For Quick Alerts
ALLOW NOTIFICATIONS  
For Daily Alerts
 

Adelaide Test: ಭಾರತ ಮಾತ್ರವಲ್ಲ...ಆಸ್ಟ್ರೇಲಿಯಾ ತಂಡದಲ್ಲಿಯೂ 2 ಬದಲಾವಣೆ!

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 6 ರಿಂದ ನಡೆಯಲಿದೆ. ಈ ಪಂದ್ಯ ಅಡಿಲೇಡ್ ಓವಲ್‌ನಲ್ಲಿ ನಡೆಯಲಿದ್ದು, ಉಭಯ ತಂಡಗಳ ಆಡುವ ಹನ್ನೊಂದರ ಬಳಗದಲ್ಲಿ ತಲಾ ಎರಡು ಬದಲಾವಣೆಯೊಂದಿಗೆ ಕಣಕ್ಕೀಳಿಯುವ ಸಾಧ್ಯತೆಯಿದೆ. ಅಡಿಲೇಡ್‌ ಟೆಸ್ಟ್ ಪಂದ್ಯಕ್ಕೂ ಮುನ್ನ ಪಿಎಂ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯವನ್ನು ಭಾರತ ತಂಡ ಗೆದ್ದಿದೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಅದ್ಭುತ ಜಯ ಸಾಧಿಸಿತ್ತು. ಪರ್ತ್‌ನಲ್ಲಿ ಕಾಂಗರೂ ಪಡೆಗೆ ಟೀಮ್ ಇಂಡಿಯಾ ಖೆಡ್ಡಾ ತೋಡುವಲ್ಲಿ ಯಶಸ್ವಿಯಾಗಿತ್ತು. ಇದೀಗ ಸೋಲಿನ ನಂತರ ಆಸ್ಟ್ರೇಲಿಯಾ ತಂಡ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆಗಳೊಂದಿಗೆ ಟೀಮ್ ಇಂಡಿಯಾವನ್ನು ಎದುರಿಸಲಿದೆ.

Two Changes in Both India and Australia Teams for Adelaide Test

ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಬ್ಯೂ ವೆಬ್‌ಸ್ಟರ್ ಮತ್ತು ಸ್ಕಾಟ್ ಬೋಲ್ಯಾಂಡ್ ಆಡಲಿದ್ದಾರೆ. ವೇಗದ ಬೌಲರ್ ಜೋಶ್ ಹೇಜಲ್‌ವುಡ್‌ ಗಾಯದ ಸಮಸ್ಯೆಯಿಂದಾಗಿ ಅಡಿಲೇಡ್‌ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಸ್ಕಾಟ್ ಬೋಲ್ಯಾಂಡ್ ಆಡುವ ಅವಕಾಶವನ್ನು ಪಡೆಯಲಿದ್ದಾರೆ. ಮತ್ತೊಂದೆಡೆ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಬದಲಿಗೆ ಬ್ಯೂ ವೆಬ್‌ಸ್ಟರ್ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಮಾರ್ಷ್ ಕೂಡ ಗಾಯದ ಭೀತಿಯಲ್ಲಿದ್ದಾರೆ. ಅದಕ್ಕಾಗಿಯೇ ಆಸ್ಟ್ರೇಲಿಯಾ ಮ್ಯಾನೇಜ್‌ಮೆಂಟ್ ವೆಬ್‌ಸ್ಟರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಈಗ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು ಕಟ್ಟಿ ಹಾಕಲು ಯಾವ ಯೋಜನೆ ರೂಪಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟೀಮ್ ಇಂಡಿಯಾದಲ್ಲೂ ಬದಲಾವಣೆ

ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆಗಳೊಂದಿಗೆ ಕಾಣಿಸಿಕೊಳ್ಳಲಿದೆ. ನಾಯಕ ರೋಹಿತ್ ಶರ್ಮಾ ಎರಡನೇ ಮಗುವಿನ ಜನನದ ಕಾರಣ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ. ಈಗ ಅವರು ಎರಡನೇ ತಂಡವನ್ನು ಸೇರಿಕೊಂಡಿದ್ದಾರೆ. ಪರ್ತ್‌ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ನಾಯಕತ್ವ ವಹಿಸಿದ್ದರು. ಇದೀಗ ಈ ಜವಾಬ್ದಾರಿ ಮತ್ತೆ ರೋಹಿತ್ ಕೈ ಸೇರಲಿದೆ. ಇವರಲ್ಲದೆ ಗಾಯಾದಿಂದ ಚೇತರಿಸಿಕೊಂಡಿರುವ ಶುಭ‌ಮನ್ ಗಿಲ್ ಕೂಡ ಫಿಟ್ ಆಗಿದ್ದು, ಅಡಿಲೇಟ್ ಟೆಸ್ಟ್ ಪಂದ್ಯವನ್ನು ಆಡುವುದು ಕೂಡ ಖಚಿತವಾಗಿದೆ.

ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ತಂಡಕ್ಕೆ ಮರಳಿರುವುದರಿಂದ ಯುವ ಆಟಗಾರರಾದ ದೇವದತ್ ಪಡಿಕ್ಕಲ್ ಮತ್ತು ಧ್ರುವ್ ಜುರೆಲ್ ಹೊರಗುಳಿಯಲಿದ್ದಾರೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಪಡಿಕ್ಕಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರು. ಯಶಸ್ವಿ ಜೈಸ್ವಾಲ್ ಅವರೊಂದಿಗೆ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದರು. ಈಗ ಅಡಿಲೇಟ್ ಟೆಸ್ಟ್ ಪಂದ್ಯದಲ್ಲೂ ರಾಹುಲ್ ಮತ್ತು ಯಶಸ್ವಿ ಮತ್ತೊಮ್ಮೆ ಆರಂಭಿಕರಾಗಬಹುದು. ರೋಹಿತ್ ಅವರ ಕ್ರಮಾಂಕದಲ್ಲಿ ಬದಲಾವಣೆ ಆಗಬಹುದು.

Story first published: Wednesday, December 4, 2024, 19:00 [IST]
Other articles published on Dec 4, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+