ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಿಷೇಧದ ವಿರುದ್ಧ ಉಮರ್ ಅಕ್ಮಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ

Umar Akmals Appeal Against 3-Year Ban To Be Heard On June 11

ಪಾಕಿಸ್ತಾನದ ಕ್ರಿಕೆಟಿಗ ಉಮರ್ ಅಕ್ಮಲ್ ತನ್ನ ಮೇಲೆ ಹೇರಿರುವ ಮೂರು ವರ್ಷಗಳ ನಿಷೇಧ ಕ್ರಮದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಿದ್ದರು. ಈ ಮೇಲ್ಮನವಿಯ ವಿಚಾರಣೆಯನ್ನು ಜೂನ್ 11ರಂದು ಪಾಕಿಸ್ತಾನ ಸುಪ್ರೀಮ್ ಕೋರ್ಟ್‌ನ ಮಾಜಿ ನ್ಯಾಯಾಧೀಶ ಜಸ್ಟೀಸ್ ಫಕೀರ್ ಮುಹಮ್ಮದ್ ಖೋಖರ್ ನಡೆಸಲಿದ್ದಾರೆ. ಅವರು ಸ್ವತಂತ್ರ ತೀರ್ಪುಗಾರರಾಗಿ ವಿಚಾರಣೆಯನ್ನು ನಡೆಸಲಿದ್ದಾರೆ ಎಂದು ಪಿಸಿಬಿ ಪ್ರಕಟಿಸಿದೆ.

ಈ ವಿಚಾರಣೆಯ ಕುರಿತಾಗಿ ಉಮರ್ ಅಕ್ಮಲ್ ಮತ್ತು ಕ್ರಿಕೆಟ್ ಮಂಡಳಿಗೆ ನೋಟಿಸ್ ನೀಡಿರುವುದಾಗಿ ಪಿಸಿಬಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಪಿಸಿಬಿ ಭ್ರಷ್ಟಾಚಾರ ನಿಗ್ರಹ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಮೂರು ವರ್ಷಗಳ ನಿಷೇಧವನ್ನು ಹೇರಲಾಗಿತ್ತು.

ಮೊದಲ ಓವರ್‌ನಲ್ಲೇ ಅತಿ ಹೆಚ್ಚು ಬಾರಿ ಸಿಕ್ಸರ್: ಟಾಪ್ ಐವರಲ್ಲಿ ಭಾರತೀಯನೇ ಸರ್ವಾಧಿಕಮೊದಲ ಓವರ್‌ನಲ್ಲೇ ಅತಿ ಹೆಚ್ಚು ಬಾರಿ ಸಿಕ್ಸರ್: ಟಾಪ್ ಐವರಲ್ಲಿ ಭಾರತೀಯನೇ ಸರ್ವಾಧಿಕ

ಮೇ 19 ರಂದು, ಅಕ್ಮಲ್ ಅವರು ವಿಧಿಸಿರುವ ಮೂರು ವರ್ಷಗಳ ನಿಷೇಧದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಪಿಸಿಬಿಯ ಶಿಸ್ತು ಸಮಿತಿಯು ಭ್ರಷ್ಟಾಚಾರದ ಆರೋಪ ಹಿನ್ನೆಲೆಯಲ್ಲಿ ಉಮರ್ ಅಕ್ಮಲ್ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಸಂಪೂರ್ಣವಾಗಿ ನಿಷೇಧಿಸಿ ಆದೇಶ ನೀಡಿತ್ತು.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಶಿಸ್ತು ಪಾಲನಾ ಸಮಿತಿ ಕೆಲ ದಿನಗಳ ಹಿಂದೆಯಷ್ಟೇ ಉಮರ್ ಅಕ್ಮಲ್ ಮೇಲಿದ್ದ ಆರೋಪಕ್ಕೆ ಸಾಕಷ್ಟು ಸಾಕ್ಷ್ಯಗಳಿದ್ದ ಹಿನ್ನೆಲೆಯಲ್ಲಿ ಮತ್ತು ಸೂಕ್ತ ಉತ್ತರವನ್ನು ನೀಡುವಲ್ಲಿ ಅಕ್ಮಲ್ ವಿಫಲರಾಗಿದ್ದ ಕಾರಣದಿಂದಾಗಿ ಮೂರು ವರ್ಷಗಳ ಶಿಕ್ಷೆಯನ್ನು ಪ್ರಕಟಿಸಿತ್ತು.

ಟಿ20 ವಿಶ್ವಕಪ್ ಇತಿಹಾಸದಲ್ಲಿರುವ 5 ಅತೀ ಕೆಟ್ಟ ಬೌಲಿಂಗ್ ದಾಖಲೆಗಳು!ಟಿ20 ವಿಶ್ವಕಪ್ ಇತಿಹಾಸದಲ್ಲಿರುವ 5 ಅತೀ ಕೆಟ್ಟ ಬೌಲಿಂಗ್ ದಾಖಲೆಗಳು!

ಪಾಕಿಸ್ತಾನ ಪ್ರೀಮಿಯರ್ ಲೀಗ್‌ನಲ್ಲಿ ಉಮರ್ ಅಕ್ಮಲ್ ಪಾಲ್ಗೊಂಡಿದ್ದಾಗ ಫಿಕ್ಸಿಂಗ್ ಮಾಡಿಕೊಳ್ಳುವ ಕಾರಣಕ್ಕೆ ಬುಕ್ಕಿಗಳು ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ಉಮರ್ ಅಕ್ಮಲ್ ಅವರನ್ನು ಸಂಪರ್ಕಿಸಿದ್ದರು. ಆದರೆ ಈ ವಿಚಾರವನ್ನು ಭ್ರಷ್ಟಾಚಾರ ನಿಗ್ರಹದಳಕ್ಕೆ ಮಾಹಿತಿ ನೀಡದ ಕಾರಣ ಉಮರ್ ಅಕ್ಮಲ್ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು.

Story first published: Saturday, June 6, 2020, 18:09 [IST]
Other articles published on Jun 6, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X