ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧ ಭರ್ಜರಿ ತಯಾರಿಯ ವಿಶ್ವಾಸ ವ್ಯಕ್ತಪಡಿಸಿದ ಟಿಮ್ ಸೌಥೀ

Two Tests against England is great preparation for WTC final against India, says Tim Southee

ಆಕ್ಲೆಂಡ್: ಮುಂದಿನ ತಿಂಗಳಿನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳು ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿವೆ. ಅಲ್ಲಿ ಐಸಿಸಿ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಎರಡೂ ತಂಡಗಳೂ ಕಾದಾಡಲಿವೆ. ಭಾರತ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳಿಗೂ ಆತಿಥೇಯ ಇಂಗ್ಲೆಂಡ್ ವಿರುದ್ಧವೂ ಟೆಸ್ಟ್‌ ಪಂದ್ಯಗಳು ನಡೆಯಲಿವೆ.

IND vs NZ ಫೈನಲ್ ಪಂದ್ಯದಲ್ಲಿ ಎದುರಾಳಿಗೆ ಒಂದು ಲಾಭ | Oneindia Kannada

ಆವತ್ತು ಹರ್ಷಲ್ ಪಟೇಲ್ ಸ್ಫೋಟಕ ಬ್ಯಾಟಿಂಗ್‌ನಿಂದ ಡೆಲ್ಲಿ ಗೆದ್ದಿತ್ತು!ಆವತ್ತು ಹರ್ಷಲ್ ಪಟೇಲ್ ಸ್ಫೋಟಕ ಬ್ಯಾಟಿಂಗ್‌ನಿಂದ ಡೆಲ್ಲಿ ಗೆದ್ದಿತ್ತು!

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್‌ ಮಧ್ಯೆ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೂ ಮುನ್ನ ಎರಡು ಪಂದ್ಯಗಳ ಟೆಸ್ಟ್‌ ಸರಣಿ ನಡೆದರೆ, ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಬಳಿಕ ಐದು ಪಂದ್ಯಗಳ ಟೆಸ್ಟ್‌ ಸರಣಿ ನಡೆಯಲಿದೆ. ಟೆಸ್ಟ್‌ ಚಾಂಪಿಯನ್‌ಶಿಪ್‌ಗೂ ಮುನ್ನ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಪಂದ್ಯ ಇರುವುದರಿಂದ ನ್ಯೂಜಿಲೆಂಡ್ ತಂಡ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಒಳ್ಳೆಯ ತಯಾರಿ ನಡೆಸಿದಂತಾಗುತ್ತದೆ ಎಂದು ಕಿವೀಸ್ ಬೌಲರ್ ಟಿಮ್ ಸೌಥೀ ಹೇಳಿದ್ದಾರೆ.

'ಫೈನಲ್‌ಗೂ ಮುನ್ನ ಆ ಎರಡು ಪಂದ್ಯಗಳಿರುವುದು ಬಹಳ ಒಳ್ಳೆಯದಾಗಿದೆ. ಅದು ನಮಗೆ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಉತ್ತಮ ತಯಾರಿ ಸನಡೆಸಲು ನೆರವಾಗುತ್ತದೆ. ಆದರೆ ಇಂಗ್ಲೆಂಡ್ ವಿರುದ್ಧದ ಆ ಎರಡು ಟೆಸ್ಟ್‌ ಪಂದ್ಯಗಳಲ್ಲೂ ನಾವು ಉತ್ತಮ ಪ್ರದರ್ಶನ ನೀಡಲು ಎದುರು ನೋಡುತ್ತಿದ್ದೇವೆ. ಯಾಕೆಂದರೆ ಪಂದ್ಯ ನಡೆಯುತ್ತಿರುವುದು ಇಂಗ್ಲೆಂಡ್ ಪರಿಸ್ಥಿತಿಯಲ್ಲಿ ಅನ್ನೋದು ನಮಗೆ ಗೊತ್ತು,' ಎಂದು ಸೌಥೀ ಹೇಳಿದ್ದಾರೆ.

ಧೋನಿ ಹೆಸರಿನಲ್ಲಿರುವ ಟಿ ಟ್ವೆಂಟಿಯ ಈ ದಾಖಲೆಯನ್ನು ಮುರಿಯುವುದು ಸುಲಭದ ಮಾತಲ್ಲಧೋನಿ ಹೆಸರಿನಲ್ಲಿರುವ ಟಿ ಟ್ವೆಂಟಿಯ ಈ ದಾಖಲೆಯನ್ನು ಮುರಿಯುವುದು ಸುಲಭದ ಮಾತಲ್ಲ

ಬಲಗೈ ಮಧ್ಯಮ ವೇಗಿಯಾಗಿರುವ ಸೌಥೀ, 77 ಟೆಸ್ಟ್‌ ಪಂದ್ಯಗಳಲ್ಲಿ 1690 ರನ್, 302 ವಿಕೆಟ್, 143 ಏಕದಿನ ಪಂದ್ಯಗಳಲ್ಲಿ 190 ವಿಕೆಟ್, 82 ಟಿ20ಐ ಪಂದ್ಯಗಳಲ್ಲಿ 99 ವಿಕೆಟ್ ದಾಖಲೆ ಹೊಂದಿದ್ದಾರೆ. ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಜೂನ್ 18-22ರ ವರೆಗೆ ನಡೆಯಲಿದೆ.

Story first published: Saturday, May 22, 2021, 9:59 [IST]
Other articles published on May 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X