For Quick Alerts
ALLOW NOTIFICATIONS  
For Daily Alerts
 

ಕಾಲ್ತುಳಿತದಲ್ಲಿ 11 ಜನರ ಸಾವು: KSCA ಅಧಿಕಾರಿಗಳ ರಾಜೀನಾಮೆ

ಆರ್‌ಸಿಬಿ ತಂಡ 17 ವರ್ಷಗಳ ಬಳಿಕ ಐಪಿಎಲ್‌ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 6 ರನ್‌ಗಳಿದ ಪಂಜಾಬ್‌ ಕಿಂಗ್ಸ್ ತಂಡವನ್ನು ಮಣಿಸಿ ಪ್ರಶಸ್ತಿಗೆ ಮುತ್ತಿಟ್ಟಿತು. ಈ ಸಂಭ್ರಮಾಚರಣೆ ಬೆಂಗಳೂರಿನ ರಸ್ತೆಗಳಲ್ಲಿ ತಡರಾತ್ರಿಯ ವರೆಗೆ ನಡೆಯಿತು. ಬುಧವಾರ ಮಧ್ಯಾಹ್ನ ವಿಜೇತ ತಂಡ ಬೆಂಗಳೂರಿಗೆ ಬಂದಿಳಿಯಿತು. ಅಲ್ಲದೆ ವಿಧಾನಸೌಧದ ಮುಂಭಾಗಲ್ಲಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಆಟಗಾರರಿಗೆ ಚಿನ್ನಸ್ವಾಮಿ ಅಂಗಳದಲ್ಲಿ ಗೌರವ ಸೂಚಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅಭಿಮನಿಗಳು ನಿಯಂತ್ರಣಕ್ಕೂ ಹೆಚ್ಚಾಗಿ ಬಂದಿದ್ದರು. ಇವರನ್ನು ನಿಯಂತ್ರಿಸಲು ಸಾಧ್ಯವೇ ಆಗಲಿಲ್ಲ. ಈ ವೇಳೆ ನೂಕುನುಗ್ಗಲು ನಡೆದು 11 ಜನ ಸಾವನ್ನಪ್ಪಿದರು.

Tragedy Strikes RCB Victory Parade 11 Dead KSCA Officials Resign

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಮೂರು ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಇದರ ಪರಿಣಮ ಆರ್‌ಸಿಬಿ ಮಾರ್ಕೆಟಿಂಗ್ ಹೆಡ್‌ ನಿಖಿಲ್‌ ಸೋಸ್ಲೆ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಇವರು ಬೆಂಗಳೂರಿನಿಂದ ಮುಂಬೈಗೆ ಹಾರಲು ಬಯಸಿದ್ದರು. ಆಗ ಪೊಲೀಸರು ಇವರನ್ನು ಬಂಧಿಸಿಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯ 3 ಉದ್ಯೋಗಿಗಳನ್ನು ಬಂಧಿಸಿದ್ದಾರೆ. ನ್ಯಾಯಾಲಯವು ನಾಲ್ವರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ.

Tragedy Strikes RCB Victory Parade 11 Dead KSCA Officials Resign

ರಾಜೀನಾಮೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಘದ ಕಾರ್ಯದರ್ಶಿ ಎ ಶಂಕರ್, ಖಜಾಂಚಿ ಇ ಜಯರಾಮ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಇಬ್ಬರೂ ಅಧಿಕಾರಿಗಳು ನೈತಿಕ ಹೊಣೆ ಹೊತ್ತು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇನ್ನು ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಭ್ರಮಾಚರಣೆಯ ವೇಳೆ ನಡೆದ ಘಟನೆಯಿಂದಾಗಿ ತಾವು ತಮ್ಮ ರಾಜೀನಾಮೆ ನೀಡಿದ್ದಾರೆ. ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆ ಜಯರಾಮ್‌, ಶಂಕರ್‌ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಈ ಬಗ್ಗೆ ಬ್ರಿಜೇಶ್‌ ಪಟೇಲ್‌ ನೇತೃತ್ವದಲ್ಲಿ ಸಭೆ ನಡೆದಿದ್ದು, ರಾಜೀನಾಮೆಗೆ ಸೂಚಿಸಲಾಗಿತ್ತು ಎಂದು ತಿಳಿದು ಬಂದಿದೆ. ತೆರವಾಗಿರುವ ಸ್ಥಾನವನ್ನು ಸದ್ಯ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್‌ ನೇಮಕ ಗೊಂಡಿದ್ದಾರೆ.

Story first published: Saturday, June 7, 2025, 16:50 [IST]
Other articles published on Jun 7, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+