IND vs SL: ಈ ಇಬ್ಬರು ಭಾರತೀಯರು ಶ್ರೀಲಂಕಾ ಪ್ರವಾಸದಲ್ಲಿ ಪಾದಾರ್ಪಣೆ ಮಾಡುವ ಸಾಧ್ಯತೆ!
ಜುಲೈ 12 ಶುಕ್ರವಾರ, ಟೀಮ್ ಇಂಡಿಯಾ ಜುಲೈ 26 ರಿಂದ ಶ್ರೀಲಂಕಾ ಪ್ರವಾಸಕ್ಕೆ ತೆರಳಲಿದೆ. ಎರಡು ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿ ಮತ್ತು ಅಷ್ಟೇ ಸಂಖ್ಯೆಯ ಏಕದಿನ ಸರಣಿಗಳು ನಡೆಯಲಿವೆ.
ಇದಕ್ಕಾಗಿ ಹೊಸ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಇನ್ನಷ್ಟೇ ಪ್ರಕಟಿಸಬೇಕಿದೆ. ಮತ್ತೊಂದೆಡೆ ಇತ್ತೀಚೆಗಷ್ಟೇ ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿರುವ ಗೌತಮ್ ಗಂಭೀರ್ ಅವರ ಮೊದಲ ಹುದ್ದೆ ಇದಾಗಿದೆ.

ಈಗಾಗಲೇ ಟಿ20 ವಿಶ್ವಕಪ್ ಗೆಲುವಿನ ಬಳಿಕ ಭಾರತ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ, ಆಲ್‌ರೌಂಡರ್ ರವೀಂದ್ರ ಜಡೇಜಾ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಅನುಭವಿಗಳ ಅನುಪಸ್ಥಿತಿಯಲ್ಲಿ ಗೌತಮ್ 2026ರ ಟಿ20 ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸಬೇಕಿದೆ.
ಈ ಮೂಲಕ ಟಿ20 ವಿಶ್ವಕಪ್‌ಗಾಗಿ ಗೌತಮ್ ಗಂಭೀರ್ ಹೊಸ ಹಾಗೂ ಯುವ ತಂಡವನ್ನು ಕಟ್ಟಬೇಕಿದೆ. ಶ್ರೀಲಂಕಾ ಪ್ರವಾಸದಿಂದಲೇ ಗಂಭೀರ್ ತಂಡ ಕಟ್ಟುವ ಕಡೆ ಗಮನಹರಿಸಲಿದ್ದಾರೆ. ಮುಂಬರುವ ಚುಟುಕು ವಿಶ್ವಕಪ್‌ಗೆ ಗೌತಮ್ ಈಗಿನಿಂದಲೇ ಸರಿಯಾದ ತಯಾರಿ ನಡೆಸಿಕೊಳ್ಳಬೇಕಿದೆ. ಇಲ್ಲದೇ ಇದಲ್ಲಿ ಗೌತಮ್ ಟೀಕೆಗಳನ್ನು ಎದುರಿಸಬೇಕಾಗುತ್ತದೆ.
ಹೀಗಾಗಿ ಗೌತಮ್ ಗಂಭೀರ್ ಅವರು ಶ್ರೀಲಂಕಾ ಪ್ರವಾಸದಲ್ಲಿ ಯುವ ಆಟಗಾರರಿಗೆ ಪಾರ್ದಪಣೆ ಮಾಡುವ ಅವಕಾಶ ನೀಡುವ ಸಾಧ್ಯತೆ ಇದೆ. ಅದರಲ್ಲೂ ಈ ಆಟಗಾರರು ಐಪಿಎಲ್ 2024ರ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿ ಅತ್ಯುತ್ತಮ ಪ್ರದರ್ಶನ ನೀಡಿರುವುದು ವಿಶೇಷ.
ಆಂಗ್ಕ್ರಿಶ್ ರಘುವಂಶಿ
ಶ್ರೀಲಂಕಾ ಪ್ರವಾಸಕ್ಕಾಗಿ 19 ವರ್ಷದ ಆಂಗ್ಕ್ರಿಶ್ ರಘುವಂಶಿ ಕೂಡ ತಂಡವನ್ನು ಸೇರಿಕೊಳ್ಳಬಹುದು. ಐಪಿಎಲ್ 2024 ರಲ್ಲಿ ಕೆಕೆಆರ್ ಪರ ಕೆಲವು ಪಂದ್ಯಗಳಲ್ಲಿ ಅವರು ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಆಂಗ್ಕ್ರಿಶ್ ಅರ್ಧಶತಕ ಗಳಿಸಿದ್ದರು. ಈ ಮೂಲಕ ಮ್ಯಾಚ್ ವಿನ್ನಿಂಗ್ ಆಟಗಾರ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಯುವ ಕ್ರಿಕೆಟಿಗನಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಹೀಗಾಗಿ ಇದನ್ನು ಪರಿಗಣಿಸಿ ಆಂಗ್ಕ್ರಿಶ್ ಅವರಿಗೆ ಶ್ರೀಲಂಕಾ ಪ್ರವಾಸಕ್ಕೆ ಅವಕಾಶ ನೀಡಬಹುದು.
ಹರ್ಷಿತ್ ರಾಣಾ
ಕೆಕೆಆರ್ ವೇಗದ ಬೌಲರ್ ಹರ್ಷಿತ್ ರಾಣಾ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಯಶಸ್ಸು ಕಂಡಿದ್ದಾರೆ. ಇದೀಗ ತಮ್ಮ ಅಭಿಯಾನವನ್ನು ಭಾರತ ತಂಡದತ್ತ ಗುರಿಯಾಗಿಸಿಕೊಂಡಿದ್ದಾರೆ.
2024ರ ಐಪಿಎಲ್ ಋತುವಿನಲ್ಲಿ ಕೆಕೆಆರ್ ಚಾಂಪಿಯನ್ ಆಗಲು ಕಾರಣನಾದವರಲ್ಲಿ ರಾಣಾ ಕೂಡ ಒಬ್ಬರಾಗಿದ್ದರು. ರಾಣಾ ಕೇವಲ 13 ಪಂದ್ಯಗಳಿಂದ 19 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಇಂತಹ ಆಕ್ರಮಣಕಾರಿ ಬೌಲರ್‌ಗೆ ಹೆಡ್ ಕೋಚ್ ಗೌತಮ್ ಗಂಭೀರ್ ಮಣೆ ಹಾಕುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications