Team India: ಚಾಂಪಿಯನ್ಸ್ ಟ್ರೋಫಿಯಲ್ಲಿ ಅಬ್ಬರಿಸಿರುವ ಟೀಮ್ ಇಂಡಿಯಾ ಬ್ಯಾಟರ್ಸ್
ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದೊಂದಿಗೆ ಭಾರತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯೂ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಮಿಂಚಿದ್ದಾರೆ. ಇದುವರೆಗೆ ಈ ಮೆಗಾ ಟೂರ್ನಿಯಲ್ಲಿ ಮಿಂಚಿರುವ ಟಾಪ್-5 ಟೀಮ್ ಇಂಡಿಯಾ ಬ್ಯಾಟರ್ಸ್ ಬಗ್ಗೆ ಇಲ್ಲಿದೆ ಮಾಹಿತಿ.
ಭಾರತದ ಪರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವಾಗ ಮಾಜಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ಅಬ್ಬರಿಸಿದ್ದಾರೆ. ಈಗಾಗಲೇ ಅವರಿಗೆ 'ಮಿಸ್ಟರ್ ಐಸಿಸಿ' ಎಂಬ ಹೆಸರೂ ಬಂದಿದೆ. ಶಿಖರ್ ಧವನ್ 10 ಇನ್ನಿಂಗ್ಸ್‌ಗಳಲ್ಲಿ 701 ರನ್ ಗಳಿಸಿದ್ದಾರೆ. ಈ ಮೂಲಕ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಹೆಸರು ಎರಡನೇ ಸ್ಥಾನದಲ್ಲಿದೆ. ಗಂಗೂಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಚಾಂಪಿಯನ್ ಮಾಡಿದ್ದಾರೆ. ಅವರು 13 ಪಂದ್ಯಗಳಲ್ಲಿ 665 ರನ್ ಗಳಿಸಿದ್ದಾರೆ.
ರಾಹುಲ್ ದಾವಿಡ್ ಚಾಂಪಿಯನ್ಸ್ ಟ್ರೋಫಿಯಲ್ಲಿ ತಮ್ಮ ಕ್ಲಾಸಿಕ್ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ 15 ಇನ್ನಿಂಗ್ಸ್‌ಗಳನ್ನು ಆಡಿ 627 ರನ್ ಗಳಿಸಿದ ರಾಹುಲ್ ದ್ರಾವಿಡ್ ಅವರ ಪಟ್ಟಿಯಲ್ಲಿ ಮೂರನೇ ಹೆಸರು.
ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಅವರು 12 ಇನ್ನಿಂಗ್ಸ್‌ಗಳಲ್ಲಿ ಒಟ್ಟು 529 ರನ್ ಗಳಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿಂಗ್ ಕೊಹ್ಲಿ ಅವರ ಹೆಸರಿನಲ್ಲಿ ಐದು ಅರ್ಧ ಶತಕಗಳಿವೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕೊನೆಯ ಹೆಸರು ನಾಯಕ ರೋಹಿತ್ ಶರ್ಮಾ ಅವರದ್ದು. ರೋಹಿತ್ ಚಾಂಪಿಯನ್ಸ್ ಟ್ರೋಫಿಯಲ್ಲಿ 10 ಇನ್ನಿಂಗ್ಸ್‌ಗಳಲ್ಲಿ 81 ರನ್ ಗಳಿಸಿದ್ದಾರೆ. ಈ ಟೂರ್ನಿಯಲ್ಲಿ ಅವರು ಒಂದು ಶತಕ ಮತ್ತು ನಾಲ್ಕು ಅರ್ಧ ಶತಕಗಳು ಸಿಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications