For Quick Alerts
ALLOW NOTIFICATIONS  
For Daily Alerts
 

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಟಾಪ್ 5 ಎಡಗೈ ಸ್ಪಿನ್ನರ್‌ಗಳು

ಒಂದು ಕಾಲದಲ್ಲಿ ವೇಗದ ಬೌಲರ್‌ಗಳು ವಿಶ್ವ ಕ್ರಿಕೆಟ್‌ನಲ್ಲಿ ಹೆಚ್ಚು ಪ್ರಾಬಲ್ಯ ಮೆರೆದಿದ್ದರು. ಅದರಲ್ಲೂ ವೆಸ್ಟ್ ಇಂಡೀಸ್ ದೈತ್ಯ ವೇಗಿಗಳ ಬೌಲಿಂಗ್ ದಾಳಿಯನ್ನು ಎದುರಿಸುವುದು ಬ್ಯಾಟರ್‌ಗಳಿಗೆ ಸವಾಲಾಗಿತ್ತು. ಕಾಲ ಕ್ರಮೇಣ ವೇಗದ ಬೌಲರ್‌ಗಳಂತೆ ಸ್ಪಿನ್ನರ್‌ಗಳು ಕೂಡ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ.

ಪಿಚ್ ಅನ್ನು ಲೆಕ್ಕಿಸದೆ ತಮ್ಮ ಸ್ಪಿನ್ ಮ್ಯಾಜಿಕ್ ಮೂಲಕ ಅವರು ವೇಗದ ಬೌಲರ್‌ಗಳಷ್ಟೇ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅದರಲ್ಲೂ ಎಡಗೈ ಸ್ಪಿನ್ನರ್‌ಗಳು ಬ್ಯಾಟರ್‌ಗಳ ಮೇಲೆ ಹೆಚ್ಚು ಪ್ರಭಾವ ಬೀರಿದ್ದಾರೆ. ವಿಶ್ವದ ಕೆಲವು ಎಡಗೈ ಸ್ಪಿನ್ನರ್‌ಗಳು ತಮ್ಮ ಹೆಸರಿಗೆ ಹೆಚ್ಚು ವಿಕೆಟ್‌ಗಳನ್ನು ಹೊಂದಿರುವ ಬಗ್ಗೆ ಮಾಹಿತಿ ಇಲ್ಲಿದೆ.

Top 5 Left-arm spinners with highest wicket takers in international cricket

ಅತಿ ಹೆಚ್ಚು ವಿಕೆಟ್ ಪಡೆದ ಎಡಗೈ ಸ್ಪಿನ್ನರ್‌ಗಳು

1) ಶಕೀಬ್ ಅಲ್ ಹಸನ್

ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ವಿಶ್ವದ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಕೆಟ್ ಪಡೆದ ಎಡಗೈ ಸ್ಪಿನ್ನರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಶಕೀಬ್ 482 ಇನ್ನಿಂಗ್ಸ್‌ಗಳಲ್ಲಿ ಒಟ್ಟು 707 ವಿಕೆಟ್ ಪಡೆದಿದ್ದಾರೆ. ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಶಕೀಬ್ ಮೊದಲ ಸ್ಥಾನಕ್ಕೇರಿದ್ದಾರೆ.

2) ಡೇನಿಯಲ್ ವೆಟ್ಟೋರಿ

ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಕೆಟ್ ಪಡೆದ ವಿಶ್ವದ ಎರಡನೇ ಎಡಗೈ ಸ್ಪಿನ್ನರ್ ಆಗಿದ್ದಾರೆ. ಅವರು ಒಟ್ಟು 498 ಇನ್ನಿಂಗ್ಸ್‌ಗಳಲ್ಲಿ ಒಟ್ಟು 705 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಶಕೀಬ್‌ಗಿಂತ ಮೊದಲು ವೆಟ್ಟೋರಿ ವಿಶ್ವದ ಅತಿ ಹೆಚ್ಚು ವಿಕೆಟ್ ಪಡೆದ ಎಡಗೈ ಸ್ಪಿನ್ನರ್ ಆಗಿದ್ದರು.

3) ರವೀಂದ್ರ ಜಡೇಜಾ

ಟೀಮ್ ಇಂಡಿಯಾದ ಪರ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದು, ಅತಿ ಹೆಚ್ಚು ಅಂತರಾಷ್ಟ್ರೀಯ ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಜಡೇಜಾ ಭಾರತದ ಪರ 396 ಇನ್ನಿಂಗ್ಸ್‌ಗಳಲ್ಲಿ ಒಟ್ಟು 568 ವಿಕೆಟ್‌ಗಳನ್ನು ಉರುಳಿಸಿದ್ದಾರೆ.

ಟಿ20 ವಿಶ್ವಕಪ್ ಗೆಲುವಿನ ಬಳಿಕ ಚುಟುಕು ಕ್ರಿಕೆಟ್‌ಗೆ ಜಡೇಜಾ ವಿದಾಯ ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಕಣಕ್ಕೀಳಿಯಲಿರುವ ಅವರು ಮತ್ತಷ್ಟು ವಿಕೆಟ್‌ಗಳನ್ನು ಹೆಚ್ಚಿಸಿಕೊಳ್ಳುವ ಅವಕಾಶವನ್ನು ಹೊಂದಿದ್ದಾರೆ.

4) ರಂಗನ ಹರತ್

ಶ್ರೀಲಂಕಾ ತಂಡದ ಮಾಜಿ ಸ್ಪಿನ್ನರ್ ರಂಗನ ಹರತ್ ಕೂಡ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹರತ್ ಶ್ರೀಲಂಕಾ ಪರ 254 ಇನ್ನಿಂಗ್ಸ್‌ಗಳಲ್ಲಿ ಒಟ್ಟು 525 ವಿಕೆಟ್ ಪಡೆದಿದ್ದಾರೆ. ಅವರು 2018 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು.

5) ಸನತ್ ಜಯಸೂರ್ಯ

ಶ್ರೀಲಂಕಾದ ಮಾಜಿ ಆಲ್‌ರೌಂಡರ್ ಸನತ್ ಜಯಸೂರ್ಯ ವಿಶ್ವದ ಐದನೇ ಅತಿ ಹೆಚ್ಚು ವಿಕೆಟ್ ಪಡೆದ ಎಡಗೈ ಸ್ಪಿನ್ನರ್. ಜಯಸೂರ್ಯ 532 ಇನ್ನಿಂಗ್ಸ್‌ಗಳಲ್ಲಿ ಒಟ್ಟು 440 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದ್ದಾರೆ. ಪ್ರಸ್ತುತ ಅವರು ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ನೇತೃತ್ವದ ಶ್ರೀಲಂಕಾ ತಂಡವು ಏಕದಿನ ಸರಣಿಯಲ್ಲಿ ಭಾರತವನ್ನು ಸೋಲಿಸಿತು.

Story first published: Monday, August 26, 2024, 19:41 [IST]
Other articles published on Aug 26, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+