U-19 World Cup Final: ಇಂಗ್ಲೆಂಡ್ ಮಣಿಸಿ 6ನೇ ಬಾರಿ ಚಾಂಪಿಯನ್ ಆಗುತ್ತಾ ಭಾರತ?
ಹರಾರೆ: ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಫೈನಲ್‌ನಲ್ಲಿ ಮುಖಾಮುಖಿ ಆಗಲಿವೆ. ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಭಾರತ, ಟ್ರೋಫಿ ಎತ್ತುವ ಕನಸಿನಲ್ಲಿದೆ. ಆಯುಷ್ ಮ್ಹಾತ್ರೆ ಪಡೆ ಆರನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಇರಾದೆಯನ್ನು ಹೊಂದಿದೆ.
ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು 27 ರನ್‌ಗಳಿಂದ ಮಣಿಸಿದ ಇಂಗ್ಲೆಂಡ್ ಫೈನಲ್‌ಗೆ ಅರ್ಹತೆ ಪಡೆದಿತ್ತು. ಇನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಅಫ್ಘಾನಿಸ್ತಾನ ನೀಡಿದ್ದ 311 ರನ್‌ಗಳ ಗುರಿಯನ್ನು ಸಮರ್ಥವಾಗಿ ಮುಟ್ಟಿತ್ತು. ಈ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆದಿತ್ತು.

ಈ ಪಿಚ್ ಲೀಗ್‌ನ ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ನೆರವು ನೀಡಿತ್ತು. ಆದರೆ ಸೆಮಿಫೈನಲ್‌ನಲ್ಲಿ ಭಾರತ ಇದೇ ಪಂದ್ಯದಲ್ಲಿ ಆಡಿದ್ದರಿಂದ ಈ ಪಿಚ್ ಬ್ಯಾಟರ್‌ಗಳಿಗೂ ಸಹಾಯ ನೀಡಲಿದೆ. ಶುಕ್ರವಾರ ನಡೆಯುವ ಫೈನಲ್ ಪಂದ್ಯಕ್ಕೆ ಮಳೆ ಕಾಟ ನೀಡುವ ಸಾಧ್ಯತೆ ಇದೆ. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡುವ ಸಾಧ್ಯತೆ ಇದೆ. ಈ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲುವ ಹಾಟ್ ಫೇವರಿಟ್ ತಂಡ.
ವೈಭವ್ ಮೇಲೆ ಕಣ್ಣು
ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದಲೇ ಹೆಸರುವಾಸಿಯಾಗಿರುವ ಭಾರತ ಅಂಡರ್ 19 ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಬಿರುಸಿನ ಬ್ಯಾಟಿಂಗ್‌ಗೆ ಹೆಸರುವಾಸಿ. ಇವರು ಟೂರ್ನಿಯಲ್ಲಿ ಆಡಿದ 6 ಪಂದ್ಯಗಳಲ್ಲಿ 44ರ ಸರಾಸರಿಯಲ್ಲಿ 264 ರನ್ ಸಿಡಿಸಿದ್ದಾರೆ. ಇವರಿಗೆ ಆರಂಭದಲ್ಲಿ ಆರನ್ ಜಾರ್ಜ್ ಉತ್ತಮ ಸಾಥ್ ನೀಡಬಲ್ಲರು. ಇವರು ಅಫ್ಘಾನಿಸ್ತಾನ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಹೀಗಾಗಿ ಇವರ ಮೇಲೆ ಭರವಸೆ ಹೆಚ್ಚಿದೆ. ಮಧ್ಯಮ ಕ್ರಮಾಂಕದಲ್ಲಿ ವಿಹಾನ್ ಮಲ್ಹೋತ್ರಾ (210 ರನ್), ಅಭಿಜ್ಞಾನ್ ಕುಂಡು (199 ರನ್), ನಾಯಕ ಆಯುಷ್ ಮಾತ್ರೆ (161 ರನ್) ತಂಡಕ್ಕೆ ನೆರವಾಬಲ್ಲ ಆಟಗಾರರಾಗಿದ್ದಾರೆ. ಟೀಮ್ ಇಂಡಿಯಾದ ಭರವಸೆಯ ಬೌಲರ್‌ಗಳು ಬಿಗುವಿನ ದಾಳಿ ನಡೆಸಿ ತಂಡದ ಗೆಲುವಿನಲ್ಲಿ ಮಿಂಚಬೇಕಿದೆ.
ಭಾರತ U19 ಸಂಭಾವ್ಯ ತಂಡ: ಆಯೂಷ್ ಮ್ಹಾತ್ರೆ (ನಾಯಕ), ಆರೋನ್ ಜಾರ್ಜ್, ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರಾ, ವೇದಾಂತ್ ತ್ರಿವೇದಿ, ಅಭಿಜ್ಞಾನ್ ಕುಂಡು (ವಿಕೆಟ್ ಕೀಪರ್), ಆರ್. ಎಸ್. ಅಂಬರೀಶ್, ಕನಿಷ್ಕ್ ಚೌಹಾಣ್, ಖಿಲನ್ ಪಟೇಲ್, ಹೇನಿಲ್ ಪಟೇಲ್, ದೀಪೇಶ್ ದೇವೇಂದ್ರನ್.
ಸಂಘಟಿತ ಆಟದ ಬಲ
ಇಂಗ್ಲೆಂಡ್ ತಂಡದ ಪರ ನಾಯಕ ಥಾಮಸ್ ರೆವ್ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಇವರನ್ನು ಬೇಗ ಖೆಡ್ಡಾ ತೋಡುವ ಅವಶ್ಯಕತೆ ಇದೆ. ಬೆನ್ ಮೇಯ್ಸ್ (399 ರನ್) ಟೂರ್ನಿಯಲ್ಲಿ ಇಂಗ್ಲೆಂಡ್ ಪರ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಆಗಿದ್ದಾರೆ. ಬೌಲಿಂಗ್‌ನಲ್ಲಿ ಮ್ಯಾನಿ ಲಮ್ಸ್‌ಡನ್, ರಾಲ್ಫಿ ಆಲ್ಬರ್ಟ್ ಬಿಗುವಿನ ದಾಳಿ ನಡೆಸುವ ಸಾಮರ್ಥ್ಯವನ್ನು ಹೊಂದಿದ್ದಾರೆ.
ಇಂಗ್ಲೆಂಡ್ U19 ಸಂಭಾವ್ಯ ತಂಡ: ಥಾಮಸ್ ರೀವ್ (ನಾಯಕ/ವಿಕೆಟ್ ಕೀಪರ್), ಬೆನ್ ಡಾಕಿನ್ಸ್, ಜೋಸೆಫ್ ಮೂರ್ಸ್, ಬೆನ್ ಮೇಯ್ಸ್, ಕಲೆಬ್ ಫಾಲ್ಕನರ್, ರಾಲ್ಫಿ ಆಲ್ಬರ್ಟ್, ಫರ್ಹಾನ್ ಅಹ್ಮದ್, ಸೆಬಾಸ್ಟಿಯನ್ ಮೋರ್ಗನ್, ಜೇಮ್ಸ್ ಮಿಂಟೋ, ಮ್ಯಾನಿ ಲಮ್ಸ್‌ಡನ್, ಅಲೆಕ್ಸ್ ಫ್ರೆಂಚ್.
ಭಾರತ, ಇಂಗ್ಲೆಂಡ್ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯವನ್ನು ಎಲ್ಲಿ ನೋಡಬಹುದು?
ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೋಡಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್ ಸ್ಟಾರ್‌ನಲ್ಲಿ ಈ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಆರಂಭವಾಗುವುದು ಯಾವಾಗ?
ಫೈನಲ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಪಂದ್ಯ ಆರಂಭಕ್ಕೂ ಅರ್ಧ ಗಂಟೆ ಮುನ್ನ ಟಾಸ್ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications