U19 Asia Cup: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎದುರು ಭಾರತಕ್ಕೆ ಜಯ
ಮಹಿಳಾ ಅಂಡರ್-19 ಏಷ್ಯಾಕಪ್ 2024ರ ಟೂರ್ನಿ ಮಲೇಷ್ಯಾದಲ್ಲಿ ನಡೆಯುತ್ತಿದೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿಯೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿ ಶುಭಾರಂಭ ಮಾಡಿದೆ. ನಿಕ್ಕಿ ಪ್ರಸಾದ್ ನಾಯಕತ್ವದಲ್ಲಿ ಆಡುತ್ತಿರುವ ಭಾರತ ತಂಡ ಮೊದಲ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಪಾಕಿಸ್ತಾನ ನೀಡಿದ 68 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದ ಬ್ಯಾಟರ್‌ಗಳು ಕೇವಲ 7.5 ಓವರ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಜಿ ಕಮಲಿನಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
ಪಾಕಿಸ್ತಾನದ ನಾಯಕಿ ಜುಫಿಶನ್ ಅಯಾಜ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ, ಪಾಕಿಸ್ತಾನ ನಾಯಕಿ ಅಂದುಕೊಂಡಂತೆ ನಡೆಯಲಿಲ್ಲ. ಭಾರತದ ಬಲಿಷ್ಠ ಬೌಲಿಂಗ್ ಮುಂದೆ ಪಾಕಿಸ್ತಾನದ ಬ್ಯಾಟಿಂಗ್ ವಿಭಾಗ ತತ್ತರಿಸಿತು. ಪಾಕಿಸ್ತಾನದ ಬ್ಯಾಟರ್‌ಗಳು ಸಂಪೂರ್ಣ 20 ಓವರ್‌ಗಳನ್ನು ಆಡಿದ ನಂತರವೂ ಕೇವಲ 67 ರನ್‌ಗಳನ್ನು ಸೇರಿಸಲು ಸಾಧ್ಯವಾಯಿತು. ಭಾರತದ ಪರ ಸೋನಮ್ ಯಾದವ್ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡುವ ಮೂಲಕ ನಾಲ್ಕು ವಿಕೆಟ್ ಪಡೆದರು.

ಪಾಕಿಸ್ತಾನ ನೀಡಿದ 68 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಸುಲಭವಾಗಿ ಜಯ ಸಾಧಿಸಿತು. ಭಾರತದ ಪರ ಜಿ ಕಮಲಿನಿ 29 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 44 ರನ್‌ಗಳ ಅಜೇಯ ಇನ್ನಿಂಗ್ಸ್ ಅನ್ನು ಆಡಿದರು. ಇವರೊಂದಿಗೆ ಸಾನಿಕಾ ಚಾಲ್ಕೆ 19 ರನ್ ಗಳಿಸಿ ಅಜೇಯರಾಗಿ ಉಳಿದರು.
ವಿಂಡೀಸ್ ವನಿತೆಯರನ್ನು ಮಣಿಸಿದ ಭಾರತ
ಮತ್ತೊಂದೆಡೆ, ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ವನಿತೆಯರು ಗೆಲುವು ಸಾಧಿಸಿದ್ದಾರೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ತಂಡ 49 ರನ್‌ಗಳಿಂದ ಪಂದ್ಯವನ್ನು ಗೆದ್ದಿದೆ. ಈ ಮೂಲಕ ಭಾರತ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ರಲ್ಲಿ ಮುನ್ನಡೆ ಸಾಧಿಸಿದೆ.
ಈ ಪಂದ್ಯದಲ್ಲಿ ಮೊಲದ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 195 ರನ್ ಕಲೆ ಹಾಕಿತ್ತು. ಭಾರತ ಪರ ಆರಂಭಿ ಬ್ಯಾಟರ್ ಸ್ಮೃತಿ ಮಂಧಾನ 33 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 54 ರನ್ ಕಲೆ ಹಾಕಿದರೆ, ಬಿರುಸಿನ ಬ್ಯಾಟಿಂಗ್ ಮಾಡಿದ ಜೆಮಿಮಾ ರಾಡ್ರಿಗಸ್ 35 ಎಸೆತಗಳಲ್ಲಿ 9 ಬೌಂಡರಿ ಹಾಗು 2 ಸಿಕ್ಸರ್ ಮೂಲಕ 73 ರನ್ ಕಲೆ ಹಾಕಿದರು. ಜೊತೆಗೆ ಉಮಾ ಚೆಟ್ರಿ (24) ಮತ್ತು ರಿಚಾ ಘೋಷ್ (20) ಔಟಾದರು. ಕೊನೆಯಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ 13 ಮತ್ತು ಸಜೀವನ್ ಸಜನ 1 ರನ್ ಗಳಿಸಿ ಅಜೇಯರಾಗುಳಿದರು.
ಭಾರತ ನೀಡಿದ 196 ರನ್‌ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಹೇಳಿಕೊಳ್ಳುವಂತಹ ಆರಂಭ ಪಡೆಯಲಿಲ್ಲ. ಭಾರತ ವನಿತೆಯರ ಬೌಲಿಂಗ್ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ 7 ವಿಕೆಟ್ ಕಳೆದುಕೊಂಡು 146 ರನ್‌ಗಳಿಸಲಷ್ಟೇ ಶಕ್ತವಾಯಿತು. ವೆಸ್ಟ್ ಇಂಡೀಸ್ ಪರ ಡಿಯಾಂಡ್ರಾ ಡಾಟಿನ್ (52) ಅರ್ಧಶತಕ ಬಾರಿಸಿದರೆ, ಕಿಯಾನಾ ಜೋಸೆಫ್ (49) ಅರ್ಧಶತಕ ಹೊಸ್ತಿಯಲ್ಲಿ ಔಟಾದರು. ಭಾರತದ ಪರ ಟಿಟಾಸ್ ಸಾಧು ಮೂರು ವಿಕೆಟ್ ಕಬಳಿಸಿದರು. ದೀಪ್ತಿ ಶರ್ಮಾ ಮತ್ತು ರಾಧಾ ಯಾದವ್ ತಲಾ ಎರಡು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications