2022ರಲ್ಲಿ ಇಲ್ಲಿಯವರೆಗೂ ಅತಿಹೆಚ್ಚು ಟೆಸ್ಟ್ ರನ್ ಬಾರಿಸಿರುವ ಭಾರತೀಯ ಯಾರು? ಟಾಪ್ 5 ಪಟ್ಟಿ ಇಲ್ಲಿದೆ

ಕಳೆದೆರಡು ತಿಂಗಳುಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನೈದನೇ ಆವೃತ್ತಿಯಲ್ಲಿ ನಿರತರಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗರು ಇದೀಗ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಮರಳಿದ್ದು, ಕಳೆದ ವರ್ಷದಿಂದ ಮುಂದೂಡಲ್ಪಟ್ಟಿದ್ದ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಸೆಣಸಾಟವನ್ನು ನಡೆಸುತ್ತಿದೆ.
ಹೌದು, ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಕಳೆದ ವರ್ಷ ಆಯೋಜನೆಯಾಗಿದ್ದ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಕೊರೋನಾವೈರಸ್ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟು ಇದೇ ಜುಲೈ 1ರಿಂದ ಮರು ಆಯೋಜನೆಯಾಗಿದೆ.
ಈ ಪಂದ್ಯ ಇಂಗ್ಲೆಂಡ್‌ನ ಎಡ್ಜ್ ಬಾಸ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗುತ್ತಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 416 ರನ್ ಕಲೆಹಾಕಿತು. ಬೃಹತ್ ಮೊತ್ತ ಕಲೆಹಾಕಿದ ಟೀಮ್ ಇಂಡಿಯಾ ಪಂದ್ಯದ ಆರಂಭದಲ್ಲಿ ತನ್ನ ಮೊದಲ 5 ವಿಕೆಟ್‍ಗಳನ್ನು ವೇಗವಾಗಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. 98 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಟೀಮ್ ಇಂಡಿಯಾಗೆ ಆಸರೆಯಾದದ್ದು ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಹಾಗೂ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ. ಇಬ್ಬರ ಜೋಡಿ 222 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತ ಹೆಚ್ಚಾಗುವಂತೆ ಮಾಡಿತು. ಇನ್ನು ಈ ಇಬ್ಬರೂ ಸಹ ಶತಕ ಬಾರಿಸಿದ್ದು, ತಂಡದ ಪರ ಆಪತ್ಭಾಂದವರಾಗಿ ನಿಂತಿದ್ದಾರೆ. ಹೀಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಮೊದಲ ಇನ್ನಿಂಗ್ಸ್ ಮುಕ್ತಾಯವಾದ ನಂತರ ಈ ವರ್ಷ ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿ ಈ ಕೆಳಕಂಡಂತಿದೆ.

1. ರಿಷಭ್ ಪಂತ್
5 ಪಂದ್ಯಗಳನ್ನಾಡಿ 8 ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಬೀಸಿರುವ ರಿಷಭ್ ಪಂತ್ 475 ರನ್ ಕಲೆ ಹಾಕುವುದರ ಮೂಲಕ ಈ ವರ್ಷ ಟೀಮ್ ಇಂಡಿಯಾ ಪರ ಅತಿ ಹೆಚ್ಚು ಟೆಸ್ಟ್ ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ರಿಷಭ್ ಪಂತ್ 2 ಶತಕ ಹಾಗೂ 2 ಅರ್ಧಶತಕಗಳನ್ನು ಬಾರಿಸಿದ್ದಾರೆ.

2. ರವೀಂದ್ರ ಜಡೇಜಾ
ಈ ವರ್ಷ ಇಲ್ಲಿಯವರೆಗೂ 3 ಪಂದ್ಯಗಳನ್ನಾಡಿ 4 ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಬೀಸಿರುವ ರವೀಂದ್ರ ಜಡೇಜಾ 305 ರನ್ ಕಲೆಹಾಕಿದ್ದು, ಈ ವರ್ಷ ಅತಿ ಹೆಚ್ಚು ಟೆಸ್ಟ್ ರನ್ ದಾಖಲಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಸರ್ ಜಡೇಜಾ 2 ಶತಕಗಳನ್ನು ಬಾರಿಸಿದ್ದಾರೆ.

3. ಹನುಮ ವಿಹಾರಿ
ಈ ವರ್ಷ ಟೀಮ್ ಇಂಡಿಯಾದ ಪರ 4 ಟೆಸ್ಟ್ ಪಂದ್ಯಗಳನ್ನಾಡಿ 6 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದಿರುವ ಹನುಮ ವಿಹಾರಿ 204 ರನ್ ಕಲೆಹಾಕಿದ್ದು, ಟೀಮ್ ಇಂಡಿಯಾದ ಪರ ಈ ವರ್ಷ ಅತಿ ಹೆಚ್ಚು ಟೆಸ್ಟ್ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದಾರೆ. ಹನುಮ ವಿಹಾರಿ ಕೇವಲ ಒಂದೇ ಒಂದು ಅರ್ಧ ಶತಕ ಬಾರಿಸಿದ್ದಾರೆ.

4. ಶ್ರೇಯಸ್ ಅಯ್ಯರ್
ಟೀಮ್ ಇಂಡಿಯಾ ಪರ ಈ ವರ್ಷ 3 ಟೆಸ್ಟ್ ಪಂದ್ಯಗಳನ್ನಾಡಿ 4 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದಿರುವ ಶ್ರೇಯಸ್ ಅಯ್ಯರ್ 201 ರನ್ ಕಲೆ ಹಾಕಿದ್ದು, ಈ ವರ್ಷ ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಯ್ಯರ್ ಒಟ್ಟು 2 ಅರ್ಧಶತಕಗಳನ್ನು ಬಾರಿಸಿದ್ದು, ಶತಕ ಬಾರಿಸುವಲ್ಲಿ ವಿಫಲರಾಗಿದ್ದಾರೆ.

5. ವಿರಾಟ್ ಕೊಹ್ಲಿ
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ವರ್ಷ 4 ಪಂದ್ಯಗಳನ್ನಾಡಿ 6 ಇನ್ನಿಂಗ್ಸ್‌ನಲ್ಲಿ 200 ರನ್ ಕಲೆಹಾಕಿದ್ದು, ಈ ವರ್ಷ ಟೀಮ್ ಇಂಡಿಯಾ ಪರ ಅತಿ ಹೆಚ್ಚು ಟೆಸ್ಟ್ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications