ಭುವನೇಶ್ವರ್‌ಗೆ ಕೈತಪ್ಪಿದ ಇಂಗ್ಲೆಂಡ್ ಟಿಕೆಟ್: ಟ್ವಿಟ್ಟರಾಟಿಗಳ ಬೇಸರದ ಪ್ರತಿಕ್ರಿಯೆ

ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಲಿರುವ ಭಾರತೀಯ ಟೆಸ್ಟ್ ತಂಡವನ್ನು ಶುಕ್ರವಾರ ಪ್ರಕಡಿಸಲಾಗಿದೆ. ಪ್ರತಿಷ್ಟಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈ ತಂಡ ಕಣಕ್ಕಿಳಿಯಲಿದೆ. ಈ ತಂಡದಲ್ಲಿ ಅನುಭವಿ ವೇಗಿ ಭುವನೇಶ್ವರ್‌ಗೆ ಸ್ಥಾನ ದೊರೆತಿಲ್ಲ.
ಗಾಯದಿಂದಾಗಿ ಕಳೆದ ಕೆಲ ಸಮಯಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಭುವನೇಶ್ವರ್ ಕುಮಾರ್ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ಟೀಮ್ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದರು. ಆದರೆ ಟೆಸ್ಟ್ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ಸಮಯ ಭುವನೇಶ್ವರ್ ಕುಮಾರ್‌ಗೆ ಹತ್ತಿರವಾದಂತಿಲ್ಲ.
ಐಪಿಎಲ್ ಆರಂಭಕ್ಕೂ ಮುನ್ನ ಮಾತನಾಡಿದ್ದ ಭುವನೇಶ್ವರ್ ಕುಮಾರ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಯ್ಕೆಯಾಗುವ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದರು. ಅಲ್ಲದೆ ಐಪಿಎಲ್ ಸರಣಿಯ ಜೊತೆಗೆ ಈ ಪ್ರತಿಷ್ಟಿತ ಟೆಸ್ಟ್ ಸರಣಿಗೂ ಸಿದ್ಧತೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದರು. ಆದರೆ ಅವರ ಈ ಕನಸು ನಿಜವಾಗಿಲ್ಲ.
ಇನ್ನು ಭುವನೇಶ್ವರ್ ಕುಮಾರ್ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗದ ಬಗ್ಗೆ ಟ್ವಿಟ್ಟರ್‌ನಲ್ಲಿ ಕ್ರಿಕೆಟ್ ಅಭಿಮಾನಿಗಳು ಬೇಸರವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ಇಶಾಂತ್ ಶರ್ಮಾ ಬದಲಿಗೆ ಭುವನೇಶ್ವರ್‌ಗೆ ಅವಕಾಶವನ್ನು ನೀಡಬಹುದಾಗಿತ್ತು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.
ಇಂಗ್ಲೆಂಡ್‌ಗೆ ಹಾರಲಿರುವ ಟೀಮ್ ಇಂಡಿಯಾ ಸ್ಕ್ವಾಡ್
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಕೆ.ಎಲ್ ರಾಹುಲ್(ಫಿಟ್‌ನೆಸ್ ಪರೀಕ್ಷೆಗೆ ಒಳಪಡಬೇಕಿದೆ) ಮತ್ತು ವೃದ್ಧಿಮಾನ್ ಸಾಹಾ (ಫಿಟ್‌ನೆಸ್ ಪರೀಕ್ಷೆಗೆ ಒಳಪಡಬೇಕಿದೆ)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications