IPL 2025: ಮೆಗಾ ಹರಾಜಿನಲ್ಲಿ ನಿವೃತ್ತಿ ಘೋಷಿಸಿರುವ ಟಾಪ್-5 ಆಟಗಾರರು; ಯಾರ ಕೈ ಹಿಡಿಯಲಿದೆ ಅದೃಷ್ಟ?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಮೆಗಾ ಹರಾಜಿ ಪ್ರಕ್ರಿಯೆಗೆ ಸ್ಥಳ ಮತ್ತು ದಿನಾಂಕ ಘೋಷಣೆ ಮಾಡಲಾಗಿದೆ. ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಇದಲ್ಲದೆ, ಐಪಿಎಲ್ 2025ರ ಆವೃತ್ತಿಗಾಗಿ ನೋಂದಾಯಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಹಿರಂಗಪಡಿಸಲಾಗಿದೆ.
ಐಪಿಎಲ್ 2025ರ ಆವೃತ್ತಿಯ ಮೆಗಾ ಹರಾಜು ಅಖಾಡದಲ್ಲಿರುವ ಕೆಲವು ಆಟಗಾರರು ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. ಆದರೆ, ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್‌ನಲ್ಲಿ ಆಡಲು ಸಜ್ಜಾಗಿದ್ದಾರೆ. ಅಂತಹ ಟಾಪ್ ಐದು ಸ್ಟಾರ್ ಆಟಗಾರರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಜೇಮ್ಸ್ ಆಂಡರ್ಸನ್
ಈ ಬಾರಿ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಜೇಮ್ಸ್ ಆಂಡರ್ಸನ್ ಕಾಣಿಸಿಕೊಂಡಿರುವುದು ಅಚ್ಚರಿ ತಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಂಡರ್ಸನ್ ಐಪಿಎಲ್ ಹರಾಜಿಗೆ ನೋಂದಾಯಿಸಿಕೊಂಡಿದ್ದಾರೆ. ಇತ್ತೀಚೆಗೆ ನಿವೃತ್ತರಾದ ಟೆಸ್ಟ್ ಸ್ಪೆಷಲಿಸ್ಟ್ ಆಂಡರ್ಸನ್ ಜುಲೈ 2024ರಲ್ಲಿ ಲಾರ್ಡ್ಸ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಈಗ ಆಂಡರ್ಸನ್ ತಮ್ಮ ಮೂಲ ಬೆಲೆಯನ್ನು 1.25 ಕೋಟಿ ರೂ. ಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಂಡರ್ಸನ್ ತಮ್ಮ ವೃತ್ತಿಜೀವನದಲ್ಲಿ 44 20 ಪಂದ್ಯಗಳನ್ನು ಆಡಿದ್ದು, 41 ವಿಕೆಟ್‌ಗಳನ್ನು ಪಡೆದಿದ್ದಾರೆ.
ಡೇವಿಡ್ ವಾರ್ನರ್
ಆಸ್ಟ್ರೇಲಿಯಾದ ಮಾಜಿ ಸ್ಫೋಟಕ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ತಮ್ಮ ಹೆಸರನ್ನು ಐಪಿಎಲ್ ಹರಾಜಿನಲ್ಲಿ ಇರಿಸಿಕೊಂಡಿದ್ದಾರೆ. ವಾರ್ನರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಉಳಿಸಿಕೊಂಡ ಆಟಗಾರರ ಪಟ್ಟಿಯಿಂದ ಕೈಬಿಡಲಾಗಿದೆ. ಐಪಿಎಲ್‌ನಲ್ಲಿ ವಾರ್ನರ್ ಸಾಕಷ್ಟು ದಾಖಲೆ ಮಾಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬೌಂಡರಿ (663) ಬಾರಿಸಿದ ಮೂರನೇ ಬ್ಯಾಟರ್ ಆಗಿದ್ದಾರೆ. ಅಲ್ಲದೆ, ಅವರ ಹೆಸರಿನಲ್ಲಿ ಅತಿ ಹೆಚ್ಚು ಅರ್ಧಶತಕ (66) ಹೊಂದಿರುವ ದಾಖಲೆಯನ್ನೂ ಹೊಂದಿದ್ದಾರೆ.
ಫಾಫ್ ಡು ಪ್ಲೆಸಿಸ್
2022 ರಿಂದ 2024 ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಮುನ್ನಡೆಸಿದ್ದ ನಾಯಕ ಫಾಫ್ ಡು ಪ್ಲೆಸಿಸ್ ಅವರನ್ನು ಮುಂಬರುವ ಆವೃತ್ತಿಗೆ ಫ್ರಾಂಚೈಸಿ ಉಳಿಸಿಕೊಂಡಿಲ್ಲ. ಫಾಫ್ ಕಳೆದ ಎರಡು ಆವೃತ್ತಿಗಳಲ್ಲಿ ಆರ್‌ಸಿಬಿ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಐಪಿಎಲ್ 2024ರ ಅವರು ನಾಯಕತ್ವದಲ್ಲಿ ಸತತ 7 ಗೆಲುವುಗಳೊಂದಿಗೆ ಆರ್‌ಸಿಬಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿತ್ತು.
ಮೊಯಿನ್ ಅಲಿ
ಮಾಜಿ ಇಂಗ್ಲೆಂಡ್ ತಂಡದ ಆಟಗಾರ ಮೊಯಿನ್ ಅಲಿ 2018ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು. ನಂತರ ಚೆನ್ನೈ ಸೂಪರ್ ಕಿಂಗ್ಸ್‌ನ ಭಾಗವಾದರು. 2023 ರಲ್ಲಿ ಸಿಎಸ್‌ಕೆ ಐದನೇ ಐಪಿಎಲ್ ಪ್ರಶಸ್ತಿ ಗೆಲ್ಲುವಲ್ಲಿ ಅಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಐಪಿಎಲ್ 2025ರ ಟೂರ್ನಿಗಾಗಿ ಅಲಿ ಅವರನ್ನು ಸಿಎಸ್‌ಕೆ ಉಳಿಸಿಕೊಂಡಿಲ್ಲ. ಹೀಗಾಗಿ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅವರು ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೆ 67 ಪಂದ್ಯಗಳನ್ನು ಆಡಿದ್ದು, 1162 ರನ್ ಗಳಿಸಿದ್ದಾರೆ. ಮೊಯಿನ್ ಅಲಿ ಐಪಿಎಲ್ ಮಾತ್ರವಲ್ಲದೆ, ಪ್ರಪಂಚದಾದ್ಯಂತ ವಿವಿಧ ಫ್ರಾಂಚೈಸ್ ಲೀಗ್‌ಗಳನ್ನು ಆಡಿದ ಅಪಾರ ಅನುಭವವನ್ನು ಹೊಂದಿದ್ದಾರೆ.
ಟ್ರೆಂಟ್ ಬೌಲ್ಟ್
ಅಪಾಯಕಾರಿ ಸ್ವಿಂಗ್ ಬೌಲರ್‌ಗಳಲ್ಲಿ ಒಬ್ಬರಾದ ನ್ಯೂಜಿಲೆಂಡ್ ತಂಡದ ಟ್ರೆಂಟ್ ಬೌಲ್ಟ್ ಅವರು
ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯಿಂದ ಹೊರ ಬಂದಿದ್ದಾರೆ. ಬೌಲ್ಟ್ ಪವರ್‌ಪ್ಲೇ ಓವರ್‌ಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಈಗ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿರುವ ಅವರು ತಮ್ಮ ಅದೃಷ್ಟ ಪರೀಕ್ಷೆಯನ್ನು ನೋಡಲು ಸಿದ್ಧರಾಗಿದ್ದಾರೆ. ಟೀಮ್ ಇಂಡಿಯಾದ ಭುವನೇಶ್ವರ್ ಕುಮಾರ್ ನಂತರ, ಬೌಲ್ಟ್ ಪವರ್‌ಪ್ಲೇನಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ (63) ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಬೋಲ್ಟ್ ಐಪಿಎಲ್‌ನಲ್ಲಿ 104 ಪಂದ್ಯಗಳನ್ನು ಆಡಿದ್ದು, 121 ವಿಕೆಟ್‌ಗಳನ್ನು ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications