ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಂಜಾಬ್ ಕಿಂಗ್ಸ್‌, ಸನ್‌ರೈಸರ್ಸ್ ಹೈದ್ರಾಬಾದ್‌ಗೆ ಶಾಕ್: ಕೋಚ್‌ಗಳ ರಾಜೀನಾಮೆ

SRH

ಇಂಡಿಯನ್ ಪ್ರೀಮಿಯರ್ ಲೀಗ್ (IPL) 15ನೇ ಆವೃತ್ತಿಯ ಆಟಗಾರರ ಹರಾಜಿಗೂ ಮೊದಲೇ ಸಾಕಷ್ಟು ಬೆಳವಣಿಗೆ ಕಂಡು ಬಂದಿದೆ. ಕೇವಲ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ರೀಟೈನ್ ಮಾಡಿಕೊಂಡಿರುವ ಎಸ್‌ಆರ್‌ಎಸ್ ಪ್ರಮುಖ ಸ್ಟಾರ್ ಆಟಗಾರರಾದ ಡೇವಿಡ್ ವಾರ್ನರ್ ಮತ್ತು ರಶೀದ್ ಖಾನ್‌ರನ್ನ ಕಳೆದುಕೊಂಡಿದೆ.

ಐಪಿಎಲ್ 2022 ರಿಟೆನ್ಷನ್ ಬಳಿಕ ಯಾವ ಫ್ರಾಂಚೈಸಿ ಬಳಿ ಎಷ್ಟು ಹಣ ಉಳಿದಿದೆ ಗೊತ್ತಾ?ಐಪಿಎಲ್ 2022 ರಿಟೆನ್ಷನ್ ಬಳಿಕ ಯಾವ ಫ್ರಾಂಚೈಸಿ ಬಳಿ ಎಷ್ಟು ಹಣ ಉಳಿದಿದೆ ಗೊತ್ತಾ?

ರೀಟೈನ್‌ಗೂ ಮೊದಲೇ ರಶೀದ್ ಖಾನ್ ತಂಡದಿಂದ ಹೊರಬಂದಿದ್ದಾರೆ ಎಂದು ಸುದ್ದಿಯಾಗಿತ್ತು. ಇದರ ಜೊತೆಗೆ ಡೇವಿಡ್‌ ವಾರ್ನರ್‌ ಜೊತೆಗೆ ಫ್ರಾಂಚೈಸಿ ಕಿತ್ತಾಟ ನಡೆಸಿದ್ದು ಎಲ್ಲರಿಗೂ ಮೇಲ್ನೋಟಕ್ಕೆ ತಿಳಿದಿದೆ. ಇದರ ಬೆನ್ನಲ್ಲೇ ರಿಟೈನ್‌ನಲ್ಲೂ ಕೂಡ ಎಸ್‌ಆರ್‌ಎಚ್ ಮೂವರು ಆಟಗಾರರನ್ನು ತನ್ನಲ್ಲಿ ಉಳಿಸಿಕೊಂಡಿದೆ. ಕೇನ್ ವಿಲಿಯಮ್ಸನ್ , ಉಮ್ರಾನ್ ಮಲ್ಲಿಕ್ ಮತ್ತು ಅಬ್ದುಲ್ ಸಮಾದ್ ಫ್ರಾಂಚೈಸಿ ಉಳಿಸಿಕೊಂಡ ಆಟಗಾರರಾಗಿದ್ದಾರೆ.

ಪ್ರಮುಖ ಸ್ಟಾರ್‌ ಆಟಗಾರರನ್ನ ಕಳೆದುಕೊಂಡ ಎಸ್‌ಆರ್‌ಎಚ್‌ಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಮುಖ್ಯ ಕೋಚ್ ಟ್ರೆವರ್ ಬೇಲಿಸ್ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಅವರು ಹೊಸ ಫ್ರಾಂಚೈಸಿಯ ಕೋಚ್ ಸ್ಥಾನವನ್ನು ಎದುರು ನೋಡುತ್ತಿದ್ದಾರೆ ಎಂದು ವರದಿಯಾಗಿದೆ.

ಅತ್ಯಂತ ಯಶಸ್ವಿ ತರಬೇತುದಾರರಲ್ಲಿ ಒಬ್ಬರಾದ ಟ್ರೆವರ್ ಬೇಲಿಸ್ ಅವರು 2019 ರಲ್ಲಿ ಏಕದಿನ ವಿಶ್ವಕಪ್​ ಗೆದ್ದ ಇಂಗ್ಲೆಂಡ್ ತಂಡದ ಕೋಚ್ ಆಗಿದ್ದರು. ಅಲ್ಲದೆ 2012 ಮತ್ತು 2014ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು 2020ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ಕೋಚ್ ಆಗಿದ್ದ ಬೇಲಿಸ್ ನೇತೃತ್ವದಲ್ಲಿ ಎಸ್​ಆರ್​ಹೆಚ್​ ಮೂರನೇ ಸ್ಥಾನ ಅಲಂಕರಿಸಿತ್ತು. ಆದರೆ ಕಳೆದ ಸೀಸನ್‌ನಲ್ಲಿ ತಂಡವು ಅತ್ಯಂತ ಹೀನಾಯ ಪ್ರದರ್ಶನ ತೋರಿದ್ದು, ಫ್ರಾಂಚೈಸಿ ಕೆಂಗಣ್ಣಿಗೆ ಗುರಿಯಾಗಿತ್ತು. ಆದ್ರೀಗ ಸನ್​ರೈಸರ್ಸ್​ ಹೈದರಾಬಾದ್ ತಂಡದಿಂದ ಟ್ರೇವರ್ ಬೇಲಿಸ್ ಹೊರನಡೆದಿದ್ದಾರೆ.

Virat Kohliಗೆ ಮೊದಲ ಬಾರಿಗೆ ಅಭ್ಯಾಸ ಮಾಡಿಸಿದ Rahul Dravid | Oneindia Kannada

ಎಸ್‌ಆರ್‌ಎಚ್ ತಂಡವಷ್ಟೇ ಅಲ್ಲದೆ ಪಂಜಾಬ್ ಕಿಂಗ್ಸ್ ತಂಡದ ಸಹಾಯಕ ಕೋಚ್ ಆ್ಯಂಡಿ ಫ್ಲವರ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಿಂಬಾಬ್ವೆಯ ಮಾಜಿ ನಾಯಕ ಕಳೆದ ಎರಡು ಸೀಸನ್​ಗಳಿಂದ ಪಂಜಾಬ್ ತಂಡದ ಭಾಗವಾಗಿದ್ದರು. ಇದೀಗ ಆ್ಯಂಡಿ ಫ್ಲವರ್ ಕೂಡ ಹೊಸ ಫ್ರಾಂಚೈಸಿ ಪರ ಕಾರ್ಯನಿರ್ವಹಿಸಲು ಉತ್ಸುಕರಾಗಿದ್ದಾರೆ ಎಂದು ವರದಿಯಾಗಿದೆ.

Story first published: Thursday, December 2, 2021, 23:31 [IST]
Other articles published on Dec 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X