Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಅಂತಾರಾಷ್ಟ್ರೀಯ ಕ್ರಿಕೆಟ್‌ನ ಅಂಪೈರಿಂಗ್ ವೃತ್ತಿ ಜೀವನಕ್ಕೆ ಬ್ರೂಸ್ ಆಕ್ಸೆನ್‌ಫಾರ್ಡ್ ವಿದಾಯ

Umpire Bruce Oxenford retired from international cricket

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸುದೀರ್ಘ ಕಾಲ ಅಂಪೈರ್ ಆಗಿ ಕರ್ತವ್ಯ ನಿರ್ವಹಿಸಿದ ಬ್ರೂಸ್ ಆಕ್ಸೆನ್‌ಫಾರ್ಡ್ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ಮೂಲದವರಾದ ಬ್ರೂಸ್ ಆಕ್ಸೆನ್‌ಫಾರ್ಡ್ 15 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಂಪೈರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಬ್ರೂಸ್ ಆಕ್ಸೆನ್‌ಫಾರ್ಡ್ ಆಸ್ಟ್ರೇಲಿಯಾದ ದೇಶೀಯ ಕ್ರಿಕೆಟ್‌ನಲ್ಲಿ ಅಂಪೈರ್ ಆಗಿ ಮುಂದುವರಿಯಲಿದ್ದಾರೆ. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ರಿಸ್ಬೇನ್‌ಲ್ಲಿ ಇತ್ತೀಚೆಗೆ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಸರಣಿಯ ನಿರ್ಣಾಯಕ ಪಂದ್ಯವೇ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿದೆ.

2006ರಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಅಂಪೈರ್ ಆಗಿ ಮೊದಲ ಬಾರಿಗೆ ಕರ್ತವ್ಯ ನಿರ್ವಹಿಸಿದ್ದ ಬ್ರೂಸ್ ಆಕ್ಸೆನ್‌ಫಾರ್ಡ್ 2012ರ ಬಳಿಕ ಐಸಿಸಿ ಎಲೈಟ್ ಪ್ಯಾನೆಲ್ ಅಂಪೈರ್ ಆಗಿ ಕಾಣಿಸಿಕೊಂಡರು. 2008ರಲ್ಲಿ ಕ್ಯಾನ್‌ಬೆರಾದಲ್ಲಿ ನಡೆದ ಪಂದ್ಯದಲ್ಲಿ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಅಂಪೈರ್ ಆಗಿ ಕರ್ತವ್ಯ ನಿರ್ವಹಿಸಿದರು. 2010ರಲ್ಲಿ ಪಲ್ಲೆಕೆಲೆಯಲ್ಲಿ ನಡೆದ ಶ್ರೀಲಂಕಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸುದೀರ್ಘ ಮಾದರಿಯ ಕ್ರಿಕೆಟ್‌ನಲ್ಲಿ ಅಂಪೈರ್ ಆಗಿ ಕರ್ತವ್ಯ ನಿರ್ವಹಿಸಿದರು.

ಅಂಪೈರಿಂಗ್ ವೃತ್ತಿ ಜೀವನವನ್ನು ಆರಂಭಿಸುವ ಮುನ್ನ ಬ್ರೂಸ್ ಆಕ್ಸೆನ್‌ಫಾರ್ಡ್ ದೇಶೀಯ ಕ್ರಿಕೆಟ್‌ನಲ್ಲಿ ಕೆಲ ಕಾಲ ಆಡಿದ ಅನುಭವ ಹೊಂದಿದ್ದಾರೆ. 8 ಪ್ರಥಮದರ್ಜೆ ಪಂದ್ಯಗಳಲ್ಲಿ ಕಾಣಿಸಿಕೊಂಡ ಅವರು 18 ವಿಕೆಟ್‌ಗಳನ್ನು ತಮ್ಮ ಖಾತೆಯಲ್ಲಿ ಹೊಂದಿದ್ದಾರೆ.

"ಅಂಪೈರ್ ಆಗಿ ನನ್ನ ವೃತ್ತಿ ಜೀವನವನ್ನು ಹಿಂದಿರುಗಿ ನೋಡಿದರೆ ನನಗೆ ಹೆಮ್ಮೆಯೆನಿಸುತ್ತದೆ. ನಾನು 200 ಪಂದ್ಯಗಳ ಸನಿಹದವರೆಗೆ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರಿಂಗ್ ನಡೆಸಿದ್ದೇನೆ ಎಂಬುದನ್ನು ನಂಬಲು ನನಗೆ ಕಷ್ಟವಾಗುತ್ತಿದೆ. ಈ ವೃತ್ತಿಯನ್ನು ಆರಂಭಿಸಿದಾಗ ಇಷ್ಟು ಸುದೀರ್ಘ ಕಾಲ ಮುಂದುವರಿಯಲಿದೆ ಎಂದು ಯೋಚಿಸಿರಲಿಲ್ಲ" ಎಂದು ಬ್ರೂಸ್ ಆಕ್ಸೆನ್‌ಫಾರ್ಡ್ ವಿದಾಯವನ್ನು ಘೋಷಿಸಿದ ಬಳಿಕ ಪ್ರತಿಕ್ರಿಯಸಿದ್ದಾರೆ.

Story first published: Friday, January 29, 2021, 9:25 [IST]
Other articles published on Jan 29, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+