ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್‌ಪ್ರೀತ್ ಕೌರ್

U-19 Indian Womens T20 World Cup Win Has Inspired Us A Lot Says Harmanpreet Kaur

ಫೆಬ್ರವರಿ 10ರಿಂದ ಪ್ರಾರಂಭವಾಗುವ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ತಂಡವು ತನ್ನ ಮಹತ್ವಾಕಾಂಕ್ಷೆಯ ಐಸಿಸಿ ಟ್ರೋಫಿಯನ್ನು ಗೆಲ್ಲಲು ಎದುರು ನೋಡುತ್ತಿದೆ.

ದಕ್ಷಿಣ ಆಫ್ರಿಕಾದಲ್ಲಿ ಇತ್ತೀಚೆಗೆ ನಡೆದ ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಯಶಸ್ಸು ಹಿರಿಯರ ಮಹಿಳಾ ತಂಡಕ್ಕೆ ಹೆಚ್ಚಿನ ಸ್ಫೂರ್ತಿ ನೀಡುತ್ತದೆ ಎಂದು ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಹೇಳಿದ್ದಾರೆ.

 ಫೆ.1ರಂದು ಸಚಿನ್, ಬಿಸಿಸಿಐನಿಂದ ಟಿ20 ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ ಸನ್ಮಾನ ಫೆ.1ರಂದು ಸಚಿನ್, ಬಿಸಿಸಿಐನಿಂದ ಟಿ20 ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ ಸನ್ಮಾನ

ಭಾನುವಾರ ನಡೆದ ಚೊಚ್ಚಲ ಮಹಿಳಾ ಅಂಡರ್-19 ಟಿ20 ವಿಶ್ವಕಪ್‌ನಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಮಹಿಳಾ ಟಿ20 ವಿಶ್ವಕಪ್ ಕೂಡ ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 10ರಿಂದ ನಡೆಯಲಿದೆ.

U-19 Indian Womens T20 World Cup Win Has Inspired Us A Lot Says Harmanpreet Kaur

"ಅಂಡರ್-19 ಭಾರತ ಮಹಿಳಾ ತಂಡದ ಪ್ರಶಸ್ತಿ ವಿಜಯವು ಹೆಚ್ಚಿನ ಸ್ಫೂರ್ತಿ ನೀಡುತ್ತದೆ. ಯಾವುದೇ ವಿಶ್ವ ಪ್ರಶಸ್ತಿಯನ್ನು ಗೆಲ್ಲುವುದು ದೊಡ್ಡ ಕನಸಾಗಿರುತ್ತದೆ ಮತ್ತು ಚಾಂಪಿಯನ್‌ಶಿಪ್‌ನ ಉದ್ಘಾಟನಾ ಆವೃತ್ತಿಯಾಗಿದ್ದರಿಂದ ಇದನ್ನು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ," ಎಂದು ಹರ್ಮನ್‌ಪ್ರೀತ್ ಕೌರ್ ತಿಳಿಸಿದರು.

ಭಾರತ ಕಿರಿಯರ ಐತಿಹಾಸಿಕ ವಿಜಯಕ್ಕಾಗಿ ನಾನು ತಂಡವನ್ನು ಅಭಿನಂದಿಸುತ್ತೇನೆ ಮತ್ತು ನಾವು ಅವರನ್ನು ಅನುಕರಿಸಬಹುದೆಂದು ಭಾವಿಸುತ್ತೇನೆ,'' ಎಂದು ಹರ್ಮನ್‌ಪ್ರೀತ್ ಕೌರ್ ಐಸಿಸಿಗೆ ತನ್ನ ಅಂಕಣದಲ್ಲಿ ಬರೆದಿದ್ದಾರೆ.

ಮೂರು ಬಾರಿ ಐಸಿಸಿ ಟ್ರೋಫಿ ಫೈನಲ್‌ಗೆ ತಲುಪಿರುವ ಭಾರತ ಹಿರಿಯರ ಮಹಿಳಾ ಕ್ರಿಕೆಟ್ ತಂಡ ಒಮ್ಮೆಯೂ ವಿಶ್ವ ಪ್ರಶಸ್ತಿ ಗೆದ್ದಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

"ನಮ್ಮಲ್ಲಿ ಅನುಭವಿ ಆಟಗಾರ್ತಿಯರು ಹಾಗೂ ಯುವ ಆಟಗಾರ್ತಿಯರಾದ ಶಫಾಲಿ ವರ್ಮಾ ಮತ್ತು ರಿಚಾ ಘೋಷ್ ಅವರು ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡದ ಪ್ರಶಸ್ತಿ ವಿಜಯದ ತಾಜಾತನವನ್ನು ಹೊಂದಿದ್ದು, ಆಕರ್ಷಕ ಬ್ರಾಂಡ್ ಕ್ರಿಕೆಟ್‌ನಲ್ಲಿ ಆಡುತ್ತಿದ್ದಾರೆ ಮತ್ತು ಇದೀಗ ಉನ್ನತ ದರ್ಜೆಯ ಕ್ರಿಕೆಟ್‌ನ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ," ಎಂದು ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಹೇಳಿದರು.

"ನಾವು ಬ್ಯಾಟಿಂಗ್‌ನಲ್ಲಿ ದೊಡ್ಡ ಪಡೆಯನ್ನು ಹೊಂದಿದ್ದೇವೆ ಮತ್ತು ಬೌಲಿಂಗ್‌ ವಿಭಾಗವು ಸಾಕಷ್ಟು ವೈವಿಧ್ಯತೆಯಿಂದ ಕೂಡಿದೆ. ರೇಣುಕಾ ಸಿಂಗ್ ಠಾಕೂರ್, ದೀಪ್ತಿ ಶರ್ಮಾ ಬಲಿಷ್ಠ ತಂಡಗಳ ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದಾರೆ," ಎಂದು ಭಾರತೀಯ ಮಹಿಳಾ ತಂಡದ ನಾಯಕಿ ತಿಳಿಸಿದರು.

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾದಲ್ಲಿ ತ್ರಿಕೋನ ಸರಣಿಯಲ್ಲಿ ಆಡುತ್ತಿದೆ.

Story first published: Monday, January 30, 2023, 23:39 [IST]
Other articles published on Jan 30, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X