For Quick Alerts
ALLOW NOTIFICATIONS  
For Daily Alerts
 

U-19 Women's World Cup 2023: ಸೆಮಿಫೈನಲ್‌ ಪ್ರವೇಶಿಸಿದ ಭಾರತಕ್ಕೆ ನ್ಯೂಜಿಲೆಂಡ್ ಎದುರಾಳಿ

U-19 Womens T20 World Cup: India Women Team Qualified For Semifinal Will Face New Zealand

ಅಂಡರ್ 19 ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತದ ವನಿತೆಯರು ಸೆಮಿಫೈನಲ್ ಪ್ರವೇಶಿಸಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದ್ದು, ಜನವರಿ 27 ರಂದು ಪಂದ್ಯ ನಡೆಯಲಿದೆ.

ಸೂಪರ್ ಸಿಕ್ಸ್ ಹಂತದ 1ನೇ ಗುಂಪಿನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಭಾರತದ ವನಿತೆಯರು ಸೆಮಿಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸೂಪರ್ 6 ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿ 6 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನಕ್ಕೇರಿತ್ತು. ಆಸ್ಟ್ರೇಲಿಯಾ ಕೂಡ 4 ಪಂದ್ಯಗಳಲ್ಲಿ 3 ಜಯ ಸಾಧಿಸಿ 6 ಪಾಯಿಂಟ್ ಹೊಂದಿದ್ದರೂ ರನ್‌ರೇಟ್ ಆಧಾರದಲ್ಲಿ ಭಾರತ ಅಗ್ರಸ್ಥಾನ ಪಡೆದುಕೊಂಡಿತು.

ಸೂಪರ್ ಸಿಕ್ಸ್ 1ನೇ ಗುಂಪಿನಿಂದ ಭಾರತ ಮತ್ತು ಆಸ್ಟ್ರೇಲಿಯಾ ಸೆಮಿಫೈನಲ್ ಪ್ರವೇಶಿಸಿದ್ದರೆ, ಸೂಪರ್ ಸಿಕ್ಸ್ 2ನೇ ಗುಂಪಿನಿಂದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದಿವೆ. ಸೆಮಿಫೈನಲ್‌ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಸೆಣೆಸಿದರೆ, ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ ಸೆಣೆಸಲಿದೆ.

ಸೂಪರ್ ಸಿಕ್ಸ್ ಹಂತದಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಅಜೇಯವಾಗಿ ಉಳಿದಿವೆ. ಆಡಿರುವ ನಾಲ್ಕು ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದ್ದು, ಸೆಮಿಫೈನಲ್‌ನಲ್ಲಿ ಕಠಿಣ ಸವಾಲಾಕಲು ಸಿದ್ಧವಾಗಿವೆ.

U-19 Womens T20 World Cup: India Women Team Qualified For Semifinal Will Face New Zealand

ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಕಂಟಕ

ಭಾರತಕ್ಕೆ ವಿವಿಧ ಪಂದ್ಯಾವಳಿಗಳಲ್ಲಿ ನ್ಯೂಜಿಲೆಂಡ್ ಕಂಟಕವಾಗಿದೆ. 2021 ರ ಟಿ20 ವಿಶ್ವಕಪ್‌ನಲ್ಲಿ ಭಾರತ ಪುರುಷರ ತಂಡ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್‌ನಲ್ಲಿ ಸೋಲನುಭವಿಸಿತ್ತು. ಕಳೆದ ಬಾರಿಯ ಪುರುಷರ ಏಕದಿನ ವಿಶ್ವಕಪ್‌ನಲ್ಲಿ ಕೂಡ ನ್ಯೂಜಿಲೆಂಡ್ ಭಾರತವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಇತ್ತೀಚೆಗೆ ನಡೆದ ಹಾಕಿ ವಿಶ್ವಕಪ್‌ನಲ್ಲಿ ಕೂಡ ನ್ಯೂಜಿಲೆಂಡ್ ಭಾರತಕ್ಕೆ ಆಘಾತ ನೀಡಿದೆ.

ಲೀಗ್‌ ಹಂತದ ಪಂದ್ಯಗಳಲ್ಲಿ ಮತ್ತು ಸೂಪರ್ ಸಿಕ್ಸ್ ಹಂತದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಭಾರತ ನ್ಯೂಜಿಲೆಂಡ್ ವಿರುದ್ಧ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ, ನ್ಯೂಜಿಲೆಂಡ್ ವಿರುದ್ಧ ಗೆಲ್ಲುವುದು ಭಾರತದ ವನಿತೆಯರಿಗೆ ಸುಲಭವಾಗುವುದಿಲ್ಲ. ತಂಡವಾಗಿ ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗುತ್ತದೆ. ಭಾರತ ತಂಡದ ನಾಯಕಿ ಶಫಾಲಿ ವರ್ಮಾ ತಮ್ಮ ಫಾರ್ಮ್ ಪ್ರದರ್ಶಿಸಬೇಕಿದೆ.

ಭಾರತ ಸಂಭಾವ್ಯ ಆಡುವ ಬಳಗ: ಶ್ವೇತಾ ಸೆಹ್ರಾವತ್, ಶಫಾಲಿ ವರ್ಮಾ (ನಾಯಕಿ), ಸೌಮ್ಯ ತಿವಾರಿ, ಗೊಂಗಡಿ ತ್ರಿಶಾ, ರಿಚಾ ಘೋಷ್ (ವಿಕೆಟ್ ಕೀಪರ್), ಹೃಷಿತಾ ಬಸು, ಟಿಟಾಸ್ ಸಾಧು, ಮನ್ನತ್ ಕಶ್ಯಪ್, ಅರ್ಚನಾ ದೇವಿ, ಪಾರ್ಶವಿ ಚೋಪ್ರಾ, ಸೋನಮ್ ಯಾದವ್.

Story first published: Thursday, January 26, 2023, 8:26 [IST]
Other articles published on Jan 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+