ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಯಣಕ್ಕೆ 13 ವರ್ಷ; ಶುಭಾಶಯಗಳ ಸುರಿಮಳೆಗೈದ ನೆಟ್ಟಿಗರು

ಆಗಸ್ಟ್ 18, 2008, ಅಂದರೆ ಇಂದಿಗೆ ಸರಿಯಾಗಿ 13 ವರ್ಷಗಳ ಹಿಂದೆ ಆಗಸ್ಟ್ 18, 2008ರಂದು ಡಂಬುಲಾದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‍ಗೆ ಪದಾರ್ಪಣೆಯನ್ನು ಮಾಡಿದರು. ಅಂದು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ಪದಾರ್ಪಣೆ ಮಾಡಿದಾಗ ಮುಂದೊಂದು ದಿನ ಈ ಹುಡುಗ ವಿಶ್ವ ಕ್ರಿಕೆಟ್‍ನ್ನು ಆಳುತ್ತಾನೆ ಎಂದು ಯಾರೂ ಊಹಿಸಿರಲಿಲ್ಲ.

ಭಾರತ vs ಇಂಗ್ಲೆಂಡ್: ಆಗೊಂದು ಈಗೊಂದು ಶತಕ ಬಾರಿಸುವವರೇ ತಂಡದಲ್ಲಿದ್ದಾರೆ ಎಂದ ಸಚಿನ್!ಭಾರತ vs ಇಂಗ್ಲೆಂಡ್: ಆಗೊಂದು ಈಗೊಂದು ಶತಕ ಬಾರಿಸುವವರೇ ತಂಡದಲ್ಲಿದ್ದಾರೆ ಎಂದ ಸಚಿನ್!

ತನ್ನ ಪ್ರತಿಭೆಯ ಮೂಲಕ ಟೀಮ್ ಇಂಡಿಯಾ ಅಂತಾರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಂಡ ವಿರಾಟ್ ಕೊಹ್ಲಿ ತನ್ನ ತಂಡದ ಪರ ಸಾಕಷ್ಟು ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶನಗಳನ್ನು ನೀಡುವುದರ ಮೂಲಕ ಪ್ರಸ್ತುತ ವಿಶ್ವ ಕ್ರಿಕೆಟ್‍ನ ಅತ್ಯುತ್ತಮ ಬ್ಯಾಟ್ಸ್‌ಮನ್‌ ಆಗಿ ನಿಂತಿದ್ದಾರೆ. ಈ ಹಿಂದೆ ಕ್ರಿಕೆಟ್‍ನಲ್ಲಿ ಮುರಿಯುವುದು ಅಸಾಧ್ಯ ಎಂದು ಹೇಳಲಾಗುತ್ತಿದ್ದ ಹಲವಾರು ದಾಖಲೆಗಳನ್ನು ವಿರಾಟ್ ಕೊಹ್ಲಿ ಈಗಾಗಲೇ ಮುರಿದು ತಮ್ಮ ಹೆಸರಿಗೆ ಆ ದಾಖಲೆಗಳನ್ನು ಬರೆದುಕೊಂಡು ಯಶಸ್ಸಿನ ಉತ್ತುಂಗವನ್ನು ತಲುಪಿದ್ದಾರೆ.

ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ನಾಯಕನಾಗಿ ಆಯ್ಕೆಯಾದ ಮೇಲೆ ಭಾರತದ ಕ್ರಿಕೆಟ್ ಬೇರೆಯದ್ದೇ ಆಯಾಮವನ್ನು ಪಡೆದುಕೊಂಡಿತು ಎಂದರೆ ತಪ್ಪಾಗಲಾರದು. ಕೊಹ್ಲಿ ನಾಯಕತ್ವ ವಹಿಸಿಕೊಂಡ ನಂತರ ಕೇವಲ ತವರು ನೆಲದಲ್ಲಿ ಮಾತ್ರವಲ್ಲದೆ ವಿದೇಶಿ ನೆಲಗಳಲ್ಲಿಯೂ ಸಹ ಸಾಕಷ್ಟು ಸರಣಿಗಳನ್ನು ಗೆಲ್ಲುವುದರ ಮೂಲಕ ವಿವಿಧ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.

ಭಾರತ vs ಇಂಗ್ಲೆಂಡ್: ಲಾರ್ಡ್ಸ್ ಅಂಗಳದಲ್ಲಿ ಸೋತರೂ ಟೀಮ್ ಇಂಡಿಯಾ ಎಂದರೆ ಭಯವಿಲ್ಲ ಎಂದ ಸಿಲ್ವರ್‌ವುಡ್!ಭಾರತ vs ಇಂಗ್ಲೆಂಡ್: ಲಾರ್ಡ್ಸ್ ಅಂಗಳದಲ್ಲಿ ಸೋತರೂ ಟೀಮ್ ಇಂಡಿಯಾ ಎಂದರೆ ಭಯವಿಲ್ಲ ಎಂದ ಸಿಲ್ವರ್‌ವುಡ್!

ಆಗಸ್ಟ್ 18, 2008ರಂದು ಡಂಬುಲಾದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರರಾಗಿದ್ದ ಸಚಿನ್ ತೆಂಡುಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಇಬ್ಬರೂ ಸಹ ಪಂದ್ಯಕ್ಕೆ ಅಲಭ್ಯರಾಗಿದ್ದ ಕಾರಣ ವಿರಾಟ್ ಕೊಹ್ಲಿ ಆ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‍ಗೆ ಪದಾರ್ಪಣೆಯನ್ನು ಮಾಡಿದರು. ನಂತರದ ದಿನಗಳಲ್ಲಿ ತನ್ನ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ತಂಡದಲ್ಲಿ ಖಾಯಂ ಸ್ಥಾನ ಪಡೆದುಕೊಂಡ ವಿರಾಟ್ ಕೊಹ್ಲಿ 2017ರ ವೇಳೆಗೆ ಟೀಮ್ ಇಂಡಿಯಾವನ್ನು ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿಯೂ ನಾಯಕನಾಗಿ ಮುನ್ನಡೆಸುವ ಹಂತಕ್ಕೆ ಬಂದು ತಲುಪಿದರು.

ಹೀಗೆ ಹಲವಾರು ದಾಖಲೆ, ಸಾಧನೆ, ಟೀಕೆಗಳು ಮತ್ತು ಕಾಲೆಳೆಯುವವರನ್ನು ನೋಡಿಕೊಂಡು 13 ವರ್ಷಗಳನ್ನು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‍ನಲ್ಲಿ ಕಳೆದಿರುವ ವಿರಾಟ್ ಕೊಹ್ಲಿಗೆ ನೆಟ್ಟಿಗರು ಈ ಕೆಳಕಂಡಂತೆ ಶುಭಾಶಯಗಳನ್ನು ಕೋರಿದ್ದಾರೆ.

ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪದಾರ್ಪಣೆ ಮಾಡಿ 13 ವರ್ಷ ಕಳೆದಿರುವ ಕಾರಣಕ್ಕೆ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ರತಿನಿಧಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಟ್ವಿಟ್ಟರ್ ಖಾತೆಯ ಮೂಲಕ ಶುಭಾಶಯವನ್ನು ಕೋರಿದೆ.

ಬಿಸಿಸಿಐ ಕೂಡ ತಮ್ಮ ನಾಯಕ ವಿರಾಟ್ ಕೊಹ್ಲಿ 13 ವರ್ಷಗಳ ಅಂತರಾಷ್ಟ್ರೀಯ ಕ್ರಿಕೆಟ್ ಪ್ರಯಾಣವನ್ನು ಪೂರ್ಣಗೊಳಿಸಿರುವುದಕ್ಕೆ ಟ್ವಿಟ್ಟರ್ ಖಾತೆಯ ಮೂಲಕ ಟ್ವೀಟ್ ಮಾಡಿ ಶುಭಾಶಯವನ್ನು ಕೋರಿದೆ. '13 ವರ್ಷಗಳ ಹಿಂದೆ ಈ ದಿನ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಇಂದು 438 ಅಂತಾರಾಷ್ಟ್ರೀಯ ಪಂದ್ಯಗಳು ಮತ್ತು 22,937 ಅಂತಾರಾಷ್ಟ್ರೀಯ ರನ್‌ಗಳನ್ನು ಬಾರಿಸಿ ಮಿಂಚಿದ್ದಾರೆ' ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಜಸ್ಪ್ರೀತ್ ಬುಮ್ರಾ ಪಿಚ್ ಮದ್ಯೆ ಆಂಡರ್ಸನ್ ಹೀಗೆ ಹೇಳಿದ್ದೇಕೆ | Oneindia Kannada

ಇಷ್ಟೇ ಅಲ್ಲದೆ ಇನ್ನೂ ಹಲವಾರು ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಪಂಡಿತರು, ಕ್ರೀಡಾಭಿಮಾನಿಗಳು ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳು ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 13 ವರ್ಷಗಳನ್ನು ಪೂರೈಸಿರುವುದಕ್ಕೆ ಟ್ವೀಟ್ ಮಾಡುವ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ. ಅದರಲ್ಲಿಯೂ ವಿರಾಟ್ ಕೊಹ್ಲಿ ಅಭಿಮಾನಿಗಳು ಭಿನ್ನವಿಭಿನ್ನವಾದ ಫೋಟೋ ಮತ್ತು ವಿಡಿಯೋಗಳನ್ನು ಟ್ವಿಟ್ಟರ್‌ನಲ್ಲಿ ಹರಿಬಿಟ್ಟು, ತಮ್ಮ ನೆಚ್ಚಿನ ಆಟಗಾರ ಮಾಡಿರುವ ದಾಖಲೆಗಳನ್ನು ಟ್ವೀಟ್ ಮಾಡುತ್ತಾ ಸಂಭ್ರಮಿಸುತ್ತಿದ್ದಾರೆ..

For Quick Alerts
ALLOW NOTIFICATIONS
For Daily Alerts
Story first published: Wednesday, August 18, 2021, 15:22 [IST]
Other articles published on Aug 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X