ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

U-19 Women's T20 World Cup 2023: ಭಾರತ ತಂಡವನ್ನು ಭೇಟಿ ಮಾಡಿದ 'ಚಿನ್ನದ ಹುಡುಗ' ನೀರಜ್ ಚೋಪ್ರಾ

U-19 Womens T20 World Cup: Neeraj Chopra Meets Team India Ahead Of Final Match

19 ವರ್ಷದೊಳಗಿನವರ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಫೈನಲ್‌ಗೆ ಪ್ರವೇಶಿಸಿದೆ. ಜನವರಿ 29 ಭಾನುವಾರ ನಡೆಯುವ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣೆಸಲಿದೆ.

ಫೈನಲ್‌ ಪಂದ್ಯದಲ್ಲಿ ಗೆದ್ದು ಚೊಚ್ಚಲ ವಿಶ್ವಕಪ್ ಎತ್ತಿಹಿಡಿಯಲು ಶಫಾಲಿ ವರ್ಮಾ ಪಡೆ ಕಠಿಣ ಅಭ್ಯಾಸ ನಡೆಸುತ್ತಿದೆ. ಇಡೀ ದೇಶಾದ್ಯಂತ ಭಾರತದ ಯುವ ಮಹಿಳಾ ತಂಡಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಹಲವು ದಿಗ್ಗಜರು ಕೂಡ ಫೈನಲ್ ಪಂದ್ಯಕ್ಕೆ ಮುನ್ನ ಭಾರತ ತಂಡಕ್ಕೆ ಶುಭ ಕೋರುತ್ತಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್‌ಗೆ ಸೋಲು: ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ವಿರುದ್ಧ ಬೆನ್‌ ಸ್ಟೋಕ್ಸ್ ಟೀಕೆದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್‌ಗೆ ಸೋಲು: ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ವಿರುದ್ಧ ಬೆನ್‌ ಸ್ಟೋಕ್ಸ್ ಟೀಕೆ

ಭಾರತದ ಚಿನ್ನದ ಹುಡುಗ, ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಭಾರತ ತಂಡವನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಮೂಲಕ, ತಂಡದಲ್ಲಿ ಉತ್ಸಾಹ ತುಂಬಿದ್ದಾರೆ. ಇದೇ ಸಂದರ್ಭದಲ್ಲಿ ಭಾರತ ತಂಡದ ನಾಯಕಿ ಶಫಾಲಿ ವರ್ಮಾ ಹುಟ್ಟುಹಬ್ಬವನ್ನು ಕೂಡ ಆಚರಿಸಲಾಗಿದೆ. ತಮ್ಮ ಹುಟ್ಟುಹಬ್ಬವನ್ನು ವಿಶೇಷವನ್ನಾಗಿ ಮಾಡಿದ್ದಕ್ಕೆ ಶಫಾಲಿ ವರ್ಮಾ ನೀರಜ್ ಚೋಪ್ರಾ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ನೀರಜ್ ಚೋಪ್ರಾ ಭಾರತ ತಂಡವನ್ನು ಭೇಟಿ ಮಾಡಿರುವ ಚಿತ್ರಗಳನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ವಿಕೆಟ್ ಕೀಪರ್ ಆಗಿ ಈತನೇ ಸೂಕ್ತ ಎಂದ ಆಕಾಶ್ ಚೋಪ್ರಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ವಿಕೆಟ್ ಕೀಪರ್ ಆಗಿ ಈತನೇ ಸೂಕ್ತ ಎಂದ ಆಕಾಶ್ ಚೋಪ್ರ

ಫೋಟೊಗಳನ್ನು ಹಂಚಿಕೊಂಡ ಬಿಸಿಸಿಐ

ಫೋಟೊಗಳನ್ನು ಹಂಚಿಕೊಂಡ ಬಿಸಿಸಿಐ

ನೀರಜ್ ಚೋಪ್ರಾ ಭಾರತ ತಂಡಕ್ಕೆ ಸಲಹೆ ನೀಡುತ್ತಿರುವ ಫೋಟೊಗಳನ್ನು ಹಂಚಿಕೊಂಡಿರುವ ಬಿಸಿಸಿಐ, "ಚಿನ್ನದ ಗುಣಮಟ್ಟದ ಸಭೆ! ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ, ಅಂಡರ್ 19 ಟಿ20 ವಿಶ್ವಕಪ್‌ ಫೈನಲ್‌ಗೆ ಮುಂಚಿತವಾಗಿ ಭಾರತ ತಂಡದೊಂದಿದೆ ಸಂವಾದ ನಡೆಸಿದರು!" ಎಂದು ಬರೆದುಕೊಂಡಿದೆ.

ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಏಕೈಕ ಕ್ರೀಡಾಪಟು ನೀರಜ್ ಚೋಪ್ರಾ, ಭಾರತ ತಂಡದೊಂದಿಗೆ ಕೆಲ ಕಾಲ ಕಳೆದಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಸಹಾಯ ಮಾಡಿದೆ.

 ಒತ್ತಡ ನಿರ್ವಹಿಸಲು ಸಲಹೆ ನೀಡಿದ ನೀರಜ್

ಒತ್ತಡ ನಿರ್ವಹಿಸಲು ಸಲಹೆ ನೀಡಿದ ನೀರಜ್

ಒತ್ತಡದ ಸಂದರ್ಭದಲ್ಲಿ ಉತ್ತಮವಾಗಿ ಆಟವಾಡಲು, ಒತ್ತಡವನ್ನು ಯಶಸ್ವಿಯಾಗಿ ನಿಭಾಯಿಸುವ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀರಜ್ ಚೋಪ್ರಾ ಭಾರತದ ಯುವ ಪಡೆಗೆ ನೀಡಿದ್ದಾರೆ. ಒತ್ತಡದ ಸಂದರ್ಭವನ್ನು ತಾನು ಹೇಗೆ ನಿಭಾಯಿಸುತ್ತೇನೆ ಎನ್ನುವ ಸಲಹೆಗಳನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ಒಲಿಂಪಿಕ್ ಚಿನ್ನದ ಪದಕ ವಿಜೇತ ಆಟಗಾರನ ಭೇಟಿ ಭಾರತದ ಯುವ ತಂಡದ ವಿಶ್ವಾಸವನ್ನು ಹೆಚ್ಚಿಸಿದೆ. ಫೈನಲ್‌ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಭಾರತಕ್ಕೆ ವಿಶ್ವಕಪ್ ತಂದುಕೊಡುವ ವಿಶ್ವಾಸದಲ್ಲಿದ್ದಾರೆ.

ಇದೇ ಸಂದರ್ಭದಲ್ಲಿ ಭಾರತ ತಂಡದ ನಾಯಕಿ ಶಫಾಲಿ ವರ್ಮಾರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಹಾಜರಿದ್ದ ನೀರಜ್ ಚೋಪ್ರಾ ಅವರಿಗೆ ಶಫಾಲಿ ವರ್ಮಾ ಧನ್ಯವಾದ ತಿಳಿಸಿದ್ದಾರೆ.

ಫೈನಲ್ ಪಂದ್ಯದ ಬಗ್ಗೆ ಮಾಹಿತಿ

ಫೈನಲ್ ಪಂದ್ಯದ ಬಗ್ಗೆ ಮಾಹಿತಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಫೈನಲ್ ಪಂದ್ಯ ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಪಾರ್ಕ್‌ನಲ್ಲಿ ನಡೆಯಲಿದೆ. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯ ಸಾಧಿಸಿದ ಭಾರತ ಫೈನಲ್ ಪ್ರವೇಶಿಸಿದರೆ, ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಇಂಗ್ಲೆಂಡ್‌ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಜನವರಿ 29ರಂದು ಭಾನುವಾರ ಭಾರತೀಯ ಕಾಲಮಾನ ಸಂಜೆ 5.45ಕ್ಕೆ ಫೈನಲ್ ಪಂದ್ಯ ಆರಂಭವಾಗಲಿದೆ. ಭಾರತದಲ್ಲಿ ಈ ಪಂದ್ಯವನ್ನು ಫ್ಯಾನ್‌ಕೋಡ್ ಆಪ್‌ನಲ್ಲಿ ನೋಡಬಹುದಾಗಿದೆ. ಇದು ಅಂಡರ್ 19 ಮಹಿಳಾ ಟಿ20 ವಿಶ್ವಕಪ್‌ ಚೊಚ್ಚಲ ಆವೃತ್ತಿಯಾಗಿದೆ.

Story first published: Sunday, January 29, 2023, 7:24 [IST]
Other articles published on Jan 29, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X