ಟೀಮ್ ಇಂಡಿಯಾದಲ್ಲಿ ದೇವದತ್ ಪಡಿಕ್ಕಲ್‌ಗೆ ಸಿಗಲಿಲ್ಲ ಸ್ಥಾನ; ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು ಹೀಗೆ

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಮೂರನೇ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೂಲಕ ಭಾರತ ತಂಡದ ಒಟ್ಟು ಐವರು ಯುವ ಕ್ರಿಕೆಟಿಗರಿಗೆ ತಮ್ಮ ವೃತ್ತಿಜೀವನದ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನು ಆಡುವ ಅವಕಾಶವನ್ನು ನೀಡಲಾಯಿತು. ಚೇತನ್ ಸಕಾರಿಯಾ, ನಿತೀಶ್ ರಾಣಾ, ಸಂಜು ಸ್ಯಾಮ್ಸನ್ ಕೃಷ್ಣಪ್ಪ ಗೌತಮ್ ಮತ್ತು ರಾಹುಲ್ ಚಾಹರ್ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‍ಗೆ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಈ ಐವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಅವಕಾಶವನ್ನು ನೀಡಿ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚಿದ ದೇವದತ್ ಪಡಿಕ್ಕಲ್‌ಗೆ ಅವಕಾಶ ನೀಡದೆ ಇರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲಿಯೂ ಈ ನಿರ್ಣಯದ ಕುರಿತು ಸಾಕಷ್ಟು ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಇಂದಿನ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಮತ್ತು ಋತುರಾಜ್ ಗಾಯಕ್ವಾಡ್ ಇಬ್ಬರಿಗೂ ಸಹ ಆಡುವ ಅವಕಾಶವನ್ನು ನೀಡಬೇಕಿತ್ತು. ಈ ಇಬ್ಬರೂ ಪ್ರತಿಭಾವಂತ ಆಟಗಾರರನ್ನು ಅವಕಾಶ ನೀಡದೆ ಕಡೆಗಣಿಸಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ನೆಟ್ಟಿಗರು ಮಾಡಿರುವ ಟ್ವೀಟ್ ಈ ಕೆಳಕಂಡಂತಿವೆ ನೋಡಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications