ಏ. 25ರಂದು ಆರ್ ಸಿಬಿ vs ಹೈದರಾಬಾದ್ ಪಂದ್ಯ, ವಾಹನ ನಿಲುಗಡೆ ಎಲ್ಲಿ?
ಬೆಂಗಳೂರು, ಏಪ್ರಿಲ್ 24: ಬೆಂಗಳೂರು ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಂಗಳವಾರ (ಏಪ್ರಿಲ್ 24) ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ ಎಚ್) ನಡುವೆ ಐ.ಪಿ.ಎಲ್ 10ರ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ಸುತ್ತಾ ಮುತ್ತಾ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ನಿಷೇಧ ಹೇರಿ ಬೆಂಗಳೂರು ಟ್ರಾಫಿಕ್ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಐಪಿಎಲ್ 2017: ಆರ್ ಸಿಬಿ ವೇಳಾಪಟ್ಟಿ | ಸಂಪೂರ್ಣ ವೇಳಾಪಟ್ಟಿ | ಆರ್ ಸಿಬಿ ಪಡೆ | ಗ್ಯಾಲರಿ
ಕೆ.ಎಸ್.ಸಿ.ಎ. ಸ್ಟೇಡಿಯಂ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಈ ಕೆಳಕಂಡಂತೆ ಸಂಚಾರ ನಿರ್ಬಂಧನೆ ಮಾಡಲಾಗಿರುತ್ತದೆ. ಈ ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30 ಗಂಟೆಯವರೆಗೆ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ.[ಐಪಿಎಲ್ ದಶಮಾನೋತ್ಸವ: ಟಾಪ್ 10 ಮೊತ್ತ ದಾಖಲಿಸಿದ ತಂಡಗಳಿವು!]
1) ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
2) ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
3) ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ.
4) ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ.
5) ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ.
6) ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ
ನಿಲುಗಡೆಯನ್ನು ನಿರ್ಬಂಧಿಸಿದೆ.[ಹೀನಾಯ ಸೋಲಿನಲ್ಲೂ ದಾಖಲೆ ಬರೆದ ಆರ್ ಸಿಬಿ]
7) ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ಎಸ್.ಬಿ.ಐ ವೃತ್ತದಿಂದ ಆಶೀರ್ವಾದಂ ವೃತ್ತದ ವರೆಗೆ.
8) ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ.
9) ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್‌ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.

10) ಕಬ್ಬನ್ ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಪೌಂಟೇನ್ ರಸ್ತೆ.
11) ಕ್ವೀನ್ಸ್ ವೃತ್ತದಿಂದ ಲ್ಯಾವೆಲ್ಲಿ ರಸ್ತೆಯಲ್ಲಿ ಗ್ರಾಂಟ್ ಜಂಕ್ಷನ್ ವರೆಗೆ
12)ಸಿದ್ದಲಿಂಗಯ್ಯ ವೃತ್ತದಿಂದ ವಿಠಲ್ ಮಲ್ಯ ರಸ್ತೆಯಲ್ಲಿ ಬಿಷಪ್‌ಕಾಟನ್ ಬಾಲಕೀಯರ ಶಾಲೆಯವರೆಗೆ
**
ಎಲ್ಲಿ ಪಾರ್ಕ್ ಮಾಡಬಹುದು:
ಈ ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30 ಗಂಟೆವರೆಗೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿರುತ್ತದೆ.[ಕೆಕೆಆರ್ ವಿರುದ್ಧ ಆರ್ ಸಿಬಿಗೆ ಅತ್ಯಂತ ಹೀನಾಯ ಸೋಲು]
1) ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್ ಜೋಸೆಫ್ ಯೂರೋಪಿಯನ್ ಬಾಲಕರ ಶಾಲಾ ಮೈದಾನ, ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಕಂಠೀರವ ಕ್ರೀಡಾಂಗಣ, ಬೌರಿಂಗ್ ಇನ್ಸ್ಟಿಟ್ಯೂಟ್ ಮತ್ತು ಬಿ.ಆರ್.ವಿ. ಮೈದಾನದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
2) ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ
3) ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಮಾರ್ಕ್ಸ್ ಚರ್ಚ್ ಅತಿಗಣ್ಯ ವ್ಯಕ್ತಿಗಳ ವಾಹನಗಳನ್ನು ಯು.ಬಿ.ಸಿಟಿ ಪೇ ಅಂಡ್ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ
4) ಬಿ.ಎಂ.ಟಿ.ಸಿ ವಾಹನಗಳನ್ನು ಹಾಗೂ ಮೆಟ್ರೋ ಸೇವೆಯನ್ನು ಬಳಸಲು ಕೋರಿದೆ. ಪಂದ್ಯ ಮುಗಿದ ನಂತರ ಬಿ.ಎಂ.ಟಿ.ಸಿ ವತಿಯಿಂದ ನಗರದ ಎಲ್ಲಾ ಭಾಗಗಳಿಗೂ ಬಸ್ ವ್ಯವಸ್ಥೆ ಮಾಡಲಾಗಿದೆ.
5) ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್‌ಪಾರ್ಕ್ ಒಳಭಾಗದ ಕೆ.ಜಿ.ಐ.ಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಒಳ ಮತ್ತು ಹೊರ ಹೋಗಲು ಪ್ರೇಕ್ಷಕರುಗಳಿಗೆ (ಪಾದಚಾರಿಗಳಿಗೆ)
ಅನುವು ಮಾಡಿರುವ ಬಗ್ಗೆ :-
1) ಗೇಟ್‌ನಂ-1ರಿಂದ ಗೇಟ್ ನಂ-6 ಕಬ್ಬನ್ ರಸ್ತೆಯಲ್ಲಿದ್ದು ಪಾದಚಾರಿಗಳಿಗೆ / ವೀಕ್ಷಕರುಗಳಿಗೆ ಹೋಗಲು ಅವಕಾಶ ಕಲ್ಪಿಸಿದೆ.
2) ಗೇಟ್ ನಂ. 7 ರಿಂದ ಗೇಟ್ ನಂ 11 ರವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತದಿಂದ ಬಿ. ಆರ್ ವಿ ವೃತ್ತದಿಂದ
ಹೋಗಬಹುದಾಗಿರುತ್ತದೆ.
3) ಗೇಟ್ ನಂ. 12 ರಿಂದ 21 ವರೆಗೆ ಕ್ವೀನ್ಸ್ ರಸ್ತೆಯಲ್ಲಿದ್ದು, ಇಲ್ಲಿಗೆ ಪಾದಚಾರಿ/ವೀಕ್ಷಕರುಗಳಿಗೆ ಪ್ರವೇಶ ಕಲ್ಪಿಸಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications