ಭಾರತ ಪ್ರಸಕ್ತ ವರ್ಷ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಅಮೋಘ ಸಾಧನೆ ಮಾಡಿದೆ. ಅಲ್ಲದೆ 2007ರ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಆ ಬಳಿಕ ಭಾರತ ಟಿ20 ವಿಶ್ವಕಪ್ ಗೆಲ್ಲುವಲ್ಲಿ ವಿಫಲವಾಗಿತ್ತು. ಭಾರತ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಫೈನಲ್ ಪ್ರವೇಶ ಪಡೆದಿತ್ತು. ಅಲ್ಲದೆ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ, ಟ್ರೋಫಿಗೆ ಮುತ್ತಿಟ್ಟಿದೆ.
ಟೀಮ್ ಇಂಡಿಯಾ ಪ್ರಸಕ್ತ ವರ್ಷದಲ್ಲಿ ಒಟ್ಟು 26 ಪಂದ್ಯಗಳನ್ನು ಆಡಿದೆ. ಇನ್ನು ಈ ಗೆಲುವಿನಲ್ಲಿ 22 ಜಯ ಸಾಧಿಸಿತು. ಇನ್ನು ಟೀಮ್ ಇಂಡಿಯಾದ ಗೆಲುವಿನಲ್ಲಿ ಹಲವು ಆಟಗಾರರ ಕೊಡುಗೆ ಅಪಾರ. ಈ ವರ್ಷ ಹಲವು ಯುವ ಆಟಗಾರರು ಅಮೋಘ ಪ್ರದರ್ಶನ ನೀಡಿದ್ದಾರೆ. ಹಾಗಿದ್ದರೆ ಈ ಬಾರಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಐವರು ಭಾರತೀಯ ಆಟಗಾರರ ಪಟ್ಟಿ ಇಲ್ಲಿದೆ.

ಪ್ರಸಕ್ತ ವರ್ಷದ ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಭರವಸೆಯ ಆಟಗಾರ ಸಂಜು ಸ್ಯಾಮ್ಸನ್ ಅಬ್ಬರದ ಆಟವನ್ನು ಆಡಿದ್ದಾರೆ. ಇವರು ಆಡಿದ 13 ಪಂದ್ಯಗಳಲ್ಲಿ 43.60 ರನ್ ಸರಾಸರಿಯಲ್ಲಿ 436 ರನ್ ಸಿಡಿಸಿದ್ದಾರೆ. ಇದರಲ್ಲಿ 3 ಶತಕ, 1 ಅರ್ಧಶತಕಗಳು ಸೇರಿವೆ. ಇನ್ನು ಟಿ20 ಕ್ರಿಕೆಟ್‌ನಲ್ಲಿ 35 ಬೌಂಡರಿ, 31 ಸಿಕ್ಸರ್ ಸೇರಿದಂತೆ 5 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ.
ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ಸ್ಥಿರ ಪ್ರದರ್ಶನ ನೀಡಿದ್ದಾರೆ. ಇವರು 26.81 ಸರಾಸರಿಯಲ್ಲಿ 18 ಪಂದ್ಯಗಳಲ್ಲಿ 429 ರನ್ ಸಿಡಿಸಿದ್ದಾರೆ. ಇದರಲ್ಲಿ 41 ಬೌಂಡರಿ, 22 ಸಿಕ್ಸರ್‌ಗಳು ಸೇರಿದ್ದು, ಇದರಲ್ಲಿ 4 ಅರ್ಧಶತಕಗಳು ಸೇರಿವೆ.

ಟಿ20 ವಿಶ್ವಕಪ್ ಫೈನಲ್ ಬಳಿಕ ಚುಟುಕು ಫಾರ್ಮೆಟ್‌ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಸಹ ಗರಿಷ್ಠ ರನ್ ಬಾರಿಸಿದ ಸಾಧಕರಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಆಡಿದ 11 ಪಂದ್ಯಗಳಲ್ಲಿ 1 ಶತಕ, 3 ಅರ್ಧಶತಕ ಸೇರಿದಂತೆ 378 ರನ್ ಸಿಡಿಸಿದ್ದರೆ. ಇವರ ಬ್ಯಾಟ್‌ನಿಂದ 35 ಬೌಂಡರಿ, 23 ಸಿಕ್ಸರ್ ಸೇರಿವೆ.
ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಆಡಿದ 17 ಪಂದ್ಯಗಳಲ್ಲಿ 352 ರನ್ ಸಿಡಿಸಿದ್ದಾರೆ. ಇವರ ಬ್ಯಾಟ್‌ನಿಂದ 33 ಬೌಂಡರಿ, 19 ಸಿಕ್ಸರ್ ಸೇರಿವೆ.

ತಿಲಕ್ ವರ್ಮಾ ಟಿ20 ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಯುವ ಆಟಗಾರ. ಇವರು ಈ ಪಂದ್ಯದಲ್ಲಿ ಆಡಿದ 5 ಪಂದ್ಯಗಳಲ್ಲಿ 306 ರನ್ ಸಿಡಿಸಿದ್ದಾರೆ. ಇದರಲ್ಲಿ 2 ಶತಕಗಳು ಸೇರಿವೆ. ಇದರಲ್ಲಿ 23 ಬೌಂಡರಿ, 21 ಸಿಕ್ಸರ್ ಸೇರಿವೆ.