Travis Head: ಮೂರನೇ ಟೆಸ್ಟ್‌ನಲ್ಲಿ ದೊಡ್ಡ ದಾಖಲೆಯ ಮೇಲೆ ಟ್ರಾವಿಸ್ ಹೆಡ್ ಕಣ್ಣು
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಡಿಸೆಂಬರ್ 14 ರಿಂದ ಆರಂಭವಾಗಲಿದೆ. ಈ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಡಿಲೇಡ್‌ನಲ್ಲಿ ಅಭ್ಯಾಸವನ್ನು ನಡೆಸುತ್ತಿದೆ. ಆಡಿಲೇಡ್‌ನಲ್ಲಿ ನಡೆದ ಡೇ ಆಂಡ್ ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ತಲೆ ನೋವಾಗಿದ್ದ, ಟ್ರಾವಿಸ್ ಹೆಡ್ ಪ್ರವಾಸಿ ತಂಡವನ್ನು ಬಹುವಾಗಿ ಕಾಡಿದ್ದರು. ಅಲ್ಲದೆ ತಂಡದ ಗೆಲುವಿನಲ್ಲಿ ಮಿಂಚಿದ್ದರು. ಈಗ ಇವರ ಮುಂದಿನ ಪಂದ್ಯದ ದೊಡ್ಡ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.
ಟ್ರಾವಿಸ್ ಹೆಡ್ ಟೀಮ್ ಇಂಡಿಯಾ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇವರು ಮಹತ್ವದ ಪಂದ್ಯಗಳಲ್ಲಿ ಬಿಗ್ ಇನಿಂಗ್ಸ್ ಕಟ್ಟಿ ತಂಡಕ್ಕೆ ಆಧಾರವಾಗಿರುತ್ತಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವೇ ಆಗಿರಲಿ, ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯವೇ ಆಗಿರಲಿ ದೊಡ್ಡ ಇನಿಂಗ್ಸ್ ಕಟ್ಟಿ ತಂಡದ ಗೆಲುವಿನಲ್ಲಿ ಮಿಂಚಿದ್ದರು. ಇವರ ಮೂರನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ವಿರುದ್ಧ ಸ್ಥಿರ ಪ್ರದರ್ಶನ ನೀಡಿದ್ದೇ ದೊಡ್ಡ ದಾಖಲೆಯನ್ನು ನಿರ್ಮಿಸ ಬಹುದಾಗಿದೆ. ಆಡಿಲೇಡ್‌ನಲ್ಲಿ ನಡೆದ ಪಂದ್ಯದಲ್ಲಿ ಹೆಡ್ 140 ರನ್ ಗಳ ಇನಿಂಗ್ಸ್ ಆಡಿದ್ದರು.

ಯಾವ ದಾಖಲೆಯ ಮೇಲೆ ಟ್ರಾವಿಸ್ ಹೆಡ್ ಕಣ್ಣು?
ಟ್ರಾವಿಸ್ ಹೆಡ್ ಟೀಮ್ ಇಂಡಿಯಾಕ್ಕೆ ದಿನದಿಂದ ದಿನಕ್ಕೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಗಬ್ಬಾದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಕೇವಲ 45 ರನ್ ಗಳಿಸಿದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಬಹುದಾಗಿದೆ. ಬ್ರಿಸ್ಬೇನ್‌ನಲ್ಲಿ 45 ರನ್ ಸಿಡಿಸಿದ್ದೇ ಆದಲ್ಲಿ ಭಾರತದ ವಿರುದ್ಧ ಒಂದು ಸಾವಿರ ರನ್ ಪೂರೈಸುವ ದಾಖಲೆ ಬರೆಯಲಿದ್ದಾರೆ. ಹೆಡ್ ಯಾವುದೇ ತಂಡದ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 1000 ರನ್ ಬಾರಿಸಿದ ದಾಖಲೆ ಹೊಂದಿಲ್ಲ. ಇವರು ಇಂಗ್ಲೆಂಡ್ ವಿರುದ್ಧ 910 ಟೆಸ್ಟ್ ರನ್‌ಗಳನ್ನು ಹೊಂದಿದ್ದಾರೆ.
ಭಾರತದ ವಿರುದ್ಧ ಹೇಗಿದೆ ದಾಖಲೆ?
ಟೀಮ್ ಇಂಡಿಯಾ ವಿರುದ್ಧ ಟ್ರಾವಿಸ್ ಹೆಡ್ ಆಡಿದ 12 ಪಂದ್ಯಗಳ 21 ಇನಿಂಗ್ಸ್‌ನಲ್ಲಿ 955 ರನ್ ಸಿಡಿಸಿದ್ದಾರೆ. ಇದರಲ್ಲಿ 2 ಶತಕ ಹಾಗೂ 4 ಅರ್ಧಶತಕಗಳು ಸೇರಿವೆ. ಇವರು ಆಡಿಲೇಡ್‌ನಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಶತಕ ಬಾರಿಸಿ ಭರವಸೆ ಮೂಡಿಸಿದ್ದಾರೆ.
ಡಿಸೆಂಬರ್ 14ರಿಂದ ಮೂರನೇ ಟೆಸ್ಟ್
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ಡಿಸೆಬಂಬರ್ 14 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸನ್ನು ಉಭಯ ತಂಡಗಳು ಹೊಂದಿವೆ. ಮೂರನೇ ಟೆಸ್ಟ್‌ನಲ್ಲಿ ಜಯ ಸಾಧಿಸಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಸುಲಭವಾಗಿ ಏರುವ ಆಸೆಯನ್ನು ಜೀವಂತವಾಗಿ ಇರಿಸಿಕೊಳ್ಳುವ ಇರಾದೆಯನ್ನು ಟೀಮ್ ಇಂಡಿಯಾ ಹೊಂದಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಬದಲಾವಣೆ ಕಾಣುವ ಸಾಧ್ಯತೆ ಹೆಚ್ಚಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications