Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

U19 WOMEN T20 WORLD CUP: ತ್ರಿಶಾ ಸ್ಫೋಟಕ ಶತಕ; ಸ್ಕಾಟ್ಲೆಂಡ್ ವಿರುದ್ಧ ಭಾರತಕ್ಕೆ ಜಯ

ಮಲೇಷ್ಯಾದಲ್ಲಿ ನಡೆಯುತ್ತಿರುವ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಕ್ರಿಕೆಟ್ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ನಿಕ್ಕಿ ಪ್ರಸಾದ್ ನಾಯಕತ್ವದ ಅಂಡರ್-19 ಭಾರತ ಮಹಿಳಾ ತಂಡ ಇದೀಗ ಸ್ಕಾಟ್ಲೆಂಡ್ ವಿರುದ್ಧ ತನ್ನ ಅತಿ ದೊಡ್ಡ ಗೆಲುವು ದಾಖಲಿಸಿದೆ. ಇದರೊಂದಿಗೆ ಭಾರತ ತಂಡದ ಸೆಮಿಫೈನಲ್ ಟಿಕೆಟ್ ಕೂಡ ಬಹುತೇಕ ಕನ್ಫರ್ಮ್ ಆಗಿದೆ. ಭಾರತ ತಂಡದ ಬ್ಯಾಟರ್ ಗೊಂಗಡಿ ತ್ರಿಶಾ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದಾರೆ. ತ್ರಿಶಾ ಶತಕದ ನೆರವಿನಿಂದ ಭಾರತ 150 ರನ್‌ಗಳ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 208 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತ್ತು. ಭಾರತ ನೀಡಿದ 209 ರನ್ ಗಳ ಗುರಿ ಬೆನ್ನಟ್ಟಿದ ಸ್ಕಾಟ್ಲೆಂಡ್ 14 ಓವರ್‌ಗಳಲ್ಲಿ ಕೇವಲ 58 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತ 150 ರನ್‌ಗಳ ಅಮೋಘ ಗೆಲುವು ಕಂಡಿತು.

U19 WOMEN T20 WORLD CUP India Women win against Scotland

ಸ್ಕಾಟ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಟೀಮ್ ಇಂಡಿಯಾ ತನ್ನ ಗುಂಪಿನಲ್ಲಿ ಅಂದರೆ ಗ್ರೂಪ್- 1 ರಲ್ಲಿ ಆಡಿರುವ 3 ಪಂದ್ಯಗಳಲ್ಲಿ 3 ಗೆಲುವಿನೊಂದಿಗೆ ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಈಗ ಭಾರತ ತಂಡಕ್ಕೆ ಸೆಮಿಫೈನಲ್ ತಲುಪುವ ಎಲ್ಲ ಅವಕಾಶಗಳಿವೆ. ಗ್ರೂಪ್-2 ರಲ್ಲಿ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದ್ದು, ಇಂಗ್ಲೆಂಡ್ ತಂಡ ಎರಡನೇ ಸ್ಥಾನದಲ್ಲಿದೆ.

Story first published: Tuesday, January 28, 2025, 16:17 [IST]
Other articles published on Jan 28, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+