ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವಿನ ಮಾಲೆ ತೊಡಿಸಿದ ಮಾಧವ್ ತಿವಾರಿ ಯಾರು?
ಧರ್ಮಶಾಲಾ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 19ನೇ ಆವೃತ್ತಿಯ 55ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡಗಳು ಕಾದಾಟ ನಡೆಸಿದವು. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೆ ಮಹತ್ವದಾಗಿತ್ತು. ಈ ಪಂದ್ಯದಲ್ಲಿ ಟಾಸ್ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಯಿತು. ಡೆಲ್ಲಿ ಮೊದಲು ಬೌಲಿಂಗ್ ಮಾಡುವ ನಿರ್ಧಾರವನ್ನು ಮಾಡಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕ ಪ್ರಿಯಾಂಶ್ ಆರ್ಯ (56) ಹಾಗೂ ಪ್ರಭ್‌ಸಿಮ್ರನ್ ಸಿಂಗ್ (18) ಜೋಡಿ ಮೊದಲ ವಿಕೆಟ್‌ಗೆ 78 ರನ್ ಸೇರಿಸಿತು. ನಾಯಕ ಶ್ರೇಯಸ್ ಅಯ್ಯರ್ (ಅಜೇಯ 59) ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೂಪರ್ ಕಾನೋಲಿ (38) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಪಂಜಾಬ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 210 ರನ್ ಸೇರಿಸಿತು. ಡೆಲ್ಲಿ ಪರ ಮಾಧವ್ ತಿವಾರಿ 40 ರನ್ ನೀಡಿ 2 ವಿಕೆಟ್ ಪಡೆದರು.

ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭ ಕಳಪೆಯಾಗಿತ್ತು. ಟಾಪ್ ಆರ್ಡರ್‌ನ ಕೆಎಲ್ ರಾಹುಲ್ (9), ಅಭಿಷೇಕ್ ಪೊರೆಲ್ (5), ಸಾಹಿಲ್ ಪರಾಖ್ (12) ಪವರ್ ಪ್ಲೇನಲ್ಲಿ ವಿಕೆಟ್ ಒಪ್ಪಿಸಿದರು. 4ನೇ ವಿಕೆಟ್‌ಗೆ ಅಕ್ಷರ್ ಪಟೇಲ್, ಟ್ರಿಸ್ಟನ್ ಸ್ಟಬ್ಸ್ (12) ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಬಳಿಕ ಬಂದ ಡೇವಿಡ್ ಮಿಲರ್ (51) ಸಹ ನಾಯಕ ಅಕ್ಷರ್ ಪಟೇಲ್ (56) ಅರ್ಧಶತಕದ ಜೊತೆಯಾಟದ ಕಾಣಿಕೆ ನೀಡಿದರು. ಮಧ್ಯಮ ಕ್ರಮಾಂಕದಲ್ಲಿ ಅಶುತೋಷ್ ಶರ್ಮಾ (24), ಮಾಧವ್ ತಿವಾರಿ (ಅಜೇಯ 18), ಅಕಿಬ್ ನಬಿ (ಅಜೇಯ 10) ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು. ಡೆಲ್ಲಿ 19 ಓವರ್‌ಗಳಲ್ಲಿ 7 ವಿಕೆಟ್‌ಗೆ 216 ರನ್ ಸೇರಿಸಿತು. ಮಾಧವ್ ತಿವಾರಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಯಿತು.
ಮಾಧವ್ ತಿವಾರಿ ಯಾರು?
ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಪರ ಅಬ್ಬರಿಸಿದ್ದು 22 ವರ್ಷದ ಮಾಧವ್ ತಿವಾರಿ. ಇವರು ಮಧ್ಯ ಪ್ರದೇಶದ ಮೂಲದವರು. ಇವರು ಸೆಪ್ಟೆಂಬರ್ 28, 2003ರಂದು ಜನಿಸಿದರು. ಇವರು ಇನ್ನು ವರೆಗೆ ಸೈಯದ್ ಮುಷ್ತಾಕ್ ಅಲಿ, ವಿಜಯ್ ಹಜಾರೆ ಟ್ರೋಫಿಯಲ್ಲಿ ಒಂದೇ ಒಂದು ಪಂದ್ಯವನ್ನು ಆಡಿಲ್ಲ. ಇವರು ಮಧ್ಯ ಪ್ರದೇಶ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಇವರ ಈ ಪ್ರದರ್ಶನ ಗುರುತಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ 2025ರ ಐಪಿಎಲ್ ಹರಾಜಿನಲ್ಲಿ 40 ಲಕ್ಷ ರೂ. ನೀಡಿ ಖರೀದಿಸಿತ್ತು. ಮಾಧವ್ ಸಿಕ್ಕ ಅವಕಾಶವನ್ನು ಬಳಸಿಕೊಂಡು ಅಬ್ಬರಿಸಿದರು.
ಸಂಕ್ಷಿಪ್ತ ಸ್ಕೋರ್
ಪಂಜಾಬ್ ಕಿಂಗ್ಸ್ 20 ಓವರ್‌ಗೆ 5 ವಿಕೆಟ್‌ಗೆ 210; ಪ್ರಿಯಾಂಶ್ ಆರ್ಯ 56, ಶ್ರೇಯಸ್ ಅಯ್ಯರ್ 59, ಮಾಧವ್ ತಿವಾರಿ (ಡಿಸಿ) 40ಕ್ಕೆ 2
ಡೆಲ್ಲಿ ಕ್ಯಾಪಿಟಲ್ಸ್ 19 ಓವರ್‌ಗಳಲ್ಲಿ 7 ವಿಕೆಟ್‌ಗೆ 216; ಅಕ್ಷರ್ ಪಟೇಲ್ 56, ಡೇವಿಡ್ ಮಿಲ್ಲರ್ 51, ಅರ್ಷದೀಪ್ ಸಿಂಗ್ (ಪಂಜಾಬ್) 21ಕ್ಕೆ 2
ಪಂದ್ಯದ ಫಲಿತಾಂಶ: ಡೆಲ್ಲಿ ಕ್ಯಾಪಿಟಲ್ಸ್‌ಗೆ 3 ವಿಕೆಟ್ ಜಯ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications