U-19 Women's T20 World Cup 2023: ನ್ಯೂಜಿಲೆಂಡ್ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ ವನಿತೆಯರು

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 2023ರ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಭಾರತ ಮಹಿಳಾ ತಂಡವು ನ್ಯೂಜಿಲೆಂಡ್ ಮಹಿಳಾ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಇದೀಗ ಭಾರತ ಮಹಿಳಾ ತಂಡ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಫೈನಲ್ ತಲುಪಿದೆ. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಇಲ್ಲಿ ಗೆದ್ದ ತಂಡವು ಭಾನುವಾರ, ಜನವರಿ 29ರಂದು ನಡೆಯುವ ಪ್ರಶಸ್ತಿ ಕಾಳಗದಲ್ಲಿ ಭಾರತ ಮಹಿಳೆಯರನ್ನು ಎದುರಿಸಲಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಮಹಿಳೆಯರು 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 107 ರನ್ ಗಳಿಸಲಷ್ಟೇ ಶಕ್ತರಾದರು. ಕಿವೀಸ್ ಪರ ಜಾರ್ಜಿಯಾ ಪ್ಲಿಮ್ಮರ್ (35), ಇಸಾಬೆಲ್ಲಾ ಗೇಜ್ (26), ಇಜ್ಜಿ ಶಾರ್ಪ್ (13) ಮಾತ್ರ ಭಾರತದ ಬೌಲಿಂಗ್‌ಗೆ ಪ್ರತಿರೋಧ ಒಡ್ಡಿದರು.

ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ನಾಯಕಿ ಶಫಾಲಿ ವರ್ಮಾ ಅವರ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಪಾರ್ಶವಿ ಚೋಪ್ರಾ ತನ್ನ ಕೋಟಾದ ನಾಲ್ಕು ಓವರ್‌ಗಳಲ್ಲಿ 20 ರನ್ ನೀಡಿ ಒಂದು ಮೇಡನ್ ಸೇರಿದಂತೆ 3 ವಿಕೆಟ್ ಪಡೆದು ಮಿಂಚಿದರು.
ಇದೇ ವೇಳೆ ಟಿಟಾಸ್ ಸಾಧು, ಮನ್ನತ್ ಕಶ್ಯಪ್, ಶಫಾಲಿ ವರ್ಮಾ ಮತ್ತು ಅರ್ಚನಾ ದೇವಿ ತಲಾ ಒಂದು ವಿಕೆಟ್ ಪಡೆದರು. ಪಾರ್ಶವಿ ಚೋಪ್ರಾ

108 ರನ್‌ಗಳ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ಮಹಿಳೆಯರು 8 ವಿಕೆಟ್ ಮತ್ತು ಐದು ಓವರ್‌ಗಳು ಬಾಕಿ ಇರುವಂತೆಯೇ ನಿಗದಿತ ಗುರಿ ತಲುಪಿತು. ನಾಯಕಿ ಶಫಾಲಿ ವರ್ಮಾ 10 ರನ್ ಗಳಿಸಿ ಔಟಾದರೆ, ಉಪನಾಯಕಿ ಶ್ವೇತಾ ಸೆಹ್ರಾವತ್ 45 ಎಸೆತಗಳಲ್ಲಿ 10 ಬೌಂಡರಿಗಳ ಸಮೇತ ಅಜೇಯ 61 ರನ್ ಬಾರಿಸಿದರು.
ಸೌಮ್ಯ ತಿವಾರಿ 26 ಎಸೆತಗಳಲ್ಲಿ 3 ಬೌಂಡರಿಗಳ ಸಹಾಯದಿಂದ 22 ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನುಳಿದಂತೆ ಗೊಂಗಾಡಿ ತ್ರಿಶಾ ಅಜೇಯ 5 ರನ್ ಗಳಿಸಿದರು. ಬೌಲಿಂಗ್‌ನಲ್ಲಿ ನ್ಯೂಜಿಲೆಂಡ್ ತಂಡದ ಪ್ರಮುಖ ಮೂರು ವಿಕೆಟ್ ಪಡೆದು ಮಿಂಚಿದ ಪಾರ್ಶವಿ ಚೋಪ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications