Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asia Cup T20: ಟೂರ್ನಿಯಲ್ಲಿ ಹೆಚ್ಚು ವಿಕೆಟ್‌ ಪಡೆದ ಟಾಪ್ 5 ಬೌಲರ್ಸ್‌

ಸೆಪ್ಟಂಬರ್‌ 9 ರಂದು ಯುಎಇನಲ್ಲಿ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಯನ್ನು ಭಾರತ ಆಯೋಜಿಸುತ್ತಿದೆ. ಮೂರನೇ ಆವೃತ್ತಿಯ ಏಷ್ಯಾ ಕಪ್ ಟಿ20 ಟೂರ್ನಿಗೆ ಭರದ ಸಿದ್ಧತೆಗಳು ನಡೆದಿವೆ. ಚುಟುಕು ಫಾರ್ಮೆಟ್‌ ಅಂದರೆ ಬ್ಯಾಟರ್‌ಗಳ ಅಬ್ಬರ ಜೋರಾಗಿರುತ್ತೆ. ಇದೇ ವೇಳೆ ಬೌಲರ್‌ಗಳು ಸಹ ಬಿಗುವಿನ ದಾಳಿ ನಡೆಸಿ ಎದುರಾಳಿ ಬ್ಯಾಟರ್‌ಗಳನ್ನು ಕಾಡಿದ್ದಾರೆ. ಏಷ್ಯಾ ಕಪ್‌ ಟಿ20 ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್ ಯಾರು ಎಂಬ ಪ್ರಶ್ನೆಗೆ ಉತ್ತರ ಈ ವರದಿಯಲ್ಲಿದೆ.

ಈಗಾಗಲೇ ಎರಡು ಆವೃತ್ತಿಯ ಏಷ್ಯಾ ಕಪ್‌ ಟಿ20 ಟೂರ್ನಿಯನ್ನು ಆಯೋಜಿಸಲಾಗಿದೆ. ಈ ವೇಳೆ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಬಾರಿಸಿದ ಸಾಧಕರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇನ್ನು ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಭುವನೇಶ್ವರ್ ಕುಮಾರ್ ಅಗ್ರ ಸ್ಥಾನದಲ್ಲಿದ್ದಾರೆ. ಇವರು ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿಗಳನ್ನು ಕಾಡಿದ್ದಾರೆ. ಭುವಿ ಆಡಿದ 6 ಏಷ್ಯಾ ಕಪ್‌ ಟಿ20 ಪಂದ್ಯದಲ್ಲಿ ಒಟ್ಟು 13 ವಿಕೆಟ್‌ ಪಡೆದು, ಮೊದಲ ಸ್ಥಾನದಲ್ಲಿದ್ದಾರೆ. ಇವರ ಏಕನಾಮ 9.46 ಹೊಂದಿದ್ದಾರೆ.

Top Bowlers in Asia Cup T20 History Bhuvneshwar Kumar Leads with Most Wickets

ಯುಎಇ ಭರವಸೆಯ ಬೌಲರ್ ಅಜ್ಮದ್ ಜಾವೀದ್ ಅತಿ ಹೆಚ್ಚು ವಿಕೆಟ್‌ ಪಡೆದ ಸಾಧಕರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇವರು ಆಡಿದ 7 ಪಂದ್ಯಗಳಲ್ಲಿ 14.08ರ ಸರಾಸರಿಯಲ್ಲಿ12 ವಿಕೆಟ್‌ ಪಡೆದಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿ ಯುಎಇ ತಂಡದ ಮೊಹಮ್ಮದ್ ನವೀದ್ ಇದ್ದಾರೆ. ಇವರು ಆಡಿದ 7 ಪಂದ್ಯಗಳಲ್ಲಿ 11 ವಿಕೆಟ್‌ ಪಡೆದಿದ್ದಾರೆ.

ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಬೌಲರ್ ರಾಶೀದ್ ಖಾನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇವರು ಆಡಿದ 8 ಪಂದ್ಯಗಳಲ್ಲಿ 11 ವಿಕೆಟ‌ ಕಬಳಿಸಿದ್ದಾರೆ. ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆದಿದ್ದಾರೆ. ಇವರು ಆಡಿದ 8 ಪಂದ್ಯಗಳಲ್ಲಿ 11 ವಿಕೆಟ್‌ ಪಡೆದಿದ್ದಾರೆ.

Top Bowlers in Asia Cup T20 History Bhuvneshwar Kumar Leads with Most Wickets

ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾರತದ ಪರ ಹೆಚ್ಚು ವಿಕೆಟ್ ಪಡೆದ ಸಾಧಕರು

ಭುವನೇಶ್ವರ್ ಕುಮಾರ್, 6 ಪಂದ್ಯ, 13 ವಿಕೆಟ್‌
ಹಾರ್ದಿಕ್ ಪಾಂಡ್ಯ, 8 ಪಂದ್ಯ, 11 ವಿಕೆಟ್‌
ಜಸ್ಪ್ರೀತ್ ಬುಮ್ರಾ, 5 ಪಂದ್ಯ, 6 ವಿಕೆಟ್‌
ಆರ್‌ ಅಶ್ವಿನ್‌, 6 ಪಂದ್ಯ, 6 ವಿಕೆಟ್‌
ಆಶೀಶ್ ನೆಹ್ರಾ, 4 ಪಂದ್ಯ, 6 ವಿಕೆಟ್

Story first published: Thursday, August 28, 2025, 21:27 [IST]
Other articles published on Aug 28, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+