U-19 Women's T20 World Cup: ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಬೀಗಿದ ಭಾರತ ವನಿತೆಯರು

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 2023ರ ಅಂಡರ್-19 ಮಹಿಳಾ ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಅತಿಥೇಯ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ 7 ವಿಕೆಟ್‌ಗಳ ಗೆಲುವು ಸಾಧಿಸಿದೆ.
ದಕ್ಷಿಣ ಆಫ್ರಿಕಾ ನೀಡಿದ್ದ 167 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಭಾರತ ವನಿತೆಯರು 16.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
IND vs SL: ಭಾರತ vs ಶ್ರೀಲಂಕಾ 3ನೇ ಏಕದಿನ ಪಂದ್ಯದ ಸಂಭಾವ್ಯ 11ರ ಬಳಗ, ಟಿವಿ & ಲೈವ್‌ಸ್ಟ್ರೀಮಿಂಗ್ ವಿವರ
ಭಾರತ ತಂಡದ ಆರಂಭಿಕ ಬ್ಯಾಟರ್‌ಗಳಾದ ನಾಯಕಿ ಶಫಾಲಿ ವರ್ಮಾ ಮತ್ತು ಶ್ವೇತಾ ಸೆಹ್ರಾವತ್ ಅವರು ಶನಿವಾರ, ಜನವರಿ 14ರಂದು ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಭಾರತಕ್ಕೆ ಜಯ ತಂದಿತ್ತರು.
ಶಫಾಲಿ ವರ್ಮಾ 16 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 45 ರನ್ ಗಳಿಸಿ ಔಟಾದರೆ, ಶ್ವೇತಾ ಸೆಹ್ರಾವತ್ 57 ಎಸೆತಗಳಲ್ಲಿ 20 ಬೌಂಡರಿಗಳ ನೆರವಿನಿಂದ 92 ರನ್ ಗಳಿಸಿ ಅಜೇಯರಾಗುಳಿದರು.

ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಆರಂಭಿಕ ಬ್ಯಾಟರ್‌ಗಳಾದ ಎಲಾಂಡ್ರಿ ರೆನ್ಸ್‌ಬರ್ಗ್ (23) ಮತ್ತು ಸಿಮೋನ್ ಲೂರೆನ್ಸ್ (61) ಉತ್ತಮ ಆರಂಭವನ್ನು ಒದಗಿಸಿದರು. ಮೊದಲ ನಾಲ್ಕು ಓವರ್‌ಗಳಲ್ಲಿ 56 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದರು.
ಎಲಾಂಡ್ರಿ ರೆನ್ಸ್‌ಬರ್ಗ್ ವಿಕೆಟ್ ಬೀಳುತ್ತಿದ್ದಂತೆ ಭಾರತ ಮಹಿಳಾ ವನಿತೆಯರು ಮೇಲುಗೈ ಸಾಧಿಸಿದರು. ನಂತರ ಮ್ಯಾಡಿಸನ್ ಲ್ಯಾಂಡ್ಸ್‌ಮನ್ (17 ಎಸೆತಗಳಲ್ಲಿ 32 ರನ್), ಕರಾಬೊ ಮೆಸೊ (11 ಎಸೆತಗಳಲ್ಲಿ 19 ರನ್) ಮತ್ತು ಮ್ಲೇನ್ ಸ್ಮಿತ್ 9 ಎಸೆತಗಳಲ್ಲಿ 16 ರನ್‌ಗಳ ನೆರವಿವಿನಿಂದ ಆತಿಥೇಯ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟಕ್ಕೆ 166 ರನ್ ಗಳಿಸಿತು.

ಭಾರತ ಬೌಲಿಂಗ್‌ನಲ್ಲಿ ಶಫಾಲಿ ವರ್ಮಾ 4 ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಪಡೆದರೆ, ಪರ್ಶಾವಿ ಚೋಪ್ರಾ ಮತ್ತು ಸೋನಮ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಬ್ಯಾಟಿಂಗ್ ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಟಗಾರ್ತಿ ಶ್ವೇತಾ ಸೆಹ್ರಾವತ್ ಗೆಲುವಿನ ರನ್ ಬಾರಿಸುತ್ತಿದ್ದಂತೆ ಭಾರತ 21 ಎಸೆತಗಳು ಬಾಕಿ ಇರುವಂತೆಯೇ ಏಳು ವಿಕೆಟ್‌ಗಗಳ ಜಯ ಸಾಧಿಸಿತು. ಭಾರತ ತಂಡವು ಸೋಮವಾರ, ಜನವರಿ 16ರಂದು ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications