ಕ್ರಿಕೆಟ್‌ನಲ್ಲಿ ರನ್ ಗಳಿಸುವುದರ ಜೊತೆಗೆ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯುವುದು ಮುಖ್ಯ. ಸಾಕಷ್ಟು ಕ್ರಿಕೆಟಿಗರು ಶತಕಗಳನ್ನು ಹೊಡೆದಿದ್ದಾರೆ. ಆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಶತಕಗಳನ್ನು ಗಳಿಸಿದ ಆಟಗಾರರು ಕೆಲವೇ ಕೆಲವು ಆಟಗಾರರು.
ಮ್ಮ 50 ಶತಕಗಳನ್ನು ಪೂರೈಸಲು ಸಾಕಷ್ಟು ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡ ಅನೇಕ ಕ್ರಿಕೆಟಿಗರು ಜಗತ್ತಿನಲ್ಲಿದ್ದಾರೆ. ಆದರೆ 50 ಶತಕಗಳನ್ನು ಪೂರೈಸಲು ಕಡಿಮೆ ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡ ಕ್ರಿಕೆಟಿಗರ ಬಗ್ಗೆ ಇಲ್ಲಿದೆ ಮಾಹಿತಿ

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೇಗವಾಗಿ 50 ಶತಕಗಳನ್ನು ಸಿಡಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. 50 ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸಲು ಕೊಹ್ಲಿ 348 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ. ವಿರಾಟ್ ಎಲ್ಲಾ ಮೂರು ಮಾದರಿಗಳಲ್ಲಿ ಒಟ್ಟು 80 ಶತಕಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ನಂತರ ಅತಿ ಹೆಚ್ಚು ಶತಕ ಬಾರಿಸಿದ ವಿಶ್ವದ ಎರಡನೇ ಬ್ಯಾಟರ್ ಎಂಬ ದಾಖಲೆಯನ್ನು ಹೊಂದಿದ್ದಾರೆ.
ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹಾಶಿಮ್ ಆಮ್ಲಾ ಅವರು ಅತಿ ವೇಗದ 50 ಅಂತರಾಷ್ಟ್ರೀಯ ಶತಕಗಳನ್ನು ಗಳಿಸಿದ ವಿಶ್ವದ ಎರಡನೇ ಬ್ಯಾಟರ್. ಆಮ್ಲಾ 348 ಇನ್ನಿಂಗ್ಸ್‌ಗಳಲ್ಲಿ 50 ಅಂತಾರಾಷ್ಟ್ರೀಯ ಶತಕಗಳನ್ನು ಪೂರೈಸಿದ್ದಾರೆ. ದಕ್ಷಿಣ ಆಫ್ರಿಕಾ ಪರ ಟೆಸ್ಟ್ ಮತ್ತು ಏಕದಿನ ಮಾದರಿ ಸೇರಿದಂತೆ ಒಟ್ಟು 55 ಶತಕಗಳನ್ನು ಹೊಂದಿದ್ದಾರೆ.
ಭಾರತದ ದಿಗ್ಗ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅತಿ ವೇಗವಾಗಿ 50 ಅಂತರಾಷ್ಟ್ರೀಯ ಶತಕಗಳಿಸಿದ ಮೂರನೇ ಬ್ಯಾಟರ್ ಆಗಿದ್ದಾರೆ. ಅವರು 50 ಅಂತಾರಾಷ್ಟ್ರೀಯ ಶತಕಗಳನ್ನು ಪೂರೈಸಲು 376 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ. ಟೆಸ್ಟ್ ಮತ್ತು ಏಕದಿನದಲ್ಲಿ ಒಟ್ಟು 100 ಶತಕಗಳನ್ನು ಹೊಂದಿರುವ ವಿಶ್ವದ ಏಕೈಕ ಕ್ರಿಕೆಟಿಗರಾಗಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 50 ಶತಕಗಳನ್ನು ಗಳಿಸಿದ ನಾಲ್ಕನೇ ಬ್ಯಾಟರ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್. ಅವರು 418 ಇನ್ನಿಂಗ್ಸ್‌ಗಳಲ್ಲಿ 50 ಅಂತಾರಾಷ್ಟ್ರೀಯ ಶತಕಗಳನ್ನು ಹೊಡೆದಿದ್ದಾರೆ. ಒಟ್ಟು 71 ಅಂತಾರಾಷ್ಟ್ರೀಯ ಶತಕಗಳನ್ನು ಹೊಂದಿದ್ದಾರೆ.
ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಜೋ ರೂಟ್ ಅತಿ ವೇಗವಾಗಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಶತಕಗಳನ್ನು ಬಾರಿಸಿ ಐದನೇ ಬ್ಯಾಟರ್ ಆಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಒಂದೇ ಪಂದ್ಯದಲ್ಲಿ ಎರಡು ಶತಕಗಳನ್ನು ಗಳಿಸುವ ಮೂಲಕ ಈ ದಾಖಲೆಯನ್ನು ಮಾಡಿದ್ದಾರೆ.
ರೂಟ್ 455 ಇನ್ನಿಂಗ್ಸ್‌ಗಳಲ್ಲಿ 50 ಅಂತಾರಾಷ್ಟ್ರೀಯ ಶತಕಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಹೆಸರಿನಲ್ಲಿ ಒಟ್ಟು 50 ಅಂತಾರಾಷ್ಟ್ರೀಯ ಶತಕಗಳಿವೆ.