Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್‌ ಇತಿಹಾಸದಲ್ಲಿ ಗರಿಷ್ಠ ರನ್ ಕಲೆ ಹಾಕಿದ ಟಾಪ್‌ 5 ವಿಕೆಟ್ ಕೀಪರ್ಸ್‌

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ರೋಚಕ ಘಟ್ಟದತ್ತ ಮುಖ ಮಾಡಿದೆ. ಈ ಬಾರಿಯ ಲೀಗ್‌ನಲ್ಲಿ ಹಲವು ಸ್ಟಾರ್ ಆಟಗಾರರು ಸಹ ಸ್ಥಿರ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಇನ್ನು ಈ ಲೀಗ್‌ನಲ್ಲಿ ವಿಕೆಟ್‌ ಕೀಪರ್ ಬ್ಯಾಟರ್‌ಗಳು ಸಹ ಆರ್ಭಟಿಸಿದ್ದಾರೆ. ಐಪಿಎಲ್‌ ಇತಿಹಾಸದ ಪುಟಗಳನ್ನು ಒಮ್ಮೆ ತಿರುವು ನೋಡಿದಾಗ ವಿಕೆಟ್‌ ಕೀಪರ್‌ಗಳು ಸಹ ತಮ್ಮ ಸ್ಥಿರ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಧಾರವಾಗಿದ್ದಾರೆ.

ಈಗಾಗಲೇ 18 ಆವೃತ್ತಿಯ ಐಪಿಎಲ್‌ ನಡೆದಿವೆ. ಈ ವೇಳೆ ಹಲವು ವಿಕೆಟ್ ಕೀಪರ್ ಬ್ಯಾಟರ್‌ಗಳು ಸಿಕ್ಕ ಅವಕಾಶವನ್ನು ಬಳಸಿಕೊಂಡು ಅಬ್ಬರಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ಗಳನ್ನು ಕಲೆ ಹಾಕಿದ ಟಾಪ್‌ 5 ಬ್ಯಾಟರ್‌ಗಳ ಪಟ್ಟಿ ಇಲ್ಲಿದೆ.

Top 5 Wicket-Keeper

ಎಂಎಸ್ ಧೋನಿ

ಮಹೇಂದ್ರ ಸಿಂಗ್ ಧೋನಿ ವಿಕೆಟ್‌ ಕೀಪರ್ ಬ್ಯಾಟರ್‌ ಆಗಿ ಅತಿ ಹೆಚ್ಚು ರನ್‌ ಕಲೆ ಹಾಕಿದ ಕೀರ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಐಪಿಎಲ್‌ನಲ್ಲಿ 272 ಪಂದ್ಯಗಳನ್ನು ಸಿಎಸ್‌ಕೆ, ಪುಣೆ ತಂಡದ ಪರ ಕಣಕ್ಕೆ ಇಳಿದು 5321 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರು 24 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ದಿನೇಶ್ ಕಾರ್ತಿಕ್

ವಿಕೆಟ್‌ ಕೀಪರ್ ಆಗಿ ಅತಿ ಹೆಚ್ಚು ರನ್‌ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ದಿನೇಶ್‌ ಕಾರ್ತಿಕ್‌ಗೆ ಎರಡನೇ ಸ್ಥಾನ. ಇವರು 6 ತಂಡಗಳ ಪರ ಐಪಿಎಲ್‌ನಲ್ಲಿ ಕಣಕ್ಕೆ ಇಳಿದಿದ್ದಾರೆ. ಈ ವೇಳೆ 236 ಪಂದ್ಯಗಳಲ್ಲಿ 4463 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರ ಸರಾಸರಿ 26 ಆಗಿದೆ.

ಕೆಎಲ್ ರಾಹುಲ್‌

ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್‌ ಅವರು ಸಹ ವಿಕೆಟ್‌ ಕೀಪರ್ ಬ್ಯಾಟರ್‌ ಆಗಿ ಮಿಂಚು ಹರಿಸುತ್ತಿರುವ ಆಟಗಾರ. ಇವರು ಐಪಿಎಲ್‌ನಲ್ಲಿ 5 ತಂಡಗಳ ಪರ ಆಡಿದ್ದಾರೆ. ಈ ವೇಳೆ ಇವರು 96 ಪಂದ್ಯಗಳಲ್ಲಿ 50ರ ಸರಾಸರಿಯಲ್ಲಿ 3917 ರನ್‌ ಕಲೆ ಹಾಕಿದ್ದಾರೆ.

ರಿಷಭ್ ಪಂತ್‌

ವಿಕೆಟ್‌ ಕೀಪರ್ ಆಗಿ ಮಿಂಚು ಹರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ರಿಷಭ್ ಪಂತ್‌ ಅವರಿಗೂ ಸ್ಥಾನ. ಇವರು ಆಡಿದ 127 ಪಂದ್ಯಗಳಲ್ಲಿ 3606 ರನ್ ಕಲೆ ಹಾಕಿದ್ದಾರೆ. ಈ ವೇಳೆ ಇವರು 2 ಶತಕ ಹಾಗೂ 19 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಸಂಜು ಸ್ಯಾಮ್ಸನ್‌

ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್‌ ಸಂಜು ಸ್ಯಾಮ್ಸನ್ ಅವರು ಸ್ಥಿರ ಪ್ರದರ್ಶನ ನೀಡಿದ ವಿಕೆಟ್‌ ಕೀಪರ್ ಬ್ಯಾಟರ್‌. ಇವರು ಆಡಿದ 128 ಪಂದ್ಯಗಳಲ್ಲಿ 33ರ ಸರಾಸರಿಯಲ್ಲಿ 3584 ರನ್‌ ಕಲೆ ಹಾಕಿದ್ದಾರೆ. ಈ ವೇಳೆ 3 ಶತಕ ಹಾಗೂ 19 ಅರ್ಧಶತಕ ಚಚ್ಚಿದ್ದಾರೆ.

Story first published: Tuesday, May 19, 2026, 12:35 [IST]
Other articles published on May 19, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+