಗುಡ್ ಬೈ ಹೇಳಿರುವ ಆಫ್ರಿದಿ ಅವರನ್ನು ಈ ಬಾರಿ ಟಿ20 ವಿಶ್ವಕಪ್‌ಗೆ ರಾಯಭಾರಿಯಾಗಿ ಐಸಿಸಿ ನೇಮಕ ಮಾಡಿದೆ.

3) ಲಸಿತ್ ಮಾಲಿಂಗ: ತನ್ನ ಮಾರಕ ಬೌಲಿಂಗ್ ದಾಳಿಗೆ ಹೆಸರುವಾಸಿಯಾಗಿದ್ದ ಶ್ರೀಲಂಕಾದ ಮಾಜಿ ವೇಗದ ಬೌಲರ್ ಲಸಿತ್ ಮಾಲಿಂಗ ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಉಳಿದಿದ್ದಾರೆ.
ಮಾಲಿಂಗ 31 ಪಂದ್ಯಗಳಲ್ಲಿ 38 ವಿಕೆಟ್ ಪಡೆದಿದ್ದಾರೆ. 31 ರನ್‌ಗಳಿಗೆ 5 ವಿಕೆಟ್ ಕಬಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಮಾಲಿಂಗ ಟಿ20 ವಿಶ್ವಕಪ್‌ನಲ್ಲಿ ಐದು ವಿಕೆಟ್ ಕಬಳಿಸಿರುವ ಸಾಧನೆ ಮಾಡಿದ್ದಾರೆ.

4) ಸಯೀದ್ ಅಜ್ಮಲ್: ಪಾಕಿಸ್ತಾನ ತಂಡದ ಮಾಜಿ ಸ್ಟಾರ್ ಸ್ಪಿನ್ನರ್ ಸಯೀದ್ ಅಜ್ಮಲ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಎನಿಸಿಕೊಂಡಿದ್ದಾರೆ.
ಸಯೀದ್ 23 ಪಂದ್ಯಗಳಲ್ಲಿ 36 ವಿಕೆಟ್‌ಗಳನ್ನು ಪಡೆದಿದ್ದಾರೆ. 19 ರನ್‌ಗಳಿಗೆ 4 ವಿಕೆಟ್ ಉರುಳಿಸಿರುವುದು ಅಜ್ಮಲ್ ಅತ್ಯುತ್ತಮ ಸಾಧನೆಯಾಗಿದೆ.

5) ಅಜಂತಾ ಮೆಂಡಿಸ್ : ಶ್ರೀಲಂಕಾದ ಮಾಜಿ ಸ್ಪಿನ್ನರ್ ಅಜಂತಾ ಮೆಂಡಿಸ್ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳಲ್ಲಿ 5ನೇ ಸ್ಥಾನದಲ್ಲಿದ್ದಾರೆ.
ಮೆಂಡಿಸ್ 21 ಪಂದ್ಯಗಳಲ್ಲಿ 35 ವಿಕೆಟ್ ಪಡೆದಿದ್ದಾರೆ. 8 ರನ್‌ಗಳಿಗೆ 6 ವಿಕೆಟ್ ಕಬಳಿಸಿರುವುದು ಮೆಂಡಿಸ್ ಅತ್ಯುತ್ತಮ ಪ್ರದರ್ಶನವಾಗಿದೆ.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್‌ಗಳಲ್ಲಿ ಭಾರತದ ಯಾವುದೇ ಬೌಲರ್ ಇಲ್ಲ. ಅಗ್ರ 10 ವಿಕೆಟ್ ಪಡೆದ ಬೌಲರ್‌ಗಳ ಪೈಕಿ ಒಬ್ಬರೇ ಒಬ್ಬ ಭಾರತೀಯ ಬೌಲರ್ ಇದ್ದಾರೆ.
ಆ ಬೌಲರ್ ಬೇರೆ ಯಾರೂ ಅಲ್ಲ ಟೀಮ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳಲ್ಲಿ ಅಶ್ವಿನ್ 7ನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ ಪರ 24 ಪಂದ್ಯಗಳಲ್ಲಿ 32 ವಿಕೆಟ್ ಪಡೆದಿದ್ದಾರೆ.