For Quick Alerts
ALLOW NOTIFICATIONS  
For Daily Alerts
 

Travis Head: ಅಬ್ಬರಿಸಲು ಪ್ಲ್ಯಾನ್ ಮಾಡಿಕೊಂಡಿರುವ ಟ್ರಾವಿಸ್ ಹೆಡ್‌

ಜೂನ್‌ 11 ರಂದು ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದು ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಡುವ ಕನಸುನ್ನು ದಕ್ಷಿಣ ಆಫ್ರಿಕಾ ತಂಡ ಹಾಕಿಕೊಂಡಿದ್ದರೆ, ಆಸ್ಟ್ರೇಲಿಯಾ ಎರಡನೇ ಬಾರಿಗೆ ಆಸೀಸ್ ಟ್ರೋಫಿ ಎತ್ತಿ ಹಿಡಿಯುವ ಪ್ಲ್ಯಾನ್ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಹಲವು ಸ್ಟಾರ್ ಆಟಗಾರರು ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಈ ಸಾಲಿನಲ್ಲಿ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್‌ ಸಹ ಸೇರುತ್ತಾರೆ.

ಲಾರ್ಡ್ಸ್‌ನಲ್ಲಿ ನಡೆಯಲಿರುವ ಟೆಸ್ಟ್‌ ಪಂದ್ಯದಲ್ಲಿ ಟ್ರಾವಿಸ್‌ ಹೆಡ್‌ ದೊಡ್ಡ ಸಾಧನೆಯನ್ನು ಮಾಡುವ ಕನಸಿನಲ್ಲಿದ್ದಾರೆ. ಇವರು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಇತಿಹಾಸ ಬರೆಯುವ ಕನಸಿನಲ್ಲಿದ್ದಾರೆ. ಮೂರನೇ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಮುಕುಟ ಯಾರ ಪಾಲಾಗುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೂ ಮೊದಲು 2021ರಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌, ಭಾರತ ತಂಡವನ್ನು ಮಣಿಸಿ ಪ್ರಶಸ್ತಿಗೆ ಮುತ್ತಿಟ್ಟಿತ್ತು. ಇನ್ನು 2023ರಲ್ಲಿ ಆಸ್ಟ್ರೇಲಿಯಾ, ರೋಹಿತ್ ಪಡೆಯನ್ನು ಮಣಿಸಿ ಪ್ರಶಸ್ತಿ ಎತ್ತಿ ಸಂಭ್ರಮಿಸಿತ್ತು.

Travis Head Aims for Historic Feats in World Test Championship Final

ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟರ್‌ ಟ್ರಾವಿಸ್‌ ಹೆಡ್‌ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಇವರು ಮಹತ್ವದ ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಬಲ್ಲ ಪ್ಲೇಯರ್. ಇವರು ಕಳೆದ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಕ್ಲಾಸಿಕ್ ಬ್ಯಾಟಿಂಗ್ ನಡೆಸಿದರು. ಈ ವೇಳೆ ಹೆಡ್‌ 174 ಎಸೆತಗಳನ್ನು ಎದುರಿಸಿ 163 ರನ್ ಸಿಡಿಸಿದ್ದರು. ಇನ್ನು ಭಾರತದ ವಿರುದ್ಧ ಎರಡನೇ ಇನಿಂಗ್ಸ್‌ನಲ್ಲಿ 18 ರನ್‌ಗಳಿಗೆ ಆಟ ಮುಗಿಸಿದರು. ಫೈನಲ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟ್ರಾವಿಸ್ ಹೆಡ್ ಅಬ್ಬರವನ್ನು ನಡೆಸಿದ್ದರಿಂದ ಇವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Travis Head Aims for Historic Feats in World Test Championship Final

ದಾಖಲೆಯ ಮೇಲೆ ಚಿತ್ತ

ಟ್ರಾವಿಸ್‌ ಹೆಡ್‌ ಭಾರತದಲ್ಲಿ ಐಪಿಎಲ್‌ ಆಡಿ ಈಗ ತಮ್ಮ ತವರಿನ ತಂಡವನ್ನು ಸೇರಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಟ್ರಾವಿಸ್‌ ಹೆಡ್‌, ವೈಟ್ ಜೆರ್ಸಿಯಲ್ಲಿ ಅಬ್ಬರದ ಪ್ರದರ್ಶನ ನೀಡಿ ಎದುರಾಳಿ ಬೌಲರ್‌ಗಳನ್ನು ಕಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಫೈನಲ್‌ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಶತಕ ಬಾರಿಸಿದ್ರೆ, ಎರಡು ಫೈನಲ್‌ಗಳಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್‌ ಎಂಬ ಹಿರಿಮೆ ಇವರದ್ದಾಗಲಿದೆ. ಇನ್ನು ಇದೇ ಪಂದ್ಯದಲ್ಲಿ ಮ್ಯಾನ್ ಆಫ್‌ ದಿ ಮ್ಯಾಚ್ ಪಡೆದಿದ್ದೇ ಆದಲ್ಲಿ ಮತ್ತೊಮ್ಮೆ ದಾಖಲೆ ನಿರ್ಮಿಸಲಿದ್ದಾರೆ. ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್ ಫೈನಲ್‌ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಎರಡು ಬಾರಿ ಪಡೆಯುವ ಸಾಧನೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಟ್ರಾವಿಸ್ ಹೆಡ್‌ ಈಗಾಗಲೇ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಅಂಕಿ ಅಂಶಗಳನ್ನು ಹೊಂದಿರುವ ಟ್ರಾವಿಸ್‌ ಹೆಡ್‌, ಮತ್ತೊಮ್ಮೆ ಬಿಗ್ ಇನಿಂಗ್ಸ್ ಕಟ್ಟುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

Story first published: Monday, June 9, 2025, 18:53 [IST]
Other articles published on Jun 9, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+